ಬೆಂಗಳೂರು: ಹಿರಿಯ ನಾಯಕ ಎಸ್.ಪಿ ಸಿದನ್ನಾಳ ನಮ್ಮ ಜೊತೆಗಿಲ್ಲ. ಸುರ್ಜೇವಾಲಾ ಅವರು ಕೋವಿಡ್ ಸಮಯದಲ್ಲಿ ಯಾವ ರೀತಿ ಜವಾಬ್ದಾರಿ ನಿಭಾಯಿಸಬೇಕು ಎಂದು ಸಲಹೆ ನೀಡಿದ್ದಾರೆ. ಆಸ್ಪತ್ರೆಗಳ ಮಾಹಿತಿ ಹೇಗೆ ಪಡೆಯಬೇಕು. ಸಾಮಾನ್ಯ ಜನರಿಗೆ ಹೇಗೆ ಸಹಾಯ ಮಾಡಬೇಕು. ಕಾಂಗ್ರೆಸ್ ಪಕ್ಷ ನಿಭಾಯಿಸಬೇಕಾದ ಜವಾಬ್ದಾರಿ ಬಗ್ಗೆ ಸಲಹೆ ನೀಡಿದ್ದಾರೆ. 51 ನಾಯಕರು ಸಲಹೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನಿಂದ ರಾಜ್ಯಮಟ್ಟದ ಕೋವಿಡ್ ಸೆಂಟರ್ ಮಾಡ್ತೇವೆ. ಖಾಸಗಿ ಆಸ್ಪತ್ರೆಗಳಿಗೆ ಡ್ರಗ್ ,ಔಷಧ ಸರಬರಾಜು ಮಾಡಲು ಆಗುತ್ತಿಲ್ಲ. ಅವರ ಸಹಾಯಕ್ಕೂ ಕಾಂಗ್ರೆಸ್ ನಿಲ್ಲುತ್ತದೆ. ಸರ್ಕಾರ ಏಕಾಏಕಿಯಾಗಿ ಲಾಕ್ ಡೌನ್ ಘೋಷಣೆ ಮಾಡಿದೆ. ಇದರಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತದೆ. ಜನರಿಗೆ ಆರ್ಥಿಕ ಪ್ಯಾಕೇಜ್ ನೀಡಬೇಕು. ಪ್ಯಾಕೇಜ್ ಕೊಡುವಂತೆ ನಾವು ಒತ್ತಾಯ ಮಾಡುತ್ತೇವೆ. ಯಾವ ರೀತಿ ಒತ್ತಾಯ ಮಾಡಬೇಕು ಎಂದು ಚರ್ಚೆ ಮಾಡ್ತೇವೆ ಎಂದರು.
ಅಕ್ಕಿ ಪ್ರಮಾಣ ಕಡಿತ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಕೆಶಿ, ಸರ್ಕಾರಕ್ಕೆ ನಾಚಿಕೆ ಆಗಬೇಕು. ಎರಡು ಕೆಜಿ ಅಕ್ಕಿ ಕೊಡುತ್ತಿದ್ದಾರೆ. ನಮ್ಮ ಸರ್ಕಾರದಲ್ಲಿ ಏಳು ಕೆಜಿ ಅಕ್ಕಿ ಕೊಡುತ್ತಿದ್ದೆವು. ಅದನ್ನು ಎರಡು ಕೆಜಿ ಮಾಡಿದ್ದಾರೆ. ಇವರ ಕೈಯಿಂದ ಕೊಡುತ್ತಿದ್ದಾರಾ. ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ ಎಂದು ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ