ಬೆಂಗಳೂರು: ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಣಕ್ಕೆ ತರಲು ಶತಾಯಗತಾಯ ಪ್ರಯತ್ನ ನಡೆಯುತ್ತಿರುವ ಬೆನ್ನಲ್ಲಿಯೇ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ವೈಟ್ಫೀಲ್ಡ್ನಲ್ಲಿರುವ ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿ ಆಡಳಿತ ಮಂಡಳಿ ಜತೆ ಮಾತುಕತೆ ನಡೆಸಿದರು.
ಕೋವಿಡ್ ಸೋಂಕಿತರಿಗಾಗಿ ಸರಕಾರಕ್ಕೆ ಶೇ.75ರಷ್ಟು ಹಾಸಿಗೆಗಳನ್ನು ಮೀಸಲಿಡಬೇಕು ಎಂದು ಆಡಳಿತ ಮಂಡಳಿಯನ್ನು ಕೋರಿದ ಡಿಸಿಎಂ, ಅದರಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಆಮ್ಲಜನಕಯುಕ್ತ ಬೆಡ್ಗಳನ್ನೇ ಕೊಡುವಂತೆ ಕೋರಿದರು. ಡಿಸಿಎಂ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಆಸ್ಪತ್ರೆಯ ಆಡಳಿತ ಮಂಡಳಿ ಸದಸ್ಯರು, ಸರಕಾರದ ಎಲ್ಲ ಬೇಡಿಕೆಗಳನ್ನು ಪೂರೈಸುವುದಾಗಿ ಭರವಸೆ ನೀಡಿತಲ್ಲದೆ, ಕೋವಿಡ್ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಸರಕಾರದ ಜತೆ ಕೈಜೋಡಿಸುವುದಾಗಿ ತಿಳಿಸಿದರು.
ಇದನ್ನೂ ಓದಿ:
https://kannada.news18.com/news/explained/explained-who-when-and-how-to-get-corona-vaccine-formalities-and-preparation-sktv-557257.html
ಸದ್ಯಕ್ಕೆ ಎರಡನೇ ಅಲೆ ರಾಜ್ಯವನ್ನು ತೀವ್ರವಾಗಿ ಕಾಡುತ್ತಿದೆ. ಹೀಗಾಗಿ ಆಸ್ಪತ್ರೆಯಲ್ಲಿ ಆಕ್ಷಿಜನ್ ಬೆಡ್ಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಡಿಸಿಎಂ ಸಲಹೆ ಮಾಡಿದರು.
ಕೋವಿಡ್ ಸೋಂಕಿತರ ಜತೆಗೆ ಕೋವಿಡ್ಯೇತರ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೂ ಆದ್ಯತೆ ಕೊಡಬೇಕು ಎಂದು ಆಸ್ಪತ್ರೆಗೆ ಸೂಚಿಸಿದ ಅವರು, ಆಸ್ಪತ್ರೆಯಲ್ಲಿ ಆಮ್ಲಜನಕ, ರೆಮಿಡಿಸ್ವಿರ್, ಕೋವಿಡ್ ಲಸಿಕೆ, ವೆಂಟಿಲೇಟರ್ಗಳು ಇತ್ಯಾದಿಗಳ ಲಭ್ಯತೆಯ ಬಗ್ಗೆ ಮಾಹಿತಿ ಪಡೆದುಕೊಂಡರು.
ಕರ್ನಾಟಕ ರಾಜ್ಯದಲ್ಲಿ ಕೊರೊನಾ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದ್ದು ರೋಗಿಗಳ ಚಿಕಿತ್ಸೆಗೆ ಇರುವ ಸೌಕರ್ಯಗಳು ಸಾಲುತ್ತಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಕೂಡಾ ಸಾಕಷ್ಟು ಪ್ರಯತ್ನಪಡುತ್ತಿದ್ದರೂ ಅದ್ಯಾವ್ದೂ ಸಾಲುತ್ತಿಲ್ಲ. ನಾನಾ ಸಚಿವರುಗಳು ಮತ್ತು ಡಿಸಿಎಂ ಅನೇಕ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆಗಳನ್ನು ಮಾಡುತ್ತಿದ್ದಾರೆ. ಎರಡನೇ ಅಲೆಯ ತೀವ್ರತೆ ಇನ್ನೂ ಕಡಿಮೆಯಾಗದಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ.
ನಿಮ್ಮ ಜಿಲ್ಲೆಯಿಂದ (ಬೆಂಗಳೂರು ನಗರ)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ