ಸದ್ಯಕ್ಕಿಲ್ಲ Lockdown​; ಇನ್ನೆರಡು ವಾರ ಕಾದು ನೋಡಿ ಬಳಿಕ ತೀರ್ಮಾನ: ಸಿಎಂ

ಪಾಸಿಟಿವ್ ದರವಿರುವ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಲಾಗಿದ್ದು, ಸದ್ಯಕ್ಕೆ ಲಾಕ್ ಡೌನ್ ನಂತಹ ಕಠಿಣ ಕ್ರಮ ಬೇಡ.

ಪಾಸಿಟಿವ್ ದರವಿರುವ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಲಾಗಿದ್ದು, ಸದ್ಯಕ್ಕೆ ಲಾಕ್ ಡೌನ್ ನಂತಹ ಕಠಿಣ ಕ್ರಮ ಬೇಡ.

ಪಾಸಿಟಿವ್ ದರವಿರುವ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಲಾಗಿದ್ದು, ಸದ್ಯಕ್ಕೆ ಲಾಕ್ ಡೌನ್ ನಂತಹ ಕಠಿಣ ಕ್ರಮ ಬೇಡ.

  • Share this:

    ಬೆಂಗಳೂರು (ಆ. 14): ಕೋವಿಡ್​ ಮೂರನೇ ಅಲೆ ನಿಯಂತ್ರಣ ಸಂಬಂಧ ಇಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಕೋವಿಡ್​ ತಾಂತ್ರಿಕ  ತಜ್ಞರು, ಅಧಿಕಾರಿಗಳೊಂದಿಗೆ ಮುಂಜಾಗ್ರತಾ ಕ್ರಮಗಳ ಕುರಿತು ಗಂಭೀರ ಚರ್ಚೆ ನಡೆಸಿದರು. ಇನ್ನು ರಾಜ್ಯದಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆ ಆಗಸ್ಟ್​ 15ರ ಬಳಿಕ ಕಠಿಣ ನಿಲುವು ಕೈಗೊಳ್ಳಲಾಗುತ್ತದೆ ಎನ್ನಲಾಗಿತ್ತು. ಆದರೆ, ಸದ್ಯ ಸೋಂಕು ನಿಯಂತ್ರಣದಲ್ಲಿದ್ದು, ಪ್ರಸ್ತುತ ರಾಜ್ಯದಲ್ಲಿರುವ ಈಗಿರುವ ನಿಯಮಗಳನ್ನೇ ಮುಂದುವರೆಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಹೊಸದಾಗಿ ಯಾವುದೇ ನಿಯಮವಿಲ್ಲ. ಈಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ನೈಟ್​ ಕರ್ಫ್ಯೂ ಹಾಗೂ ಎಂಟು ಗಡಿ ಜಿಲ್ಲೆಗಳಲ್ಲಿ ವೀಕೆಂಡ್​ ಕರ್ಫ್ಯೂ ಜಾರಿಯಲ್ಲಿದ್ದು, ಇದನ್ನೆ ಮುಂದುವರೆಸಬೇಕು. ಹೊಸದಾಗಿ ಯಾವುದೇ ನಿಯಮಗಳಿಲ್ಲ. ಈಗ ಜಾರಿಯಲ್ಲಿರುವ ನಿಯಮಗಳನ್ನೇ ಸರಿಯಾಗಿ ಪಾಲಿಸುವಂತೆ ಅವರು ಸೂಚನೆ ನೀಡಿರುವ ಅವರು ಅ. 30ರವರೆಗೆ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ. 


    ಇದೇ ವೇಳೆ ಎರಡನೇ ಅಲೆಯಲ್ಲಿ ಆದ ಅನಾಹುತ ಮೂರನೇ ಅಲೆಯಲ್ಲಿ ಅಗದಂತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಯಿತು. ಜೊತೆಗೆ ಆಕ್ಸಿಜನ್ , ಐಸಿಯು ಬೆಡ್, ಆ್ಯಂಬುಲೆನ್ಸ್ , ಕೊರತೆ ಆಗದಂತೆ ಕ್ರಮ ಕೈಗೊಂಡು ಮೂರನೇ ಅಲೆಯ ಬಗ್ಗೆ ಪೂರ್ವ ತಯಾರಿ ಮಾಡಿಕೊಳ್ಳುವಂತೆ ತಜ್ಞರ ಸಮಿತಿ ಎಚ್ಚರಿಕೆ ನೀಡಿದೆ.


    ಮಕ್ಕಳ ಅಸ್ಪತ್ರೆಗೆ ಹೆಚ್ಚಿನ ಆದ್ಯತೆ ನೀಡುವಂತೆ‌ ಸೂಚನೆ ನೀಡಲಾಗಿತ್ತು. ಅನ್ಯ ರಾಜ್ಯಗಳ ಓಡಾಟದ ಮೇಲೆ ಹೆಚ್ಚಿನ‌ ನಿಗಾ ಇಡುವಂತೆ ತಿಳಿಸಲಾಗಿದೆ. ಅನ್ಯ ರಾಜ್ಯಗಳಿಂದ ಬರುವವರಿಗೆ ಗಡಿ ಪ್ರವೇಶದ ವೇಳೆ ಕೋವಿಡ್​​ ಪರೀಕ್ಷೆ ಕಡ್ಡಾಯವಾಗಿ ಮಾಡಬೇಕು ಎಂದು ಸಿಎಂ ಸೂಚಿಸಿದರು. ಅಲ್ಲದೇ ಇದೇ ವೇಳೆ ಅವರು ಜಿಲ್ಲಾವಾರು ಕೋವಿಡ್ ನ ಅಂಕಿಅಂಶಗಳ ಮಾಹಿತಿಯನ್ನು ಪಡೆದರು.


    ಇದನ್ನು ಓದಿ: ಗೃಹ ಮಂತ್ರಿಗಳ ಬಳಿಕ ಝೀರೋ ಟ್ರಾಫಿಕ್​ ಬೇಡ ಎಂದ ಸಿಎಂ ಬೊಮ್ಮಾಯಿ


    ಪಾಸಿಟಿವ್ ದರವಿರುವ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಲಾಗಿದ್ದು, ಸದ್ಯಕ್ಕೆ ಲಾಕ್ ಡೌನ್ ನಂತಹ ಕಠಿಣ ಕ್ರಮ ಬೇಡ. ಅಗತ್ಯಬಿದ್ದರೆ ಮಾತ್ರ ವಿಕೇಂಡ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಯೋಚಿಸೋಣ.


    ಹಬ್ಬಗಳ ಸಾಲಿರುವ ಹಿನ್ನಲೆ ಹಬ್ಬದ ದಿನದಲ್ಲಿ ಜನ ಒಂದೇಡೆ ಸೇರದಂತೆ ಎಚ್ಚರವಹಿಸಬೇಕು. ಯಾವುದೇ ರೀತಿ ಜನರಿಗೆ ತೊಂದರೆಯಾಗಬಾರದು.ಹಬ್ಬಗಳ ಆಚರಣೆ ಈ ಹಿಂದಿನ ಮಾರ್ಗಸೂಚಿಗಳೇ ಮುಂದುವರಿಯಲಿದೆ. ರಾಜ್ಯದಲ್ಲಿ ಕೋವಿಡ್​ ಪರೀಕ್ಷಾ ಸಂಖ್ಯೆಯನ್ನು ಹೆಚ್ಚು ಹೆಚ್ಚು ಮಾಡಿಸಬೇಕು ಜೊತೆಗೆ ಲಸಿಕೆ ವಿತರಣೆಗೂ ವೇಗ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.


    ಕೋವಿಡ್​​ ಅಲೆಯನ್ನು ಹೇಗೆ ನಿರ್ವಹಿಸಬೇಕು ಎಂಬ ಕುರಿತು ಚರ್ಚೆ ನಡೆಸಲಾಯಿತು. ಎರಡನೇ ಅಲೆ ಕಡಿಮೆ ಆದರೂ ಪ್ರಕರಣ ಏರಿಕೆ ಕಂಡು ಬಂದಿದೆ. ಕೋವಿಡ್ ಸಂಬಂಧ ಸಭೆ ನಡೆದಿದೆ. ವೈಜ್ಞಾನಿಕವಾದ, ಅಂಕಿ ಅಂಶಗಳ ಸಮೇತ, ಅಂತರಾಷ್ಟ್ರೀಯ, ರಾಷ್ಟ್ರೀಯ ಟ್ರೆಂಡ್ ಬಗ್ಗೆ ಕೋವಿಡ್ ಸ್ಥಿತಿಗತಿ ಬಗ್ಗೆ ತಿಳಿಸಿದ್ದಾರೆ. ಟಾಸ್ಕ್ ಪೋರ್ಸ್ ಕಮಿಟಿ ಅಂಕಿ ಅಂಶ ನೀಡಿದೆ. ಕೇರಳ ಮತ್ತು ಮಹಾರಾಷ್ಟ್ರ ಕೊರೊನಾ ಸ್ಥಿತಿಗತಿ ಬಗ್ಗೆ ತಿಳಿಸಿದ್ದಾರೆ ಅವರ ಅನುಭವ ಅಂಕಿ ಅಂಶ ವಿವರಿಸಿದ್ದಾರೆ ಎಂದರು


    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

    Published by:Seema R
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು