Mekedatu Project : ಮೇಕೆದಾಟು ಯೋಜನೆಗೆ ಸಹಕಾರ ಕೋರಿ ತ.ನಾಡು ಸಿಎಂಗೆ ಬಿಎಸ್​ವೈ ಪತ್ರ

ಸುಪ್ರೀಂ ಕೋರ್ಟ್ ಆದೇಶದನ್ವಯ ಯೋಜನೆ ಕೈಗೆತ್ತಿಕೊಳ್ಳಲಿದ್ದೇವೆ. ಈ ಯೋಜನೆಯಿಂದ ತಮಿಳುನಾಡಿನ ರೈತರಿಗೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.

CM BSY

CM BSY

 • Share this:
  ಬೆಂಗಳೂರು (ಜು. 3):  ರಾಜ್ಯದ ಮಹತ್ವಕಾಂಕ್ಷೆಯ ಮೇಕೆದಾಟು ಯೋಜನೆಗೆ ಈಗಾಗಲೇ ಎನ್​ಜಿಟಿ ಹಸಿರು ನಿಶಾನೆ ತೋರಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದೆ. ಆದರೆ ಇದಕ್ಕೆ ತಮಿಳುನಾಡು ಸರ್ಕಾರ ಅಡ್ಡಿ ಪಡಿಸಿದೆ. ಇದೇ ಹಿನ್ನಲೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ತಮಿಳುನಾಡು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಸುಪ್ರೀಂ ಕೋರ್ಟ್​ ಆದೇಶದ ಅನ್ವಯ ಈ ಯೋಜನೆ ಆರಂಭಿಸಿದ್ದು, ಈ ಯೋಜನೆಗೆ ಸಹಕಾರ ನೀಡುವಂತೆ ಕೋರಿ ಬಿಎಸ್​ ಯಡಿಯೂರಪ್ಪ ಅವರು ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್​ ಅವರಿಗೆ ಪತ್ರ ಬರೆದಿದ್ದಾರೆ.

  ಮೇಕೆದಾಟು ಕುಡಿಯುವ ನೀರಿನ ಯೋಜನೆಯಿಂದ ಎರಡು ರಾಜ್ಯಗಳಿಗೂ ಸಹಾಯವಾಗಿದೆ, ಸುಪ್ರೀಂ ಕೋರ್ಟ್ ಆದೇಶದನ್ವಯ ಯೋಜನೆ ಕೈಗೆತ್ತಿಕೊಳ್ಳಲಿದ್ದೇವೆ. ಸುಪ್ರೀಂ ಕೋರ್ಟ್ 400ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ಅವಕಾಶ ನೀಡಿದ್ದು, 4.75 ಟಿಎಂಸಿ ನೀರು ಕುಡಿಯುವ ನೀರಿಗೆ ಅವಕಾಶ ನೀಡಿತ್ತು. ಈ ಯೋಜನೆಯಿಂದ ತಮಿಳುನಾಡಿನ ರೈತರಿಗೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.  ಈ ಯೋಜನೆ ಸಂಬಂಧ ಈಗಾಗಲೇ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದೆ. ನಾವೂ ಕೂಡ ಯೋಜನೆಗೆ ಅನುಮತಿ ಕೋರಿ ಕೇಂದ್ರ ಸರ್ಕಾರದ ಮುಂದೆ ಮನವಿ ಸಲ್ಲಿಸಿದ್ದೇವೆ. ತಮಿಳು ನಾಡು ಕೂಡ ಕಾವೇರಿ ನೀರನ್ನ ಬಳಕೆ ಮಾಡಿಕೊಂಡು ಪವರ್ ಪ್ರಾಜೆಕ್ಟ್ ಆರಂಭಿಸಲು ನಿರ್ಧರಿಸಿದೆ. ಈ ಹಿನ್ನಲೆ ಮೇಕೆದಾಟು ಯೋಜನೆಗೆ ಅಡ್ಡಿ ಪಡಿಸದಂತೆ ಎರಡೂ ರಾಜ್ಯದ ನಡುವೆ ಸಾಮರಸ್ಯ ಮುಂದುವರೆಸಲು ಪತ್ರದ ಮೂಲಕ ಮನವಿ ಮಾಡಿದ್ದಾರೆ.

  ಇದನ್ನು ಓದಿ: ಕಲ್ಪನಾ ಚಾವ್ಲಾ ಬಳಿಕ ಬಾಹ್ಯಾಕಾಶಯಾನಕ್ಕೆ ಸಜ್ಜಾದ ಆಂಧ್ರದ ಗುಂಟೂರು ಮೂಲದ ಸಿರಿಶಾ

  ಕಾವೇರಿಯ ಹೆಚ್ಚುವರಿ ನೀರನ್ನು ತಡೆದು ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳ ಜನರಿಗೆ ಕುಡಿಯುವ ನೀರು ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ, ಈ ಯೋಜನೆಗೆ ಹಲವು ವರ್ಷಗಳಿಂದ ತಮಿಳುನಾಡು ಸರ್ಕಾರ ಅಡ್ಡಿ ಮಾಡುತ್ತಲೇ ಇದೆ. ಈ ಸಂಬಂಧ ರಾಜ್ಯದ ಹಿತಾಸಕ್ತಿಯಾಗಿ ಈ ಯೋಜನೆ ಅಗತ್ಯವಾಗಿದ್ದು, ಇದರಿಂದ ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶಗಳಿಗೆ ಯಾವುದೇ ಹಾನಿಯಾಗುವುದಿಲ್ಲ. ಈ ಯೋಜನೆಗೆ ಸಹಕಾರ ನೀಡುವಂತೆ ಅವರು ಪತ್ರದ ಮುಖೇನ ತಿಳಿಸಿದ್ದಾರೆ.

  ಇದನ್ನು ಓದಿ: ಮುಂದಿನ ಸಿಎಂ ಎಚ್​ಡಿಕೆ; ಶಾಸಕರಾಗಲಿರುವ ನಿಖಿಲ್​; ವಿನಯ್​ ಗುರೂಜಿ ಭವಿಷ್ಯ

  ತಮಿಳುನಾಡು ಅರ್ಜಿ ವಜಾಗೊಳಿಸಿದ್ದ ಎನ್​ಜಿಟಿ

  ಮೇಕೆದಾಟು ಯೋಜನೆ ಸ್ಥಳ ಪರಿಶೀಲನೆಗಾಗಿ ಸಮಿತಿ ರಚಿಸಿ ದಕ್ಷಿಣ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ಕರ್ನಾಟಕ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್​ಜಿಟಿ) ಈ ದೂರನ್ನು ವಜಾಗೊಳಿಸಿ ಆದೇಶ ನೀಡಿತ್ತುಮೇಕೆದಾಟು ಯೋಜನೆ ವಿರೋಧಿಸಿ ತಮಿಳು ನಾಡು ಸರ್ಕಾರ ಸುಪ್ರೀಂ ಕೋರ್ಟ್​ಗೆ ಈಗಾಗಲೇ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಬಾಕಿ ಇದೆ. ಹಾಗಾಗಿ ಎನ್​ಜಿಟಿ ದಕ್ಷಿಣ ಪೀಠ ಸ್ವಯಂ ಪ್ರೇರಣೆಯ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಲು ಅವಕಾಶವಿಲ್ಲ ಎಂದು ತಿಳಿಸಿದೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು
  Published by:Seema R
  First published: