ಏಳು ವಿಚಾರಗಳ ಕುರಿತಾಗಿ ತಾಂತ್ರಿಕ ಸಲಹಾ ಸಮಿತಿ ಜೊತೆ CM Bommai ಮಹತ್ವದ ಸಭೆ

ಮುಖ್ಯಮಂತ್ರಿಗಳು, ತಾಂತ್ರಿಕಾ ಸಲಹಾ ಸಮಿತಿ ಜೊತೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಏಳು ವಿಷಯಗಳ ಕುರಿತು ಚರ್ಚೆ ನಡೆಯಲಿದೆ.

ಸಿಎಂ ಬಸವರಾಜ್ ಬೊಮ್ಮಾಯಿ

ಸಿಎಂ ಬಸವರಾಜ್ ಬೊಮ್ಮಾಯಿ

  • Share this:
ಫೆಬ್ರವರಿಯಲ್ಲಿ ಕೊರೊನಾ ಪ್ರಕರಣಗಳ (Corona Cases) ಸಂಖ್ಯೆ ಪೀಕ್ ಗೆ ಹೋಗುತ್ತೆ ಎನ್ನಲಾಗುತ್ತಿದೆ. ಈ ಹಿನ್ನೆಲೆ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಇಂದು ಸಂಜೆ 4 ಗಂಟೆಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಮುಂದೆ ತೆಗೆದುಕೊಳ್ಳಬಹುದಾ ಕ್ರಮಗಳು ಮತ್ತು ಇಷ್ಟು ದಿನದಿಂದ ತೆಗೆದುಕೊಂಡಿರುವ ನಿರ್ಧಾರಗಳ ಪರಿಣಾಮಗಳೇನು ಎಂಬುದರ ಕುರಿತ ಚರ್ಚೆಗಳು ನಡೆಸಲಿದ್ದಾರೆ. ಇದಕ್ಕೂ ಮೊದಲು ಮುಖ್ಯಮಂತ್ರಿಗಳು, ತಾಂತ್ರಿಕಾ ಸಲಹಾ ಸಮಿತಿ ಜೊತೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಏಳು ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಈ ಎರಡೂ ಸಭೆಗಳು ಪ್ರಮುಖವಾಗಿದ್ದು, ಕೊರೊನಾ ನಿಯಮಗಳು (Corona Rules) ಮತ್ತಷ್ಟು ಕಠಿಣವಾಗುತ್ತಾ ಅನ್ನೋ ಪ್ರಶ್ನೆಗೆ ಇಂದು ಸಂಜೆ ಉತ್ತರ ಸಿಗಲಿದೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ರೂ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇದೆ. ಹಾಗಾಗಿ ಸದ್ಯದ ನಿಯಮಗಳು ಈ ತಿಂಗಳ ಅಂತ್ಯಕ್ಕೆ ಮುಂದುವರಿಸುವ ಸಾಧ್ಯತೆಗಳಿವೆ. ಹೀಗಾಗಿ ಟಫ್ ರೂಲ್ಸ್ ನ ಅಗತ್ಯತೆ ಸದ್ಯಕ್ಕೆ ಇಲ್ಲ ಎಂದು ಸಲಹಾ ಸಮಿತಿ ಅಭಿಪ್ರಾಯಪಟ್ಟಿದೆ  ಎಂದು ತಿಳಿದು ಬಂದಿದೆ.

ಯಾವ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ?

1.ಒಮೈಕ್ರಾನ್ ವೈರಸ್ ಪತ್ತೆ ಮಾಡುವ ಕಿಟ್ ಒಮಿಶ್ಯೂರ್ ಖರೀದಿಸುವುದು

2 ಮಕ್ಕಳ ಚಿಕಿತ್ಸೆ, ಆರೈಕೆಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸುವುದು

3.ಆಯುರ್-ರಕ್ಷಾ ಕಿಟ್ ಖರೀದಿ ಮಾಡುವುದು

4.ಮಕ್ಕಳಿಗೆ ಪ್ರತ್ಯೇಕ ಕೋವಿಡ್ ಆಸ್ಪತ್ರೆ ಮೀಸಲಿಡುವುದು

5 ಮಕ್ಕಳಿಗೆ ಹೋಮ್ ಐಸೋಲೇಷನ್ ಕಿಟ್ ನಲ್ಲಿ ಯಾವ್ಯಾವ ಔಷಧ ನೀಡಬೇಕು

6.ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಜಾರ್ಜ್ ಅಗುವವರಿಗೆ ಹೊಸ ಮಾರ್ಗಸೂಚಿ ಪ್ರಕಟಿಸುವುದು

7.ಆರೋಗ್ಯ ಸೌಧ ಕಟ್ಟಡದಲ್ಲಿ ಕೊರೋನಾ ನಿರ್ವಹಣಾ ಘಟಕ ಸ್ಥಾಪಿಸುವುದು

ಇದನ್ನೂ ಓದಿ:  Corona Virus: ಇಂದು ಸಂಜೆ ಸಿಎಂ‌ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಸಿದ್ಧತೆ ಕುರಿತು ಸಭೆ

ಕೊರೊನಾ ಸ್ಥಿತಿ ಬಗ್ಗೆ ವರದಿ ಪಡೆಯಲಿರುವ ಸಿಎಂ

ಕೋವಿಡ್ ನಿಯಂತ್ರಣಕ್ಕೆ  ಈಗಾಗಲೇ ಸರ್ಕಾರ ಕೈಗೊಂಡ  ಕ್ರಮದ ಬಗ್ಗೆ ಅಧಿಕಾರಿಗಳು ಮತ್ತು ಸಚಿವರು ಮಾಹಿತಿ ನೀಡಲಿದ್ದಾರೆ. ಎಲ್ಲಾ ಜಿಲ್ಲೆಯ ಕೊರೊನಾ ಸ್ಥಿತಿ ಬಗ್ಗೆ ಸಿಎಂ ವರದಿ ಪಡೆಯಲಿದ್ದಾರೆ. ನೈಟ್ ಕರ್ಫ್ಯೂ , ವೀಕೆಂಡ್ ಕರ್ಫ್ಯೂ ಮತ್ತಷ್ಟು  ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ.  1ರಿಂದ 9 ನೇ ತರಗತಿ ಶಾಲೆಗಳನ್ನು ಬಂದ್ ಮಾಡುವ ಚರ್ಚೆ ಸಾಧ್ಯತೆ ಇದೆ.ಮೂರನೇ ಅಲೆ ಹೆಚ್ಚಾಗಿ ಮಕ್ಕಳಲ್ಲಿ ಕಂಡು ಬರುತ್ತಿರುವ ಹಿನ್ನೆಲೆ ಆನ್ ಲೈನ್ ಕ್ಲಾಸ್ ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ಶಾಲೆ ಬಂದ್ ಮಾಡುವ ಜವಾಬ್ದಾರಿಯನ್ನು ಸರ್ಕಾರ ಜಿಲ್ಲಾಧಿಕಾರಿಗಳಿಗೆ ವರ್ಗಾಯಿಸಿದೆ. ಇನ್ನು ಜಾರಿಗೆ ತಂದಿರುವ ಕಠಿಣ ನಿಯಮ, ವೀಕೆಂಡ್ ಕರ್ಫ್ಯೂ, 50-50 ರೂಲ್ಸ್ ಎಷ್ಟು ಪರಿಣಾಮಾಕಾರಿ ಆಗಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿಗಳು ಪಡೆಯಲಿದ್ದಾರೆ.

ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಭದ್ರತೆ

ಗಡಿ ಜಿಲ್ಲೆಗಳಲ್ಲಿ ಇನ್ನೂ ಹೆಚ್ಚಿನ ಕಠಿಣ ಕ್ರಮ ಮತ್ತು ವೀಕೆಂಡ್ ಕರ್ಫ್ಯೂಗೆ ಹೋಟೆಲ್ ಮಾಲೀಕರ ವಿರೋಧದ ಬಗ್ಗೆ ಇಂದು ನಡೆಯುವ ಸಭೆಯಲ್ಲಿ ಚರ್ಚೆಗಳು ನಡೆಯಲಿವೆ.

ಇದನ್ನೂ ಓದಿ:  Omicron Effect: ಶೇ. 20 ರಷ್ಟು ವಿಮಾನ ಹಾರಾಟ ರದ್ದುಗೊಳಿಸಿದ ಇಂಡಿಗೋ

ಸಂಜೆ ಸಭೆಯಲ್ಲಿ ಯಾರೆಲ್ಲ ಭಾಗಿ?

ಮುಖ್ಯಮಂತ್ರಿಗಳಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ವರ್ಚುವಲ್ ಮೂಲಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಆರೋಗ್ಯ ಸಚಿವ ಸುಧಾಕರ್, ಆರ್ ಅಶೋಕ್, ಅಶ್ವಥ್ ನಾರಾಯಣ, ಗೃಹ ಸಚಿವ ಆರಗ ಜ್ಞಾನೇಂದ್ರ, ಬಿ ಸಿ ನಾಗೇಶ್ ಸೇರಿದಂತೆ ತಾಂತ್ರಿಕ ಸಲಹಾ ಸಮಿತಿ ತಜ್ಞರು ಹಾಗೂ ಬಿಬಿಎಂಪಿ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.500ರ ಗಡಿ ದಾಟಿದ ಒಮೈಕ್ರಾನ್ ಕೇಸ್‌ಗಳು

ರಾಜ್ಯದಲ್ಲಿ ಇಂದು 69 ಹೊಸ ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ.  ರಾಜ್ಯದಲ್ಲಿ ಒಮೈಕ್ರಾನ್ ಪ್ರಕರಣಗಳು ಸಂಖ್ಯೆ 548 ಕ್ಕೇರಿಯಾಗಿದೆ. ಇದುವರೆಗೂ ಕೇವಲ 26 ಜನರು ಮಾತ್ರ ಗುಣಮುಖರಾಗಿದ್ದು, ರಿಕವರಿ ರೇಟ್ ಕಡಿಮೆ ಇದೆ.
Published by:Mahmadrafik K
First published: