HDK vs Siddaramaiah: ತೊಟ್ಟಿಲನ್ನೂ ತೂಗಿ, ಮಗುವಿನ ಕತ್ತನ್ನೂ ಕುಯ್ಯುವ ನಿಮ್ಮ ನೀಚ ಬುದ್ಧಿ ಮುಸ್ಲಿಂರಿಗೆ ಗೊತ್ತಾಗಿದೆ; ಸಿದ್ದರಾಮಯ್ಯ ವಿರುದ್ಧ ಎಚ್​ಡಿಕೆ ವಾಗ್ದಾಳಿ

ಚಕ್ರ ತಿರುಗುತ್ತಿದೆ, ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ. ಅಲ್ಪಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ. ನಿಮಗೆ ಪಾಠ ಕಲಿಸುವ ಜನತಾಪರ್ವ ಈಗಷ್ಟೇ ಆರಂಭವಾಗಿದೆ. ಕಾದು ನೋಡಿ‘‘ ಎಂದಿದ್ದಾರೆ.

ಸಿದ್ದರಾಮಯ್ಯ - ಎಚ್​ಡಿಕೆ

ಸಿದ್ದರಾಮಯ್ಯ - ಎಚ್​ಡಿಕೆ

  • Share this:
ಬೆಂಗಳೂರು(ಅ.16): ರಾಜ್ಯದಲ್ಲಿ ಉಪಚುನಾವಣೆ(Karnataka By election ) ಇರುವ ಹಿನ್ನೆಲೆ,  ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು(Minority candidates) ಗೆಲ್ಲಿಸಲು ಮಾಜಿ ಸಿಎಂ ಎಚ್​​.ಡಿ.ಕುಮಾರಸ್ವಾಮಿ(HD Kumaraswamy) ರಣತಂತ್ರ ಹೆಣೆಯುತ್ತಿದ್ದಾರೆ. ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ವಿರುದ್ಧ ಟ್ವಿಟ್ವರ್(Twitter)​​ನಲ್ಲಿ ವಾಗ್ದಾಳಿ ನಡೆಸಿದ್ದಾರೆ. ‘ಅಲ್ಪಸಂಖ್ಯಾತ ವಿರೋಧಿ‘ ಎಂಬ ಅಸ್ತ್ರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಎಚ್​ಡಿಕೆ ಪ್ರಯೋಗಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದವರನ್ನು ಸಿದ್ದರಾಮಯ್ಯ ನಿರ್ಲಕ್ಷ್ಯ ಮಾಡಿದ್ದಾರೆ ಎಂದೂ ಸಹ ಕುಮಾರಸ್ವಾಮಿ ಆರೋಪಿಸಿದ್ದಾರೆ. ಒಟ್ಟಾರೆ ಸಿದ್ದರಾಮಯ್ಯ ಅಲ್ಪಸಂಖ್ಯಾತ ವಿರೋಧಿ ಎಂದು ಬಿಂಬಿಸಲು ಎಚ್​ಡಿಕೆ ಯತ್ನಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಎಚ್​.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ನಿರಂತರ ವಾಗ್ದಾಳಿ ನಡೆಸಿದ್ದಾರೆ. ‘‘ ಸಿದ್ದಹಸ್ತನ ಶೂರನ ನಿಜ ಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಪಕ್ಷಕ್ಕಾಗಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಮುಗಿಸಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೋಣಿಸಿ ʼಅಹಿಂದʼ ಎಂದು ಜನರನ್ನು 'ಅಡ್ಡದಾರಿ' ಹಿಡಿಸಿದ ʼಸಿದ್ದಹಸ್ತ ಶೂರರುʼ ತಮ್ಮ ಸ್ವಪಕ್ಷದಲ್ಲೇ ಮುಸ್ಲಿಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ, ಅಲ್ಪಸಂಖ್ಯಾತರ ಅಂತ್ಯ ರಾಜಕಾರಣʼದ #ಟರ್ಮಿನೇಟರ್‌ ಆಗಿ ಹೊರಹೊಮ್ಮಿದ್ದಾರೆ‘‘ ಎಂದು ಹರಿಹಾಯ್ದಿದ್ದಾರೆ.‘‘ನಂಬಿ ಅಧಿಕಾರ ಕೊಟ್ಟ ಪಕ್ಷದ ಕತ್ತನ್ನೇ ಕುಯ್ಯುವ, ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ʼಸಿದ್ದಹಸ್ತ ಸೂತ್ರಧಾರಿʼಯ ಒಳ ರಾಜಕೀಯಕ್ಕೆ ಬಲಿಯಾಗುತ್ತಿರುವ ಅಲ್ಪಸಂಖ್ಯಾತ ನಾಯಕರ ದೊಡ್ಡ ಪಟ್ಟಿಯೇ ಇದೆ.  ಕಾಂಗ್ರೆಸ್ʼನಲ್ಲಿ ನಡೆದಿರುವ ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣ ಎಂದು ಜನರಿಗೆ ಗೊತ್ತಾಗಲಿ‘‘ ಎಂದು ತಿರುಗೇಟು ಕೊಟ್ಟಿದ್ದಾರೆ.

‘‘2012ರ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಇಕ್ಬಾಲ್ ಅಹಮದ್ ಸರಡಗಿ ಸೋಲುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಭೈರತಿ ಸುರೇಶ್ ತಮ್ಮ ಗೆಲುವಿಗೆ ಬೇಕಿದ್ದ 19 ಮತ ಮೀರಿ 23 ಮತ ಪಡೆದು ಗೆಲ್ಲುತ್ತಾರೆ..!! ಇಲ್ಲಿ ಸರಡಗಿ ಸೋಲಿಗೆ, ಬೈರತಿ ಸುರೇಶ್ ಗೆಲುವಿಗೆ ಕಾರಣವಾದ ʼಸಿದ್ದಸೂತ್ರʼ ಹಣೆದಿದ್ದು ಯಾರು....?‘‘ ಎಂದು ಎಚ್​ಡಿಕೆ ಪ್ರಶ್ನಿಸಿದ್ದಾರೆ.

ಮುಂದುವರೆದ ಅವರು, ‘‘ಈ ʼಸಿದ್ದಹಸ್ತರ ಸಿದ್ದಸೂತ್ರʼ ಅಲ್ಲಿಗೇ ನಿಲ್ಲುವುದಿಲ್ಲ. 2016ರಲ್ಲಿ ಹೆಬ್ಬಾಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಅವರಿಗೆ ಅಧಿಕೃತ ಟಿಕೆಟ್ ಕೊಡುತ್ತದೆ.

ಆಗ ಭೈರತಿ ಸುರೇಶ್ ಪರ ಲಾಬಿ ಮಾಡಿದ್ದ ಸಿದ್ಧಕಲೆ ಸೂತ್ರಧಾರರು, ಅವರನ್ನೇ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿ ಒಳಸುಳಿ ಸೃಷ್ಟಿಸಿ ಷರೀಫರ ಮೊಮ್ಮಗನನ್ನು ಸೋಲಿಸುತ್ತಾರೆ..! 2023ರ ಚುನಾವಣೆಯಲ್ಲಿ ಭೈರತಿ ಸುರೇಶ್ʼಗೇ ಹೆಬ್ಬಾಳದ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ. ಹಾಗಾದರೆ ಜಾಫರ್ ಷರೀಫರ ಮೊಮ್ಮಗನ ಕಥೆ ಏನು...?‘‘ ಎಂದು ಎಚ್​ಡಿಕೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.‘‘ಕಳೆದ ಲೋಕಸಭೆ ಚುನಾವಣೆ ನಂತರ ತಮಗೆ ಆಗುತ್ತಿರುವ ಅನ್ಯಾಯ ಪ್ರಶ್ನಿಸಿದ ರೋಷನ್ ಬೇಗ್‌ʼಗೆ ಶೋಕಾಸ್ ನೊಟೀಸ್ ನೀಡಿ, ತಮ್ಮನ್ನು ಬಹಿರಂಗವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರನ್ನು ಬೇಕಾಬಿಟ್ಟಿ ನಡೆಸಿಕೊಂಡು ಅಪಮಾನ ಮಾಡುತ್ತಾರೆ ಸಿದ್ದಹಸ್ತರು. ಕೊನೆಗೆ ರೋಷನ್ ಬೇಗ್ ಕಾಂಗ್ರೆಸ್ ಪಕ್ಷದಿಂದಲೇ ದೂರವಾಗುತ್ತಾರೆ‘‘.‘‘ಮೈಸೂರಿನ ಹಿರಿಯ ನಾಯಕ ತನ್ವೀರ್ ಸೇಠ್ ಅವರನ್ನು ಅಪಮಾನಕರವಾಗಿ ನಡೆಸಿಕೊಂಡಿದ್ದು ಇದೇ ಸಿದ್ದಹಸ್ತರು. ಅಲ್ಲಿನ ಪಾಲಿಕೆಯಲ್ಲಿ ಜಾತ್ಯತೀತ ಶಕ್ತಿಗಳನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ ತನ್ವೀರ್ ಮೇಲೆ ಕೂಗಾಡಿದ ಸಿದ್ದಸೂತ್ರ ಪ್ರವೀಣರು, ಇನ್ನಿಲ್ಲದ ಅಪಮಾನ ಮಾಡಿ ನಿಂದಿಸುತ್ತಾರೆ‘‘‘‘ಈಗ ಆಡಿಯೋ ನೆಪದಲ್ಲಿ ಸಲೀಂ ಮೊಹಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ʼರಸಸ್ವಾದʼ ಮಾಡಿ ಪುಕ್ಕಟೆ ಮನರಂಜನೆ ಪಡೆದ ವ್ಯಕ್ತಿಗೆ ರಕ್ಷಣೆ ನೀಡಿ ಓರ್ವ ಅಲ್ಪಸಂಖ್ಯಾತ ನಾಯಕನನ್ನು 6 ವರ್ಷ ಉಚ್ಚಾಟಿಸಲಾಗಿದೆ. ಇದು ಯಾವ ಸೀಮೆ ನ್ಯಾಯ..?‘‘ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಉಗ್ರಪ್ಪರನ್ನು ಸಿದ್ದರಾಮಯ್ಯ ರಕ್ಷಿಸಿದ್ದಾರೆ ಎಂದು ಎಚ್​ಡಿಕೆ ಪರೋಕ್ಷವಾಗಿ ಆರೋಪಿಸಿದ್ದಾರೆ.‘‘ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಇದೇನಾ ಸಿದ್ದಹಸ್ತರೇ..? ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುತ್ತಾ, ಸಾಧ್ಯವಾದರೆ ಆ ಮಗುವಿನ ಕತ್ತನ್ನೂ ಕುಯ್ಯುತ್ತಾ ನಡೆಸುತ್ತಿರುವ ಇಂಥ ನೀಚ ರಾಜರಾರಣ ಮುಸ್ಲಿಂ ಬಾಂಧವರಿಗೆ ಈಗ ಗೊತ್ತಾಗಿಬಿಟ್ಟಿದೆ''ಇಕ್ಬಾಲ್ ಸರಡಗಿ ಅವರನ್ನು ಸೋಲಿಸಿದಿರಿ, ಜಾಫರ್‌ ಷರೀಫರ ಮೊಮ್ಮಗನನ್ನು ಮುಗಿಸಿದಿರಿ, ರೋಷನ್ ಬೇಗ್ ವಿರುದ್ಧ ರೋಷ ತೀರಿಸಿಕೊಂಡಿರಿ, ತನ್ವೀರ್ ಸೇಠ್ ಮೇಲೆ ಹಗೆ ಸಾಧಿಸಿದಿರಿ, ಇನ್ನೊಬ್ಬರ ಮೇಲಿನ ಸೇಡನ್ನು ಬಡಪಾಯಿ ಸಲೀಂ ಮೇಲೆ ತಿರುಗಿಸಿ ಒಂದೇ ಕಲ್ಲಿನಲ್ಲಿ 2 ಹಕ್ಕಿ ಹೊಡೆದು ʼಕಿರಾತಕ ರಾಜಕಾರಣʼ ಮಾಡಿದಿರಿ‘‘ ಎಂದು ಕಿಡಿಕಾರಿದ್ದಾರೆ.

ಚಕ್ರ ತಿರುಗುತ್ತಿದೆ, ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ. ಅಲ್ಪಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ. ನಿಮಗೆ ಪಾಠ ಕಲಿಸುವ ಜನತಾಪರ್ವ ಈಗಷ್ಟೇ ಆರಂಭವಾಗಿದೆ. ಕಾದು ನೋಡಿ‘‘ ಎಂದಿದ್ದಾರೆ.ಜೆಡಿಎಸ್ ನ್ನು ಬಿಜೆಪಿ ಬಿ ಟೀಮ್ ಎಂದಿದ್ದ ಸಿದ್ದರಾಮಯ್ಯಗೆ ಎಚ್​ಡಿಕೆ ತಿರುಗೇಟು ನೀಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್​ ಬಿ ಟೀಮ್ ಎಂದು ಸಿದ್ದರಾಮಯ್ಯ ಪ್ರಚಾರ ಮಾಡಿದ್ದರು. ಇದರಿಂದ ಮುಸ್ಲಿಂ ಮತಗಳು ವಿಭಜನೆ ಆಗಿದ್ದವು. ಜೆಡಿಎಸ್ ನಲ್ಲಿದ್ದ ಮತಗಳು ಕಾಂಗ್ರೆಸ್​​ಗೆ ವಿಭಜನೆ ಆಗಿದ್ದವು. ಇದರಿಂದಾಗಿ‌ ಚುನಾವಣೆಯಲ್ಲಿ ಜೆಡಿಎಸ್​ಗೆ ಭಾರಿ ಹಿನ್ನಡೆ ಆಗಿತ್ತು. ಇದೀಗ ಬೈ ಎಲೆಕ್ಸನ್ ನಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯುಂಟು ಮಾಡಲು ಹೆಚ್ಡಿಕೆ ಪ್ಲಾನ್ ಮಾಡಿದ್ದಾರೆ. ಸಿದ್ದರಾಮಯ್ಯ ಅಲ್ಪಸಂಖ್ಯಾತ ವಿರೋಧಿ ಎಂದು ಹೇಳೋದ್ರ ಮೂಲಕ ಕಾಂಗ್ರೆಸ್ ಗೆ ಹಿನ್ನಡೆ ಮಾಡಲು ಹೆಚ್ಡಿಕೆ ಪ್ಲಾನ್ ಮಾಡಿದ್ದಾರೆ. ಅದಕ್ಕಾಗಿಯೇ ಟ್ವಿಟರ್ ನಲ್ಲಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದರ ಜೊತೆಗೆ ತಮ್ಮ ಪಕ್ಷದಿಂದ ವಿಭಜನೆ ಯಾಗಿ ಕೈ ಪಾಲಾಗಿರುವ ಮತ ಮತ್ತೆ ಮರು ಪಡೆಯಲು ಕಸರತ್ತು ನಡೆಸಿದ್ದಾರೆ. ಅಲ್ಲದೆ ಬೈ ಎಲೆಕ್ಷನ್ ನಲ್ಲಿ ಸ್ಪರ್ಧಿಸಿರುವ ಅಲ್ಪಸಂಖ್ಯಾತ ಅಭ್ಯರ್ಥಿಗಳ ಗೆಲ್ಲಿಸಲು ಈ ತಂತ್ರ ಮಾಡಿದ್ದಾರೆ..
Published by:Latha CG
First published: