ಲೇಡಿ ಪೊಲೀಸ್ನಿಂದ ರೇಪ್ ಬೆದರಿಕೆ; ಜನತಾ ದರ್ಶನ ವೇಳೆ ಸಿಎಂ ಮುಂದೆ ಮಹಿಳೆ ಅಳಲು
ಮಹಿಳಾ ಸಬ್ ಇನ್ಸ್ಪೆಕ್ಟರ್ವೊಬ್ಬರು ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆಯೊಬ್ಬರು ಸಿಎಂ ಜನತಾ ದರ್ಶನದ ವೇಳೆ ಬಸವರಾಜ ಬೊಮ್ಮಾಯಿ ಅವರ ಮುಂದೆ ಅಳಲು ತೋಡಿಕೊಂಡ ಘಟನೆ ನಡೆಯಿತು.
ಬೆಂಗಳೂರು, ಆ. 19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಜನತಾ ದರ್ಶನ ನಡೆಸಿದ ವೇಳೆ ಮಹಿಳೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಗಮನ ಸೆಳೆಯಿತು. ಆರ್ ಟಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬೊಮ್ಮಾಯಿ ಅವರು ಜನತಾ ದರ್ಶನ ನಡೆಸಿ ಸಾರ್ವುಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ವೇಳೆ ಮಹಿಳೆಯೊಬ್ಬರು ಸಿಎಂಗೆ ಅಹವಾಲು ಸಲ್ಲಿಸಲು ಸಾಕಷ್ಟು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಸಿಎಂ ತಮ್ಮ ಕಾರಿನಲ್ಲಿ ಅಲ್ಲಿಂದ ಹೊರಡತೊಡಗಿದಾಗ ಆ ಮಹಿಳೆ ಆಕ್ರೋಶ ವ್ಯಕ್ತಪಡಿಸಿದರು. ಮುಖ ನೋಡಿ ಮಣೆ ಹಾಕಬಾರದು ಎಂದು ಗೊಣಗಿದರು. ಇದನ್ನ ಕೇಳಿಸಿಕೊಂಡ ಸಿಎಂ ಅವರು ಕಾರನ್ನ ನಿಲ್ಲಿಸಿ ಅ ಮಹಿಳೆಯ ಸಮಸ್ಯೆ ಆಲಿಸಿ ಅವರಿಂದ ಅಹವಾಲು ಸ್ವೀಕರಿಸಿದರು.
ಸಿಎಂ ಬಂದು ಕೇಳಿದಾಗ ಆ ಮಹಿಳೆ ತಮಗೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರಿಂದ ಆಗುತ್ತಿರುವ ತೊಂದರೆ ಬಗ್ಗೆ ಹೇಳಿಕೊಂಡರು. ತಮ್ಮ ಪ್ರಕರಣದಲ್ಲಿ ಮಹಿಳಾ ಸಬ್ ಇನ್ಸ್ಪೆಕ್ಟರ್ ಅವರು ಚಾರ್ಜ್ ಶೀಟ್ ಮುಚ್ಚಿಡುತ್ತಿದ್ದಾರೆ. ಅಲ್ಲದೇ ತನಗೆ ರೇಪ್ ಬೆದರಿಕೆ ಹಾಕುತ್ತಿದ್ದಾರೆ ಎಂದು ಆ ಮಹಿಳೆ ಗಂಭೀರ ಆರೋಪ ಮಾಡಿದರು. ಆ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಕ್ರಮ ಕೈಗೊಂಡು ಸಸ್ಪೆಂಡ್ ಮಾಡಿಸಿ ಎಂದು ಸಿಎಂಗೆ ಒತ್ತಾಯ ಹೇರಿದರು ಆ ಮಹಿಳೆ.
ಮಹಿಳೆಯ ಅಹವಾಲು ಸ್ವೀಕರಿಸಿದ ಸಿಎಂ ಬಸವರಾಜು ಬೊಮ್ಮಾಯಿ, ಈ ಮಹಿಳೆಯ ವಿಚಾರವನ್ನು ಪರಿಶೀಲಿಸಿ ಸೂಕ್ತ ಕ್ರಮಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿ ಎಂದು ತಮ್ಮ ಜೊತೆಯಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿ ಅಲ್ಲಿಂದ ಹೊರಟರು.
(ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.)