Bitcoin Scam ದಾಖಲೆಗಳನ್ನು ನಮಗೆ ಬಿಜೆಪಿ ಸರ್ಕಾರದ ಮಂತ್ರಿಗಳೇ ಕೊಡುತ್ತಿದ್ದಾರೆ: DK Shivakumar

ಬಿಜೆಪಿ ಸರ್ಕಾರ ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಈ ಬಗ್ಗೆ ಸಾಕಷ್ಟು ಮಾತನಾಡಿದ್ದು, ನಿನ್ನೆ ಕುಮಾರಸ್ವಾಮಿ ಅವರು ಕೂಡ ಹೇಳಿದ್ದಾರೆ. ಸರ್ಕಾರ ಪ್ರಕರಣದ ವಿಚಾರವಾಗಿ ಮಾಧ್ಯಮಗಳಿಗೆ ಅವರಿಗೆ ಅನುಕೂಲವಾಗುವ ಅಂಶಗಳನ್ನು ಮಾತ್ರ ಬಿಡುಗಡೆ ಮಾಡುತ್ತಿದೆ ಎಂದರು.

ಕಾಂಗ್ರೆಸ್​ ಸುದ್ದಿಗೋಷ್ಠಿ

ಕಾಂಗ್ರೆಸ್​ ಸುದ್ದಿಗೋಷ್ಠಿ

  • Share this:
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣ (Bitcoin Scam) ಸಂಬಂಧ 100 ಪರ್ಸೆಂಟ್ ದಾಖಲೆ (Document ) ಸಂಗ್ರಹಿಸುತ್ತಿದ್ದೇವೆ. ಸೂಕ್ತ ಸಮಯ ಬಂದಾಗ ಅದನ್ನು ಬಿಡುಗಡೆ ಮಾಡುತ್ತೇವೆ. ನಾವು ಹೋಗಿ ಯಾವುದೇ ದಾಖಲೆ ಹುಡುಕುತ್ತಿಲ್ಲ. ಸರ್ಕಾರದ ಮಂತ್ರಿಗಳು, ಅಧಿಕಾರಿಗಳೇ (Ministers and Officers) ನಮಗೆ ಅದನ್ನು ಒದಗಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar ) ಅವರು ತಿಳಿಸಿದ್ದಾರೆ. ನಗರದ ಪದ್ಮನಾಭನಗರದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಅವರು ಪ್ರತಿಕ್ರಿಯೆ ನೀಡಿದರು. ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್ ಗಂಭೀರ ಆರೋಪ ಮಾಡುತ್ತಿದ್ದರೂ ಬಿಜೆಪಿ ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬ ಬಗ್ಗೆ ಉತ್ತರಿಸಿದ ಅವರು, ‘ಬಿಜೆಪಿ ಸರ್ಕಾರ ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಈ ಬಗ್ಗೆ ಸಾಕಷ್ಟು ಮಾತನಾಡಿದ್ದು, ನಿನ್ನೆ ಕುಮಾರಸ್ವಾಮಿ ಅವರು ಕೂಡ ಹೇಳಿದ್ದಾರೆ. ಸರ್ಕಾರ ಪ್ರಕರಣದ ವಿಚಾರವಾಗಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಮಾಹಿತಿಯಲ್ಲಿ ಅವರಿಗೆ ಅನುಕೂಲವಾಗುವ ಅಂಶಗಳನ್ನು ಮಾತ್ರ ಬಿಡುಗಡೆ ಮಾಡುತ್ತಿದೆ ಎಂದರು.

ಸರ್ಕಾರ ಸತ್ಯವನ್ನು ಮುಂದಿಡಲಿ

ಪ್ರಧಾನಮಂತ್ರಿಗಳಿಗೆ ಬರೆಯಲಾಗಿರುವ ಪತ್ರದ ಬಗ್ಗೆ ಅವರು ಯಾಕೆ ಮಾತನಾಡುತ್ತಿಲ್ಲ? ಅದು ನಿಜನಾ, ಸುಳ್ಳಾ? ಈ ಬಗ್ಗೆ ತನಿಖೆ ನಡೆಯುತ್ತಿದ್ದು ಅದು ಏನಾಗಿದೆ ಎಂದು ಹೇಳುತ್ತಿಲ್ಲ. ಬಿಟ್ ಕಾಯಿನ್ ವ್ಯವಹಾರ ನಡೆಸುವವರ ಬಗ್ಗೆ ಯಾವುದೇ ತಕರಾರಿಲ್ಲ. ಈ ಪ್ರಕರಣದಲ್ಲಿ ಹ್ಯಾಕಿಂಗ್ ನಡೆದಿದೆಯಾ ಇಲ್ಲವಾ? ಎಂಬುದಷ್ಟೇ ಮುಖ್ಯ. ಈ ಎಲ್ಲ ಪ್ರಶ್ನೆಗಳಿಗೂ ಒಂದೊಂದು ರೀತಿಯ ಸ್ಟೋರಿಗಳು ಬರುತ್ತಿವೆ. ಮಾಧ್ಯಮಗಳು ವರದಿ ಮಾಡುತ್ತಿವೆ. ಹೀಗಾಗಿ ಈ ಪ್ರಕರಣದಲ್ಲಿ ಏನಾಗಿದೆ ಎಂಬ ಸತ್ಯಾಂಶವನ್ನು ಸರ್ಕಾರ ಜನರ ಮುಂದೆ ಇಡಬೇಕು. ಸರ್ಕಾರಕ್ಕೇ ಈ ವಿಚಾರವಾಗಿ ಗೊಂದಲವಿದೆ ಎಂದೂ ಹೇಳಿದರು.

ಮೋದಿ ಬಿಟ್ಟುಬಿಡಿ ಎಂದ ಮಾತ್ರಕ್ಕೆ ನಾವ್ಯಾಕೆ ಬಿಡಬೇಕು?

ಪ್ರಧಾನಿಗಳೇ ಮುಖ್ಯಮಂತ್ರಿಗಳಿಗೆ ಈ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಪ್ರಧಾನಮಂತ್ರಿಗಳು ಬಿಟ್ಟುಬಿಡಿ ಎಂದ ಮಾತ್ರಕ್ಕೆ ನಾವ್ಯಾಕೆ ಬಿಟ್ಟುಬಿಡಬೇಕು? ಜನರ ವಿಚಾರ ಇದು. ದೇಶದಲ್ಲಿ ಅವ್ಯವಹಾರ ಯಾರೇ ಮಾಡಿದರೂ ತಪ್ಪೇ. ಅದು ಕಾಂಗ್ರೆಸ್ ಅವರಾಗಲಿ, ಬೇರೆ ಪಕ್ಷದವರಾಗಲಿ, ಜನರೇ ಆಗಲಿ. ಅದರ ಸತ್ಯಾಂಶ ಏನು ಎಂಬುದು ತಿಳಿಯಬೇಕು. ಪೊಲೀಸರು ಮಾಡಿದ ತನಿಖೆಯನ್ನು ಈಗ ಇ.ಡಿ.ಗೆ ನೀಡಿದ್ದೇವೆ ಎಂದು ಹೇಳುತ್ತಿದ್ದಾರೆ. ಒಂದು, ಐದು, ಹತ್ತು, ಸಾವಿರ ಕಾಯಿನ್ ಅವ್ಯವಹಾರ ಆಗಿದೆಯೋ. ಆ ಸತ್ಯಾಂಶವನ್ನು ಹೊರಗಿಡಬೇಕು ಅಷ್ಟೇ’ ಎಂದು ಉತ್ತರಿಸಿದರು.

ಪದ್ಮನಾಭನಗರ ಕಾಂಗ್ರೆಸ್ ಕಚೇರಿ ಉದ್ಘಾಟನೆ  

‘ಇವತ್ತಿನಿಂದ ಪದ್ಮನಾಭನಗರಕ್ಕೆ ಬೆಳಕು ಪ್ರಾರಂಭವಾಗುತ್ತಿದೆ. ಇಲ್ಲಷ್ಟೇ ಅಲ್ಲದೇ ಬಸವನಗುಡಿ ಕ್ಷೇತ್ರದಲ್ಲೂ ಕಾಂಗ್ರೆಸ್ ಶಾಸಕರನ್ನು ತರುವುದೇ ಇಂದಿನಿಂದ ನಿಮ್ಮೆಲ್ಲರ ಗುರಿ. ಇಂದು ಪದ್ಮನಾಭನಗರ ಕಚೇರಿ ಉದ್ಘಾಟನೆ ಮಾಡಿದ್ದು, ಈ ಕಚೇರಿ ನಿರ್ಮಾಣಕ್ಕೆ ಸಹಕರಿಸಿದ ರಘುನಾಥ ನಾಯ್ಡು ಅವರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಅವರು ಟಿಕೆಟ್ ನೀಡಿ ಎಂದು ಕೇಳಿಲ್ಲ. ಪಕ್ಷದ ಸಂಘಟನೆಗಾಗಿ ನೀವು ಹೇಳಿದ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ಕಚೇರಿಯನ್ನು ಕಾರ್ಯಕರ್ತರಿಗಾಗಿ ಮಾಡಲಾಗಿದೆ. ನೀವು ಮನೆ ಮನೆಗೂ ಹೋಗಿ ಮತದಾರರನ್ನು ಸಂಪರ್ಕಿಸಿ ಮತದಾರರ ಪಟ್ಟಿ ಸಿದ್ಧಪಡಿಸಿ, ಪಕ್ಷ ಸಂಘಟನೆ ಮಾಡಲು ಈ ಕಚೇರಿ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Bitcoin Scamನಲ್ಲಿ ಇಬ್ಬರೂ ಇದ್ದೇವೆ, ಸೆಟಲ್ ಮಾಡಿಕೊಳ್ಳೋಣ ಎಂಬರ್ಥದಲ್ಲಿದೆ CM ಮಾತು: Priyank Kharge

ಮೇಕೆದಾಟು ಯೋಜನೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತೇವೆ. ನಾವು ಪದ್ಮನಾಭನಗರ ಹಾದಿಯಾಗಿ ನಗರದ ನಾನಾ ಕಡೆ ಪಾದಯಾತ್ರೆ ಮಾಡಲಿದ್ದು, ಸಾವಿರಾರು ಕಾರ್ಯಕರ್ತರು ಭಾಗವಹಿಸಬೇಕು. ಈ ಯೋಜನೆ ಜಾರಿಯಾಗಿ ಬೆಂಗಳೂರು ನಗರದ ಜನರಿಗೆ ಕುಡಿಯುವ ನೀರು ಸಿಗಬೇಕು. ತಮಿಳುನಾಡಿಗೆ ಕೊಡಬೇಕಾದ ನೀರು ಸರಿಯಾಗಿ ಕೊಟ್ಟು ಉಳಿದ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಈ ಯೋಜನೆಗೆ ಆಗ್ರಹಿಸೋಣ, ಹೋರಾಟ ಮಾಡೋಣ. ನೀವು ಇದಕ್ಕೆ ಸಹಕಾರ ನೀಡಬೇಕು, ಬೆಂಗಳೂರು ಗೌರವ ಕಾಪಾಡಬೇಕು ಎಂದರು.
Published by:Kavya V
First published: