ಬೆಂಗಳೂರು (ಜೂ. 29): ಇನ್ನು 10 ದಿನದೊಳಗೆ ರಾಜ್ಯದ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು. ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಜವಾಬ್ದಾರಿಯನ್ನು ಆಯಾ ಕಾಲೇಜು ಪ್ರಾಂಶುಪಾಲರಿಗೆ ನೀಡಲಾಗುವುದು ಎಂದು ಡಿಸಿಎಂ ಅಶ್ವಥ್ನಾರಾಯಣ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯವನ್ನು ಪರಿಣಾಮಕಾರಿಯಾಗಿ ಮಾಡಲಾಗುವುದು. ಎಲ್ಲಾ ವಿದ್ಯಾರ್ಥಿಗಳಿಗೂ ಲಸಿಕೆ ಸಿಗುವಂತೆ ನೋಡಿಕೊಳ್ಳಲಾಗುವುದು. ಈಗಾಗಲೇ ಲಸಿಕೆಯನ್ನು ಸಮಪರ್ಕವಾಗಿ ರಾಜ್ಯ ನೀಡುತ್ತಿದೆ. ದೇಶದಲ್ಲಿಯೇ ನಾವು ಲಸಿಕೆ ನೀಡುವಿಕೆಯಲ್ಲಿ ಮೂರನೇ ಸ್ಥಾನದಲ್ಲಿ ಕರ್ನಾಟಕವಿದೆ ಎಂದು ಅವರು ತಿಳಿಸಿದರು.
ಈಗಾಗಲೇ 18 ವರ್ಷ ಮೀರಿದ ಎಲ್ಲ ಕಾಲೇಜು ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬ್ಬಂದಿಗಳು ಲಸಿಕೆ ಪಡೆಯಬೇಕು ಎಂದು ಆದೇಶ ನೀಡಲಾಗಿದೆ, ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಒಂದು ಡೋಸ್ ಲಸಿಕೆ ಪಡೆದಿರಬೇಕು. ಇಲ್ಲವಾದರೆ, ಪ್ರವೇಶ ನಿರಾಕರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರು ಆದ ಡಿಸಿಎಂ ಅಶ್ವತ್ಥ್ ನಾರಾಯಣ ತಿಳಿಸಿದ್ದರು.
ಕೋವಿಡ್ ಸೋಂಕಿನ ಅಲೆ ಕಡಿಮೆಯಾಗಿರುವ ಹಿನ್ನಲೆ ಕಾಲೇಜು ಪುನರ್ ಆರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಇದೇ ಹಿನ್ನಲೆ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಸರ್ಕಾರ ಮುಂದಾಗಿದೆ. ಈಗಾಗಲೇ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ತೊರೆಯುತ್ತಿದ್ದು, ಈಗ ಈ ಹೊಣೆಯನ್ನು ಕಾಲೇಜು ಪ್ರಾಶುಂಪಾಲರ ಹೆಗಲಿಗೆ ಹಾಕಲಾಗಿದೆ. ಕಾಲೇಜಿನಲ್ಲಿ ಸಾಮೂಹಿಕವಾಗಿ ಲಸಿಕೆ ಹಾಕಲು ಸಿದ್ದತೆ ನಡೆಸಲಾಗಿದೆ.
ಇದನ್ನು ಓದಿ: ಟೆಕ್ಕಿ ಹೆಂಡತಿ ಕೊಂದು ಡೆಲ್ಟಾ ಪ್ಲಸ್ ಸೋಂಕಿಗೆ ಬಲಿಯಾದಳು ಎಂದು ಕುಟುಂಬಸ್ಥರಿಗೆ ನಂಬಿಸಿದ
ರಾಜ್ಯದಲ್ಲಿ ಆಕ್ಸಿಜನ್ ಪೂರೈಕೆ, ಸಂಗ್ರಹ, ಉತ್ಪಾದನೆಗೆ ಹೆಚ್ಚಿನ ಆದ್ಯತೆ ಕೊಟ್ಟಿದ್ದೇವೆ. 250 ಮೆಟ್ರಿಕ್ ಟನ್ ಆಕ್ಸಿಜನ್ ಆರೋಗ್ಯ ಇಲಾಖೆಯಿಂದ ಉತ್ಪಾದನೆ ಆಗುತ್ತಿದೆ. ಒಟ್ಟು 400 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದನೆ ಆಗುತ್ತಿದೆ. 187 ಆಕ್ಸಿಜನ್ ಜನರೇಟರ್ ಗಳು ಸಿಗಲಿವೆ. ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 40 ಆಕ್ಸಿಜನ್ ಜನರೇಟರ್ ಗಳಿವೆ. 35 ಖಾಸಗಿ ಮೆಡಿಕಲ್ ಕಾಲೇಜುಗಳಲ್ಲೂ ಆಕ್ಸಿಜನ್ ಜನರೇಟರ್ ಗಳ ಕಾರ್ಯಾರಂಭ ಆಗಲಿದೆ ಎಂದು ತಿಳಿಸಿದರು.
ಆಕ್ಸಿಜನ್ ಸಂಗ್ರಹ ವ್ಯವಸ್ಥೆ ಹೊಂದಿಲ್ಲದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗುವುದು. ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಂಗ್ರಹ ಸಾಮರ್ಥ್ಯ ವ್ಯವಸ್ಥೆ ಕಡ್ಡಾಯ ಇರಬೇಕು. ಜಿಲ್ಲಾವಾರು ಸಾಕಷ್ಟು ಆಕ್ಸಿಜನ್ ಜನರೇಟರ್ ಗಳನ್ನು ಪಡೆಯಲಾಗಿದೆ. ಆಕ್ಸಿಜನ್ ಸಂಗ್ರಹ ಸಾಮರ್ಥ್ಯ 1600 ಮೆಟ್ರಿಲ್ ಟನ್ ಆರೋಗ್ಯ ಇಲಾಖೆಯಲ್ಲೂ, ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 500 ಮೆಟ್ರಿಕ್ ಟನ್ ಆಕ್ಸಿಜನ್ ಸಂಗ್ರಹ ಹೆಚ್ಚಳ ಮಾಡಲಾಗುತ್ತಿದೆ ಎಂದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ