HOME » NEWS » State » BENGALURU URBAN CM YEDIYURAPPA CHANGE MLA ARVIND BELLAD FLIES TO DELHI KVD

ಯಡಿಯೂರಪ್ಪ ವಿರೋಧಿ ಬಣ ಮತ್ತೆ ಆ್ಯಕ್ಟೀವ್​​? ಶಾಸಕ ಅರವಿಂದ್ ಬೆಲ್ಲದ್ ದೆಹಲಿ ಭೇಟಿ ಮರ್ಮವೇನು?

ಜೂನ್ 16 ಅಥವಾ 17ರಂದು ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರೋಧಿ ಬಣ ಸಕ್ರಿಯವಾಗಿದೆ ಎನ್ನಲಾಗುತ್ತಿದೆ.

Kavya V | news18-kannada
Updated:June 12, 2021, 2:59 PM IST
ಯಡಿಯೂರಪ್ಪ ವಿರೋಧಿ ಬಣ ಮತ್ತೆ ಆ್ಯಕ್ಟೀವ್​​? ಶಾಸಕ ಅರವಿಂದ್ ಬೆಲ್ಲದ್ ದೆಹಲಿ ಭೇಟಿ ಮರ್ಮವೇನು?
ಅರವಿಂದ್​ ಬೆಲ್ಲದ್​​, ಸಿಎಂ ಯಡಿಯೂರಪ್ಪ
  • Share this:
ಬೆಂಗಳೂರು: ಸಿಎಂ ಬಿ.ಎಸ್​.ಯಡಿಯೂರಪ್ಪ ನಾಯಕತ್ವ ಬದಲಾವಣೆ ವಿಚಾರ ಕಳೆದ ಕೆಲ ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಸುಳಿದಾಡುತ್ತಲೇ ಇದೆ. ಖುದ್ದು ಸಿಎಂ ಯಡಿಯೂರಪ್ಪ ಇನ್ನು ಎರಡು ವರ್ಷಗಳ ಕಾಲ ತಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಹೇಳಿಕೆ ನೀಡಿದ ಬಳಿಕವೂ ತೆರೆಮರೆಯ ರಾಜಕೀಯ ತಣ್ಣಗಾಗಿಲ್ಲ. 2 ದಿನಗಳ ಹಿಂದೆ ಮಾಧ್ಯಮಗಳ ಎದುರು ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕೂಡ ಸ್ಪಷ್ಟ ಪಡಿಸಿದ್ದರು. ಇನ್ನೇನು ನಾಯಕತ್ವ ಬದಲಾವಣೆ ವಿಷಯ ತಣ್ಣಗಾಯಿತು ಅನ್ನುವಷ್ಟರಲ್ಲಿ ಯಡಿಯೂರಪ್ಪ ವಿರೋಧಿ ಬಣ ಆಕ್ಟೀವ್​ ಆಗಿದೆ. ದೆಹಲಿಯಲ್ಲಿ ವರಿಷ್ಠ ಭೇಟಿಗೆ ಮುಂದಾಗಿರುವುದು ಮತ್ತೆ ನಾಯಕತ್ವ ಬದಲಾವಣೆ ವಿಚಾರ ಮುನ್ನಲೆಗೆ ಬಂದಿದೆ.

ಹೈಕಮಾಂಡ್ ಮೇಲೆ ಒತ್ತಡ ಹೇರಲು ದೆಹಲಿಗೆ ಶಾಸಕ ಅರವಿಂದ ಬೆಲ್ಲದ್ ಭೇಟಿ ನೀಡಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಹೆಚ್ಚುತ್ತಿರುವ ಒತ್ತಡ ಹಾಕಲು ತೆರಳಿದ್ದಾರೆ ಎನ್ನಲಾಗುತ್ತಿದೆ. ಇನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಗಾಗಿ ದೆಹಲಿಗೆ ಆಗಮಿಸಿರುವ ಅರವಿಂದ ಬೆಲ್ಲದ್ ಭೇಟಿಗೆ ಅವಕಾಶವನ್ನು ಕೇಳಿದ್ದಾರೆ. ಭೇಟಿ ವೇಳೆ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಅರವಿಂದ ಬೆಲ್ಲದ್ ಒತ್ತಾಯಿಸಲಿದ್ದಾರೆ. ವಾಸ್ತವ ಅರಿಯಲು ಶಾಸಕಾಂಗ ಪಕ್ಷದ ಸಭೆಯೇ ಸೂಕ್ತ ವೇದಿಕೆ. ಶಾಸಕರ ನಿಜವಾದ ಅಭಿಪ್ರಾಯ ತಿಳಿದು ಮುಂದಿನ‌ ಕ್ರಮ ಕೈಗೊಳ್ಳಿ. ಈ ಹಿನ್ನಲೆಯಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆದು ಚರ್ಚೆ ಮಾಡಿ ಎಂದು ಮನವಿ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಕೊರೋನಾ ನೆಪ ಹೇಳಿ ಶಾಸಕಾಂಗ ಪಕ್ಷದ ಸಭೆ ನಡೆಯುವುದನ್ನು ತಪ್ಪಿಸುವ ಪ್ರಯತ್ನವಾಗುತ್ತಿದೆ. ಬಿಜೆಪಿ ಹೈಕಮಾಂಡ್ ಈ ನೆಪಕ್ಕೆ ಸೊಪ್ಪು ಹಾಕಬಾರದು ಎಂದು ಅರುಣ್ ಸಿಂಗ್ ಮುಂದೆ ಅರವಿಂದ ಬೆಲ್ಲದ್ ಮನವಿ ಮಾಡಲಿದ್ದಾರಂತೆ. ಜೂನ್ 16 ಅಥವಾ 17ರಂದು ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರೋಧಿ ಬಣ ಸಕ್ರಿಯವಾಗಿದೆ ಎನ್ನಲಾಗುತ್ತಿದೆ.

ದೆಹಲಿ ಭೇಟಿ ಬಗ್ಗೆ ಶಾಸಕ ಅರವಿಂದ್​ ಬೆಲ್ಲದ್​​ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ. ನಾನು ಕುಟುಂಬದ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದು, ನನ್ನ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ. ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಿಯಾಗಲಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸಿಲ್ಲ. ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರೂ ಮಾಧ್ಯಮಗಳಲ್ಲಿ ರಾಜಕೀಯ ಬೆಳವಣಿಗೆಗಳ ಚರ್ಚೆಗೆ ದೆಹಲಿಗೆ ಬಂದಿದ್ದಾರೆ ಎನ್ನುವ ರೀತಿ ಸುದ್ದಿ ಹರಡಿಸಲಾಗುತ್ತಿದೆ. ಮಾಧ್ಯಮಗಳಲ್ಲಿ ನನ್ನ ದೆಹಲಿ ಭೇಟಿಯ ಕುರಿತು ಬರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿದೆ. ಹೀಗಾಗಿ ತನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಮನವಿ ಮಾಡಿಕೊಂಡಿದ್ದಾರೆ.
Youtube Video

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by: Kavya V
First published: June 12, 2021, 11:47 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories