ಸೋಮವಾರದಿಂದ ರಸ್ತೆಗಿಳಿಯಲಿವೆ BMTC ಬಸ್​​ಗಳು, ಆದರೆ ಏನೆಲ್ಲಾ ನಿಯಮಗಳನ್ನು ಪಾಲಿಸಬೇಕು ಗೊತ್ತಾ?

ಬಸ್​ಗಳಲ್ಲಿ ಶೇ.50ರಷ್ಟು ಜನ ಮಾತ್ರ ಪ್ರಯಾಣಿಸಲು ಅನುಮತಿ. ಇನ್ನು ಗೂಗಲ್ ಪೇ, ಫೋನ್ ಪೇ ಮೂಲಕವೂ ಟಿಕೆಟ್ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರು ಸಾರಿಗೆ ಸಂಸ್ಥೆ

ಬೆಂಗಳೂರು ಸಾರಿಗೆ ಸಂಸ್ಥೆ

  • Share this:
ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ತಗ್ಗುತ್ತಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಲಾಕ್​​ಡೌನ್​ ಸಡಿಲಿಸಿ ಅನ್​​ಲಾಕ್​ ಮಾಡಲಾಗುತ್ತಿದೆ. ಜೂ.21 ಅಂದರೆ ಸೋಮವಾರದಿಂದ ಅನ್​​ಲಾಕ್​​ 2.O ಜಾರಿಯಾಗಲಿದ್ದು, ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಲಾಗಿದೆ. ಈ ಹಿನ್ನೆಲೆ ಬೆಂಗಳೂರಿನ ಬಸ್​ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಜೂನ್ 21ರಿಂದ BMTC ಬಸ್ ಸಂಚಾರ ಹಿನ್ನೆಲೆ ಬಿಎಂಟಿಸಿ  ಎಂಡಿ ಶಿಖಾ ಮಾಹಿತಿ ನೀಡಿದರು. ಈಗಾಗಲೇ ಜನ ಬಸ್ ಓಡಿಸುವ ಬಗ್ಗೆ ತುಂಬಾ ಡಿಮ್ಯಾಂಡ್ ಇಟ್ಟಿದ್ದಾರೆ. ಪ್ರಯಾಣಿಕರ ವೇದಿಕೆ ‌ಮುಂತಾದ ಸಂಘಟನೆಗಳಿಂದ ಬೇಡಿಕೆ ಇತ್ತು. ನಾವು ರೆಡಿ ಇದ್ದೇವೆ. ಸರ್ಕಾರದ ಅಧಿಕೃತ ಘೋಷಣೆ ಗೆ ನಾವು ಕಾಯುತ್ತಿದ್ದೇವೆ ಎಂದರು.

ಸರ್ಕಾರದ ಅನುಮತಿ ಸಿಕ್ಕರೆ ಮೊದಲ ಶಿಫ್ಟ್ ನಲ್ಲಿ 1,000 ಬಸ್ ಗಳು, ಎರಡನೇ ಶಿಫ್ಟ್​​ನಲ್ಲಿ 800 - 1000 ಬಸ್ ಗಳನ್ನು ರಸ್ತೆಗಿಳಿಸಲು ಸಿದ್ಧರಿದ್ದೇವೆ. ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ, ಸರ್ಕಾರ ಸಕಾರಾತ್ಮಕ ಪ್ರತಿಕ್ರಿಯೆ ಕೊಟ್ಟಿದೆ. ಸದ್ಯ 90% ಸಾರಿಗೆ ಸಿಬ್ಬಂದಿಗಳಿಗೆ ವ್ಯಾಕ್ಸಿನೇಷನ್‌ ಆಗಿದೆ. ಪ್ರಯಾಣಿಕರೂ ಪ್ರೊಟೋಕಾಲ್ ಪಾಲಿಸಬೇಕು. ಸಾಮಾಜಿಕ ಅಂತರಕ್ಕಾಗಿ ಶೇ 50% ಪ್ರಯಾಣಿಕರಿಗೆ ವ್ಯವಸ್ಥೆ ಮಾಡಲಾಗಿದೆ. ಬಸ್​ನಲ್ಲಿ ಪ್ರಯಾಣಿಸುವವರಿಗೆ ಮಾಸ್ಕ್ ಕಡ್ಡಾಯ ಎಂದು ಎಚ್ಚರಿಸಿದರು.

ಗೂಗಲ್ ಪೇ, ಫೋನ್ ಪೇ ಮೂಲಕವೂ ಟಿಕೆಟ್ ಪಡೆದುಕೊಳ್ಳುವ ವ್ಯವಸ್ಥೆ ಮಾಡುತ್ತೇವೆ. ಆರಂಭದಲ್ಲಿ 2000 ಬಸ್ ಗಳು ಅಪರೇಟ್​ ಮಾಡುತ್ತೇವೆ. ಅದಾದ ಬಳಿಕ ಜನ ದಟ್ಟಣೆ ನೋಡ್ಕೊಂಡು ಹೆಚ್ಚುವರಿ ಬಸ್​ಗಳನ್ನು ರಸ್ತೆಗೆ ಇಳಿಸಲಾಗುವುದು ಎಂದು ಬಿಎಂಟಿಸಿ  ಎಂಡಿ ಶಿಖಾ ತಿಳಿಸಿದರು.

ಏನೆಲ್ಲಾ ಷರತ್ತುಗಳೊಂದಿಗೆ ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಲು ಬಿಬಿಎಂಪಿ ಮುಂದಾಗಿದೆ ಅನ್ನೋದನ್ನಾ ನೋಡೋದಾದ್ರೆ,

  • ಶೇಕಡಾ 50ರಷ್ಟು ಬಸ್ಸುಗಳನ್ನ ಮಾತ್ರ ರಸ್ತೆಗಿಳಿಸಲು ಅನುಮತಿ.

  • ಬಸ್ಸುಗಳಲ್ಲಿ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಸಂಚಾರಕ್ಕೆ ಅನುಮತಿ.

  • ಮಾಸ್ಕ್,‌ ಸಾಮಾಜಿಕ ಅಂತರ ಕಡ್ಡಾಯ.

  • ಬಸ್ಸುಗಳಲ್ಲಿ ಒಂದು ಆಸನ ಬಿಟ್ಟು ಒಂದು ಆಸನದಲ್ಲಿ ಕುಳಿತು ಪ್ರಯಾಣಿಸಲು ಅವಕಾಶ.

  • ನಿಂತುಕೊಂಡು ಪ್ರಯಾಣಿಸೋದಕ್ಕೆ ಅವಕಾಶ ಇಲ್ಲ.

  • ಬಸ್​​ ನಿಲ್ದಾಣಗಳಲ್ಲಿ ಜನಸಂದಣಿ ಆಗದಂತೆ ನೋಡಿಕೊಳ್ಳುವ ಜವಬ್ದಾರಿ ಪೊಲೀಸ್​ ಇಲಾಖೆ ಮತ್ತು ಬಿಎಂಟಿಸಿ ಅಧಿಕಾರಿಗಳಿಗೆ.

  • ಮೆಜೆಸ್ಟಿಕ್, ಟರ್ಮಿನಲ್ಸ್, ಪ್ರಮುಖ ಬಸ್​ ನಿಲ್ದಾಣಗಳಲ್ಲಿ ಕೋವಿಡ್​ ಟೆಸ್ಟ್​ ಕಡ್ಡಾಯ.

  • ನೈಟ್ ಕರ್ಫ್ಯೂ ಆರಂಭಕ್ಕೂ ಮುನ್ನ 7 ಗಂಟೆ ಒಳಗೆ ಬಸ್​ ಸಂಚಾರ ನಿಲ್ಲಿಸಬೇಕು.ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:Kavya V
First published: