ಬೆಂಗಳೂರು. ರಾಜ್ಯದಲ್ಲಿ ಶೈಕ್ಷಣಿಕ ವರ್ಷ 2022-23 ನಾಳೆಯಿಂದ ಶುರುವಾಗಲಿದ್ದು, ಈಗಾಗಲೇ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಕೊರೊನಾ ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ಇನ್ನೂ 1 ವಾರ ಅಂದರೆ ಜೂ.21ರವರೆಗೂ ಕಟ್ಟುನಿಟ್ಟಿನ ಲಾಕ್ಡೌನ್ ಮುಂದುವರೆಯಲಿದೆ. ಅಂತಹ ಜಿಲ್ಲೆಗಳಲ್ಲಿ ಶೈಕ್ಷಣಿಕ ವರ್ಷ ಆರಂಭಕ್ಕೆ ವಿನಾಯ್ತಿ ಕೊಡಲಾಗಿದೆ. ನಾಳೆಯಿಂದ ಆರಂಭಿಸುವುದರಿಂದ ವಿನಾಯ್ತಿ ಕೊಟ್ಟು ಇನ್ನೂ ಒಂದು ವಾರ ಕಾಲಾವಕಾಶ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಆಯ್ತುಕ ಅನ್ಬುಕುಮಾರ್ ಮಾತನಾಡಿ ನಾಳೆಯಿಂದಲೇ ಶೈಕ್ಷಣಿಕ ವರ್ಷ ಆರಂಭ, ಈಗಾಗಲೇ ಸೋತ್ತಲೆ ಹೊರಡಿಸಲಾಗಿದೆ. ಲಾಕ್ಡೌನ್ ಮುಂದುವರಿದ ಜಿಲ್ಲೆಗಳಲ್ಲಿ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಲು ಬಸ್ ವ್ಯವಸ್ಥೆ ಇರುವುದಿಲ್ಲ. ಈ ಕುರಿತು ಶಿಕ್ಷಕರ ಸಂಘ ಮನವಿ ಮಾಡಿತ್ತು. ರಾಜ್ಯದ ಎಲ್ಲಿಲ್ಲಿ ಲಾಕ್ಡೌನ್ ಮುಂದುವರೆದಿದೆಯೋ ಆ ಜಿಲ್ಲೆಗಳಲ್ಲಿ ಒಂದು ವಾರ ಕಾಲ ಶಿಕ್ಷಕರಿಗೆ ವಿನಾಯಿತಿ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ನಾಳೆಯಿಂದ ಶೈಕ್ಷಣಿಕ ಚಟುವಟಿಕೆ ಆರಂಭವಾಗಲಿದೆ. ಜುಲೈ 1ರಿಂದ ಶಾಲೆಗಳಲ್ಲಿ ಬ್ರಿಡ್ಜ್ ಕೋರ್ಸ್ ಆರಂಭವಾಗಲಿದೆ, ಜುಲೈ 15 ರಿಂದ ಶಾಲೆ ತರಗತಿ ಆರಂಭವಾಗಲಿದೆ. ಕೊರೊನಾ ಹತೋಟಿಗೆ ಬರುವವರೆಗೂ ಆನ್ಲೈನ್ ತರಗತಿಯಲ್ಲಿ ಮುಂದುವರೆಯಲಿದೆ ಎಂದು ತಿಳಿಸಿದರು.
ಶೈಕ್ಷಣಿಕ ಚಟುವಟಿಕೆ ನಿರ್ವಹಣೆ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ನಾಳೆಯಿಂದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಆರಂಭಕ್ಕೆ ಸುತ್ತೋಲೆ ಹೊರಡಿಸಲಾಗಿದೆ. ಮಕ್ಕಳ ಕಲಿಕೆಗೆ ಶಿಕ್ಷಕರು ಪೂರ್ವ ತಯಾರಿ ನಾಳೆಯಿಂದ ಪ್ರಾರಂಭಿಸಬೇಕು. ನಾಳೆಯಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸುವಂತೆ ಸೂಚನೆ ನೀಡಿದ್ದ ಶಿಕ್ಷಣ ಇಲಾಖೆ. ಲಾಕ್ ಡೌನ್ ನಲ್ಲಿರೋ ಜಿಲ್ಲೆಗಳಿಗೆ ವಿನಾಯ್ತಿ ನೀಡಿರೊ ಶಿಕ್ಷಣ ಇಲಾಖೆ.
ಇದನ್ನೂ ಓದಿ: ಕುಟುಂಬದಲ್ಲಿ ಕೊರೊನಾದಿಂದ ಮೃತಪಟ್ಟ ಒಬ್ಬರಿಗೆ ₹1 ಲಕ್ಷ ಪರಿಹಾರ : ಸಿಎಂ ಯಡಿಯೂರಪ್ಪ ಘೋಷಣೆ
ಲಾಕ್ ಡೌನ್ ನಿರ್ಬಂಧವಿರುವ ಜಿಲ್ಲೆಗಳಲ್ಲಿನ ಶಿಕ್ಷಕರು ಮನೆಯಿಂದ ಕೆಲಸ ನಿರ್ವಹಿಸಬೇಕು. ಮಕ್ಕಳ ದಾಖಲಾತಿ, ಕಲಿಕಾ ಪೂರ್ವ ಸಿದ್ದತೆ ಆರಂಭಿಸಬೇಕು. ನಿರ್ಬಂಧ ಸಡಿಲಿಕೆಯಾದ ಕೂಡಲೇ ಶಾಲೆಗೆ ತೆರಳಿ ಕಾರ್ಯ ನಿರ್ವಹಿಸಬೇಕು. ಅನ್ ಲಾಕ್ ಆಗಿರೋ ಜಿಲ್ಲೆಗಳ ಶಿಕ್ಷಕರು ನಾಳೆಯಿಂದ ದಾಖಲಾತಿ ಆರಂಭಿಸಬೇಕು ಎಂದು ಸೂಚನೆ ನೀಡಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಶಿಕ್ಷಣ ಇಲಾಖೆ ಆಯಕ್ತ ಅನ್ಬಕುಮಾರ್, ಲಾಕ್ ಡೌನ್ ಪೂರ್ಣಗೊಂಡ ತಕ್ಷಣ ಶಿಕ್ಷಕರ ಹಾಜರಿಗೆ ಸೂಚಿಸಿದ್ದಾರೆ.
ಮೊದಲ ಪಿಯು ಮೌಲ್ಯಾಂಕನ ಅವಧಿ ವಿಸ್ತರಣೆ ಮಾಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದರು. ಹಲವು ಉಪನ್ಯಾಸಕ ಸಂಘಟನೆಗಳ ಕೋರಿಕೆಯ ಮೇರೆಗೆ ಮೊದಲ ಪಿ.ಯು.ಸಿ. ಮೌಲ್ಯಾಂಕನ ಪ್ರಕ್ರಿಯೆ ವಿಸ್ತರಿಸಲಾಗಿದೆ. ಜಿಲ್ಲೆಗಳ ಲಾಕ್ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಸಮಯ ವಿಸ್ತರಿಸಲು ಪದವಿಪೂರ್ವ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ಶಿಕ್ಷಕರ ವರ್ಗಾವಣಾ ವೇಳಾಪಟ್ಟಿ ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದಲ್ಲಿ ತಿಳಿಸಿದ್ದಾರೆ. ಶಿಕ್ಷಕರಿಗೆ ಕೋವಿಡ್ ಲಸಿಕೆ ಹಾಕಿಸುವುದಾಗಿ ಎಂದೂ ತಿಳಿಸಿದ್ದಾರೆ. ಪ್ಯಾಕೇಜ್ ಪರಿಹಾರ ನೇರ ಶಿಕ್ಷಕರ ಖಾತೆಗೆ ವರ್ಗಾವಣೆಯಾಗಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ