ರಾಜೀನಾಮೆ ನೀಡಿದ ಬಳಿಕವೂ ಕಾವೇರಿ ನಿವಾಸದಲ್ಲೇ ಬಿಎಸ್​ವೈ ವಾಸ್ತವ್ಯ; ಮಾಜಿ ಸಿಎಂಗೆ ಸಂಪುಟ ದರ್ಜೆ ಸ್ಥಾನಮಾನ

ಬಿಎಸ್​ ಯಡಿಯೂರಪ್ಪ ಅವರು ಕಾವೇರಿ ನಿವಾಸದಲ್ಲೇ ಬಿಜೆಪಿ ಸರ್ಕಾರದ ಅವಧಿ ಮುಗಿಯುವವರೆಗೂ ‌ಇರಲಿದ್ದಾರೆ.

ಬಿಎಸ್ ಯಡಿಯೂರಪ್ಪ

ಬಿಎಸ್ ಯಡಿಯೂರಪ್ಪ

 • Share this:
  ಬೆಂಗಳೂರು (ಆ.7): ಹೈ ಕಮಾಂಡ್​ ಆದೇಶದಂತೆ ಬಿಎಸ್​ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ಸಂಘಟನೆಗೆ ತೊಡಗಿದ್ದಾರೆ. ರಾಜೀನಾಮೆ ನೀಡಿದ ಬಳಿಕವೂ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆ ಸರ್ಕಾರ ಆದೇಶ ನೀಡಿದೆ. ಸರ್ಕಾರದಲ್ಲಿ ಯಾವುದೇ ಹುದ್ದೆ ಹೊಂದಿರದಿದ್ದರೂ ಅವರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ ಮುಂದುವರೆಲಿದೆ. ಅಲ್ಲದೇ, ಬಿಜೆಪಿ ಅಧಿಕಾರ ಅವಧಿ ಮುಗಿಯುವವರೆಗೂ ಅವರು ಈ ಸ್ಥಾನಮಾನ ಅನುಭವಿಸಲಿದ್ದು, ಎಲ್ಲಾ ಸೌಲಭ್ಯವನ್ನು ನೀಡುವಂತೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

  ಹೊಸ ಮುಖ್ಯಮಂತ್ರಿಗಳು ಆಯ್ಕೆಯಾದಾಗ ಹಿಂದೆ ಇದ್ದ ಮುಖ್ಯಮಂತ್ರಿಗಳಿಗೆ ಸಂಪುಟ ದರ್ಜೆ ನೀಡಲಾಗುತ್ತದೆ. ಹಾಗಾಗಿ ಸರ್ಕಾರಿ ನಿವಾಸ, ಎಸ್ಕಾರ್ಟ್, ಪೈಲಟ್ ವಾಹನಗಳ ಸೌಲಭ್ಯಗಳು ಮುಂದಿನ ಒಂದು ಮುಕ್ಕಾಲು ವರ್ಷಗಳ ಕಾಲ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರಿಗೂ ಲಭ್ಯವಾಗಲಿದೆ. ಇದರ ಜೊತೆಗೆ ಬಿಎಸ್​ ಯಡಿಯೂರಪ್ಪ ಕಾವೇರಿ ನಿವಾಸದಲ್ಲೇ ವಾಸ್ತವ್ಯವನ್ನು ಮುಂದುವರೆಸಲಿದ್ದಾರೆ.

  ಸಿಎಂ ಬಸವರಾಜ ಬೊಮ್ಮಾಯಿ ಅವರು ಆರ್​ಟಿ ನಗರದ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದು, ಅವರು ಕಾವೇರಿ ನಿವಾಸಕ್ಕೆ ಸ್ಥಳಾಂತರವಾಗುವುದಿಲ್ಲ. ಈ ಹಿನ್ನಲೆ ಬಿಎಸ್​ ಯಡಿಯೂರಪ್ಪ ಅವರು ಕಾವೇರಿ ನಿವಾಸದಲ್ಲೇ ಬಿಜೆಪಿ ಸರ್ಕಾರದ ಅವಧಿ ಮುಗಿಯುವವರೆಗೂ ‌ಇರಲಿದ್ದಾರೆ.

  ಇದನ್ನು ಓದಿ: ಗ್ರಾಮೀಣಾಭಿವೃದ್ಧಿ ಇಲಾಖೆಯ ಮೇಲೆ ಆಸಕ್ತಿ ಇತ್ತು; ಕೋಟಾ ಶ್ರೀನಿವಾಸ ಪೂಜಾರಿ

  ರಾಜೀನಾಮೆ ನೀಡಿದರೂ ಪಕ್ಷದಲ್ಲಿ ಬಿಎಸ್​ ಯಡಿಯೂರಪ್ಪ ಪ್ರಭಾವಶಾಲಿಯೇ. ತಮ್ಮ ಆಪ್ತ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡುವಂತೆ ಹೈ ಕಮಾಂಡ್​ ಮುಂದೆ ಹೆಸರು ಪ್ರಸ್ತಾಪಿಸಿ ಯಶಸ್ವಿಯಾದರು. ಬಳಿಕ ಮತ್ತೆ ಸಂಪುಟದಲ್ಲಿ ತಮಗೆ ಸರ್ಕಾರ ರಚಿಸಲು ಸಹಾಯ ಮಾಡಿದ ವಲಸಿಗ ಬಿಜೆಪಿ ನಾಯಕರಿಗೆ ಮತ್ತೆ ಸ್ಥಾನ ಸಿಗುವಂತೆ ಮಾಡುವಲ್ಲಿ ಸಫಲರಾಗಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದ ಯಡಿಯೂರಪ್ಪ ಅವರ ಕಾರ್ಯಕ್ಕೆ ಪ್ರಧಾನಿ ಮೋದಿ ಕೂಡ ಶ್ಲಾಘಿಸಿದ್ದಾರೆ. ಸದ್ಯ ಪಕ್ಷ ಸಂಘಟನೆಯಲ್ಲಿ ಹೆಚ್ಚು ಸಕ್ರಿಯರಾಗಿರುವ ಅವರು ಮುಂದಿನ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ತರುವ ಪಣ ತೊಟ್ಟಿದ್ದಾರೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು
  Published by:Seema R
  First published: