HOME » NEWS » State » BENGALURU URBAN EDUCATION MINISTER SURESH KUMAR SAYS SECOND PU FINAL EXAM POSTPONED SESR

Second PU exam postponed: ದ್ವೀತಿಯ ಪಿಯುಸಿ ಪರೀಕ್ಷೆ ಮುಂದೂಡಿಕೆ; ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಆದೇಶ

ರಾಜ್ಯದಲ್ಲಿ ಕೋವಿಡ್​ ಸೋಂಕು ನಿಯಂತ್ರಣವಾಗದ ಹಿನ್ನಲೆ ಈ ಹಿಂದೆ ನಿಗದಿಸಿದ್ದ ದ್ವೀತಿಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ತಿಂಗಳು 24 ರಿಂದ ಆರಂಭವಾಗಬೇಕಿದ್ದ ಪರೀಕ್ಷೆಯನ್ನು ಮುಂದೂಡಿ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಆದೇಶ ನೀಡಿದ್ದಾರೆ

news18-kannada
Updated:May 4, 2021, 3:19 PM IST
Second PU exam postponed: ದ್ವೀತಿಯ ಪಿಯುಸಿ ಪರೀಕ್ಷೆ ಮುಂದೂಡಿಕೆ; ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಆದೇಶ
ಸಚಿವ ಸುರೇಶ್​ ಕುಮಾರ್.
  • Share this:
ಬೆಂಗಳೂರು (ಮೇ. 4) ರಾಜ್ಯದಲ್ಲಿ ಕೋವಿಡ್​ ಸೋಂಕು ನಿಯಂತ್ರಣವಾಗದ ಹಿನ್ನಲೆ ಈ ಹಿಂದೆ ನಿಗದಿಸಿದ್ದ ದ್ವೀತಿಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ತಿಂಗಳು 24 ರಿಂದ ಆರಂಭವಾಗಬೇಕಿದ್ದ ಪರೀಕ್ಷೆಯನ್ನು ಮುಂದೂಡಿ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಆದೇಶ ನೀಡಿದ್ದಾರೆ. ಇದೇ ಮೇ 24 ರಿಂದ ಜೂನ್​ 16ವರೆಗೆ ಪರೀಕ್ಷೆ ನಿಗದಿಯಾಗಿತ್ತು. ಸುಮಾರು 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ, ರಾಜ್ಯದಲ್ಲಿ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಹಿನ್ನಲೆ ಪರೀಕ್ಷೆಯನ್ನು ಮುಂದೂಡಿ ಆದೇಶ ಕೈ ಗೊಳ್ಳಲಾಗಿದೆ. ಇನ್ನು ಮುಂದಿನ ಪರೀಕ್ಷೆಯ ದಿನಾಂಕವನ್ನು ಯಾವಾಗ ಎಂಬುದನ್ನು ನಿರ್ಧರಿಸಿಲ್ಲ. ಪರೀಕ್ಷೆ ನಿಗದಿಗೂ 15-20 ದಿನ ಮುಂಚಿತವಾಗಿ ದಿನಾಂಕ ಪ್ರಕಟಿಸಲಾಗುವುದು ಎಂದು ಶಿಕ್ಷ ಸಚಿವ ಸುರೇಶ್​ ಕುಮಾರ್​ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಶಿಕ್ಷಣ ಸಚಿವ ಸುರೇಶ್​ ಕುಮಾರ್​, ಈಗಾಗಲೇ ಪ್ರಯೋಗಿಕ ಪರೀಕ್ಷೆಯನ್ನಯ ಮುಂದೂಡಲಾಗಿದೆ. ಪರೀಕ್ಷೆಯ ಮುಂದೂಡಿಕೆ ಕುರಿತು ಈಗಾಗಲೇ ಅಧಿಕಾರಿಗಳ ಸಭೆ ನಡೆಸಲಾಗಿದೆ. ಈ ವೇಳೆ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಪೋಷಕರು ಅಭಿಪ್ರಾಯ ಪಡೆಯಲಾಗಿದೆ. ಪರೀಕ್ಷೆಗೆ ಸಹಕಾರ ನೀಡಬೇಕಿದ್ದ ಇಲಾಖೆಗಳು ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವುದು ಹಾಗೆಯೇ ಪರೀಕ್ಷೆ ತೆಗೆದುಕೊಳ್ಳಬೇಕಿದ್ದ ವಿದ್ಯಾರ್ಥಿಗಳು ತಮ್ಮ ತಮ್ಮ ಊರಿನಲ್ಲಿ ವಾಸ್ತವ್ಯ ಮಾಡಿರುವುದರಿಂದ ಎಲ್ಲಾ ಆಯಾಮಗಳಲ್ಲಿ ಚಿಂತನೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ದೇಶದಲ್ಲಿ ಕೋವಿಡ್​ ಕಾರಣದಿಂದಾಗಿ ಈಗಾಗಲೇ ಸಿಬಿಎಸ್​ಸಿ ಸೇರಿದಂತೆ ಮಧ್ಯಪ್ರದೇಶ, ಜಾರ್ಖಂಡ್​, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳು ದ್ವೀತಿಯ ಪಿಯುಸಿ ಪರೀಕ್ಷೆಯನ್ನು ಮುಂದೂಡಿದೆ. ಈ ವೇಳೆ ರಾಜ್ಯದಲ್ಲಿ ಪರೀಕ್ಷೆ ಮುಂದೂಡುವ ಕುರಿತು ಪ್ರತಿಕ್ರಿಯಿಸಿದ್ದ ಶಿಕ್ಷಣ ಸಚಿವರು, ಇನ್ನು ಕಾಲಾವಕಾಶವಿದ್ದು, ಪರಿಸ್ಥಿತಿ ನೋಡಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದರು. ಈಗ ಎಲ್ಲಾ ಅಂಶಗಳನ್ನು ಮನಗಂಡು ಈ ಪರೀಕ್ಷೆಗಳನ್ನು ಮುಂದೂಡಿ ಆದೇಶ ನೀಡಲಾಗಿದೆ. ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಎಂದರು.

ಪ್ರಥಮ ಪಿಯುಸಿ ವಿದ್ಯಾರ್ಥಿಗಳು ತೇರ್ಗಡೆ‘

ಪ್ರಥಮ ಪಿಯುಸಿ ಪರೀಕ್ಷೆಗಳನ್ನು  ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ ಪ್ರಥಮ ಪಿಯು ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ.  ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಮುಂದಿನ ತರಗತಿಗೆ ತೇರ್ಗಡೆ ಮಾಡಲಾಗುವುದು. ಇನ್ನು ಈ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದ ಮುನ್ನ ಬ್ರಿಡ್ಜ್ ಕೋರ್ಸ್​ಗಳನ್ನು ನಡೆಸಲಾಗುತ್ತದೆ. ಹಾಗೆಯೇ ಇಲಾಖೆಯ ಯೂ-ಟ್ಯೂಬ್ ಚಾನಲ್​ಗಳ ಮೂಲಕ ಈಗಿನಿಂದಲೇ ಈ ಬ್ರಿಡ್ಜ್ ಕೋರ್ಸ್​ಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಅವರು ತಿಳಿಸಿದರು.

ಉಪನ್ಯಾಸಕರಿಗೆ ವರ್ಕ್​ಫ್ರಂ ಹೋಮ್​

ಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುವಂತೆ ಉಪನ್ಯಾಸಕರು ವರ್ಕ್ ಫ್ರಂ ಹೋಂ ಕೆಲಸ ಮಾಡಲು ಸೂಚಿಸಲಾಗಿದೆ. ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕ, ಇಲಾಖೆಯ ಪಠ್ಯ ಬೋಧನಾ ಕ್ರಮಗಳನ್ನು ಅವರೊಂದಿಗೆ ಚರ್ಚಿಸುವುದು ಸೇರಿದಂತೆ ಎಲ್ಲ ಆಡಳಿತಾತ್ಮಕ ಕ್ರಮಗಳಲಿಗೆ ಅವರು ಸದಾ ಲಭ್ಯವಾಗಬೇಕಿದೆ. ಹಾಗೆಯೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಉಪನ್ಯಾಸಕರು ತಮ್ಮ ಕೋವಿಡ್ ಜವಾಬ್ದಾರಿಗಳನ್ನು ಪೂರೈಸಬೇಕಿದೆದೂರದರ್ಶನ ಮೂಲಕ ಪಾಠ
ವಿದ್ಯಾರ್ಥಿಗಳ ಪರೀಕ್ಷೆ ಮುಂದೂಡಿದ ಹಿನ್ನಲೆ ಅವರಿಗೆ ಅನುಕೂಲವಾಗುವ ಯತ್ನದಲ್ಲಿ ದೂರದರ್ಶನದ ಮೂಲಕ ಪಾಠ ವನ್ನು ತಿಳಿಸುವ ಯತ್ನ ನಡೆಸಲಾಗುವುದು. ಈ ಮೂಲಕ ಅವರ ಕಲಿಕೆಗೆ ಇನ್ನಷ್ಟು ಸಹಾಯವಾಗಿಲಿದೆ ಎಂದರು
Published by: Seema R
First published: May 4, 2021, 2:49 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories