ಬೆಂಗಳೂರು (ಆ. 8): ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿ ಅಧಿಕಾರ ಚುಕ್ಕಾಣಿ ಹಿಡಿಯುವಂತೆ ಮಾಡಿದ್ದು ಬಿಎಸ್ ಯಡಿಯೂರಪ್ಪ ಎಂಬುದು ಎಲ್ಲರಿಗೂ ತಿಳಿದ ವಿಷಯವೇ. ಇದೇ ಕಾರಣಕ್ಕೆ ಅವರು, ರಾಜೀನಾಮೆ ನೀಡಿದ ಬಳಿಕವೂ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆ ಸರ್ಕಾರ ಆದೇಶ ನೀಡಿದೆ. ಸರ್ಕಾರದಲ್ಲಿ ಯಾವುದೇ ಹುದ್ದೆ ಹೊಂದಿರದಿದ್ದರೂ ಅವರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ ನೀಡಲು ಸರ್ಕಾರ ನಿರ್ಧರಿಸಿತ್ತು ಅಲ್ಲದೇ, ಬಿಜೆಪಿ ಅಧಿಕಾರ ಅವಧಿ ಮುಗಿಯುವವರೆಗೂ ಅವರು ಈ ಸ್ಥಾನಮಾನ ಅನುಭವಿಸಲಿದ್ದು, ಎಲ್ಲಾ ಸೌಲಭ್ಯವನ್ನು ನೀಡುವಂತೆ ಎಂದು ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಈ ಬಿಎಸ್ ಯಡಿಯೂರಪ್ಪ ಮಾತ್ರ ಈ ಸೌಲಭ್ಯವನ್ನು ನಯವಾಗಿ ನಿರಾಕರಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಬಿಎಸ್ ಯಡಿಯೂರಪ್ಪ, ನಿಕಟ ಪೂರ್ವ ಮುಖ್ಯಮಂತ್ರಿಗಳು ಇವರಿಗೆ ನೂತನವಾಗಿ ಪದಾರೋಹಣ ಮಾಡಿದ ಮುಖ್ಯಮಂತ್ರಿಗಳು ಪದವಿಯ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶಿಸಲಾಗಿದೆ, ಈ ಹಿಂದೆ ನಿಕಟ ಪೂರ್ವ ಮುಖ್ಯಮಂತ್ರಿಗಳಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳು ಮಾತ್ರ ನನಗೆ ನೀಡಬೇಕಾಗಿ ಕೋರುತ್ತೇನೆ ಎಂದಿದ್ದಾರೆ. ಅಲ್ಲದೇ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಸಂದೇಶ ರವಾನಿಸಿದ್ದಾರೆ.
ಇದನ್ನು ಓದಿ: ರಾಜೀನಾಮೆ ನೀಡಿದ ಬಳಿಕವೂ ಕಾವೇರಿ ನಿವಾಸದಲ್ಲೇ ಬಿಎಸ್ವೈ ವಾಸ್ತವ್ಯ; ಮಾಜಿ ಸಿಎಂಗೆ ಸಂಪುಟ ದರ್ಜೆ ಸ್ಥಾನಮಾನ
ಅಧಿಕಾರದಿಂದ ಕಳೆಗಿಳಿದರೂ ಸಂಪುಟ ದರ್ಜೆ ಸ್ಥಾನಮಾನದಲ್ಲಿ ಯಡಿಯೂರಪ್ಪ ಅವರು ಮುಂದುವರೆದರೆ ಅದು ಪ್ರತಿಪಕ್ಷಗಳ ಟೀಕೆಗೆ ಕಾರಣವಾಗುತ್ತದೆ. ರಾಜೀನಾಮೆ ನೀಡಿದ ಬಳಿವೂ ಅವರು ಸಚಿವ ಸೌಲಭ್ಯವನ್ನು ಅನುಭವಿಸಿದರೆ, ಅವರು ರಾಜೀನಾಮೆ ನೀಡಿದ್ದು, ಕಾಟಾಚಾರಕ್ಕೆ ಎಂಬ ಸಂದೇಶ ರವಾನೆಯಾಗುತ್ತದೆ. ಈ ರೀತಿ ಟೀಕೆ ಟಿಪ್ಪಣಿಗೆ ಗುರಿಯಾಗದಂತೆ ಅವರು ಮುನ್ನೆಚ್ಚರಿಕೆ ವಹಿಸಿ ಈ ಕ್ರಮಕ್ಕೆ ಮುಂದಾಗಿದ್ದಾರೆ. ಇದೇ ಹಿನ್ನಲೆಯಲ್ಲಿ ಬೊಮ್ಮಾಯಿ ಸರ್ಕಾರ ನೀಡಿದ್ದ ಸಂಪುಟ ದರ್ಜೆ ಸ್ಥಾನಮಾನವನ್ನು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಅಷ್ಟೇ ಅಲ್ಲದೇ ಅವರು ಶೀಘ್ರವಾಗಿ ಕಾವೇರಿ ನಿವಾಸವನ್ನು ತೊರೆದು ತಮ್ಮ ದವಳಗಿರಿ ನಿವಾಸಕ್ಕೆ ಸ್ಥಳಾಂತರ ಆಗುವ ತಯಾರಿ ನಡೆಸಿದ್ದಾರೆ ಎಂಬ ಮಾತು ಕೂಡ ಕೇಳಿ ಬಂದಿದೆ.
ಇನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟ ದರ್ಜೆ ಸ್ಥಾನಮಾನ ನಿರಾಕರಣೆ ಮಾಡಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ಧರಾಮಯ್ಯ, ಒಳ್ಳೆದು ಆಯಿತು, ಬಿಎಸ್ ಯಡಿಯೂರಪ್ಪಗೆ ಈ ಸ್ಥಾನ ಸೌಲಭ್ಯ ತಿರಸ್ಕರಿಸಿದ್ದು ಒಳ್ಳೆಯದೇ ಆಯ್ತು. ನಾನೇ ಅವರಿಗೆ ಹೇಳೋಣ ಎಂದುಕೊಂಡಿದ್ದೆ ಎಂದರು.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು
ನಿಮ್ಮ ಜಿಲ್ಲೆಯಿಂದ (ಬೆಂಗಳೂರು ನಗರ)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ