Congress Leaders: ಮೋದಿ ವಿರುದ್ಧ ಸಿಡಿದೆದ್ದ 'ಕೈ' ನಾಯಕರು; ಬೆಲೆ ಏರಿಕೆ ವಿರುದ್ಧ ಸಮರ ಸಾರಿದ ಸಿದ್ದು-ಡಿಕೆಶಿ

ಕೇಂದ್ರ ಸರ್ಕಾರ ಬೆಲೆ ಏರಿಕೆ ಮೂಲಕ ಎಲ್ಲ ವರ್ಗದ ಜನರ ಮೇಲೆ ಗದಾ ಪ್ರಹಾರ ಮಾಡುತ್ತಿದೆ. ಪೆಟ್ರೋಲ್ ಡೀಸೆಲ್, ಅಡುಗೆ ಅನಿಲದ ಬೆಲೆ ಕಳೆದ 11 ದಿನಗಳಿಂದ ಏರುತ್ತಲೇ ಇದೆ. ಕೇಂದ್ರ ಸರ್ಕಾರದ ವಿರುದ್ಧ ಕೈ ನಾಯಕರ ವಾಗ್ದಾಳಿ

ಡಿ.ಕೆ ಶಿವಕುಮಾರ್​, ಸಿದ್ದರಾಮಯ್ಯ

ಡಿ.ಕೆ ಶಿವಕುಮಾರ್​, ಸಿದ್ದರಾಮಯ್ಯ

  • Share this:
ಬೆಂಗಳೂರು (ಏ.3):  ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ (KPCC Office)  ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar)​ ಜಂಟಿ ಸುದ್ದಿಗೋಷ್ಠಿ ನಡೆಸಿದ್ರು. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 2022ಕ್ಕೆ ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದಿದ್ದರು. ಅದನ್ನು ಮಾಡುವ ಬದಲು ರೈತರ ರಕ್ತ ಕುಡಿಯಲು ಆರಂಭ ಮಾಡಿದ್ದಾರೆ. ಕೃಷಿಗೆ ಬಳಕೆಯಾಗುವ ಕೀಟನಾಶಕಗಳ ಮೇಲೆ 18%, ಕೃಷಿ ಯಂತ್ರೋಪಕರಣಗಳ ಮೇಲೆ 12%, ರಸಗೊಬ್ಬರದ ಮೇಲೆ 5% ಜಿಎಸ್‌ಟಿ ವಿಧಿಸಲಾಗುತ್ತಿದೆ. ಈ ರೀತಿ ರೈತರಿಂದ ಸುಲಿಗೆ ಮಾಡಿ ಅವರ ಬದುಕನ್ನು ಕಸಿಯಲಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ರಸಗೊಬ್ಬರದ ಬೆಲೆ ಏರಿಕೆ

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆಯನ್ನು ಎದ್ವಾತದ್ವಾ ಏರಿಕೆ ಮಾಡಿದೆ. ಯುಗಾದಿ ಸಿಹಿ - ಕಹಿಗಳ ಹಬ್ಬ, ಆದರೆ ಕೇಂದ್ರ ಸರ್ಕಾರ ಜನರಿಗೆ ಬರೀ ಕಹಿಯನ್ನು ನೀಡಿದೆ. ಒಂದು ಚೀಲ ಗೊಬ್ಬರದ ಮೇಲೆ 150 ರೂ. ಏರಿಕೆಯಾಗಿದೆ. ಇದರಿಂದ ಒಂದು ಚೀಲ ಗೊಬ್ಬರದ ಬೆಲೆ ಈಗ 1,350 ರೂ. ಆಗಿದೆ. ದೇಶದ ರೈತರು ವರ್ಷದಲ್ಲಿ 1 ಕೋಟಿ 20 ಲಕ್ಷ ಟನ್ ಗೊಬ್ಬರ ಬಳಕೆ ಮಾಡುತ್ತಾರೆ. ಕೇಂದ್ರ ಸರ್ಕಾರ 3,600 ಕೋಟಿ ರೂ.ಯನ್ನು ರೈತರಿಂದ ಹೆಚ್ಚುವರಿ ಹಣ ಸುಲಿಗೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ರೈತರಿಂದ ಸುಲಿಗೆ ಮಾಡ್ತಿದೆ

ಕಳೆದ ಬಾರಿ ರಾಗಿ ಬೆಳೆಗೆ ಉತ್ತಮ ಬೆಲೆ ಬಂದಿದ್ದರಿಂದ ಈ ಬಾರಿ ರಾಜ್ಯದ ರೈತರು 15 ಲಕ್ಷ ಮೆಟ್ರಿಕ್ ಟನ್ ರಾಗಿ ಬೆಳೆದಿದ್ದಾರೆ. ಇದರಲ್ಲಿ ಕನಿಷ್ಠ ಅರ್ಧದಷ್ಟನ್ನಾದರೂ ಖರೀದಿ ಮಾಡಿ ಎಂದು ಸರ್ಕಾರವನ್ನು ಒತ್ತಾಯ ಮಾಡುತ್ತಿದ್ದಾರೆ. ಆದರೆ, ಸರ್ಕಾರ ಕೇವಲ 2.1 ಮೆಟ್ರಿಕ್ ಲಕ್ಷ ಟನ್ ರಾಗಿಯನ್ನು ಕನಿಷ್ಠ ಬೆಂಬಲ ಬೆಲೆಯಡಿ ಕೊಳ್ಳಲು ನಿಗದಿ ಮಾಡಿ, ಈ ವರೆಗೆ 1.9 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಿದೆ. ಕನಿಷ್ಠ ಬೆಂಬಲ ಬೆಲೆಯಡಿ ಖರೀದಿಸುವ ರಾಗಿಗೂ, ಮಾರುಕಟ್ಟೆ ಬೆಲೆಗೂ ಸುಮಾರು 1,500 ರೂಪಾಯಿ ವ್ಯತ್ಯಾಸವಿದೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ವಾಗ್ದಾಳಿ

ಕೇಂದ್ರ ಸರ್ಕಾರ ಬೆಲೆ ಏರಿಕೆ ಮೂಲಕ ಎಲ್ಲ ವರ್ಗದ ಜನರ ಮೇಲೆ ಗದಾ ಪ್ರಹಾರ ಮಾಡುತ್ತಿದೆ. ಪೆಟ್ರೋಲ್ ಡೀಸೆಲ್, ಅಡುಗೆ ಅನಿಲದ ಬೆಲೆ ಕಳೆದ 11 ದಿನಗಳಿಂದ ಏರುತ್ತಲೇ ಇದೆ. ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ ಬೆಲೆ ಏರಿಕೆ ನಿರಂತರವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಕಿಡಿಕಾರಿದರು.

ಇದನ್ನೂ ಓದಿ:#LuckyDipCM, ವಚನಭ್ರಷ್ಟ: ಕುಮಾರಸ್ವಾಮಿ ವಿರುದ್ಧ ಬಿಜೆಪಿ ಸರಣಿ ಟ್ವೀಟ್ ದಾಳಿ

ಬೆಲೆ ಏರಿಕೆಯಿಂದ ನಿತ್ಯ ನರಕ ಯಾತನೆ

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು, ಬಡವರು, ವ್ಯಾಪಾರಸ್ಥರು, ಮಧ್ಯಮ ವರ್ಗದವರು, ಸಾಮಾನ್ಯ ಜನರ ಮೇಲೆ ಈ ಗದಾ ಪ್ರಹಾರ ನಡೆದುಕೊಂಡು ಬಂದಿದೆ. ತೆರಿಗೆ ಹೆಸರಲ್ಲಿ ಕೇಂದ್ರ ಸರ್ಕಾರ ಲೂಟಿ ಮಾಡುತ್ತಿದೆ. ಅಚ್ಛೇ ದಿನದ ಮಾತು ಕೊಟ್ಟಿದ್ದ ಮೋದಿ ಅವರು ಬೆಲೆ ಏರಿಕೆಯಿಂದ ನಿತ್ಯ ನರಕ ಯಾತನೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಆದಾಯ ಡಬಲ್ ಮಾಡುತ್ತೇವೆ ಎಂದರು ಮೋದಿ, ವೆಚ್ಚವನ್ನು ಮಾತ್ರ ಡಬಲ್ ಮಾಡಿದ್ದಾರೆ. ಅವರ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ನಮ್ಮ ರಾಜ್ಯದಿಂದ ಕೇಂದ್ರ ಕೃಷಿ ಸಚಿವರಿದ್ದರೂ ರಾಗಿ, ಭತ್ತ, ಜೋಳ, ತೊಗರಿ ಬೆಂಬಲ ಬೆಲೆ ನೀಡುತ್ತಿಲ್ಲ. ಖರೀದಿಯಲ್ಲೂ ಮಿತಿ ಹೇರಿದ್ದಾರೆ. 50 ಕೆಜಿಯ ಆಂP ರಸಗೊಬ್ಬರ ಚೀಲದ ಬೆಲೆ 150 ರೂ. ಹೆಚ್ಚಾಗಿದ್ದು, ಅದರ ಬೆಲೆ 1350 ರೂ. ಆಗಿದೆ. ಇನ್ನು ಚೀಲಕ್ಕೆ ಹೆಚ್ಚುವರಿಯಾಗಿ 3 ರೂ. ದರ ಏರಿಸಲಾಗಿದೆ. ದೇಶದ ರೈತರು 1.20 ಕೋಟಿ ಟನ್ ಗಳಷ್ಟು ಆಂP ರಸಗೊಬ್ಬರ ಬಳಕೆ ಮಾಡುತ್ತಿದ್ದಾರೆ. ಹೀಗಾಗಿ ರೈತರ ಮೇಲೆ ಹೆಚ್ಚುವರಿಯಾಗಿ 3600 ಕೋಟಿ ರೂ. ಹೊರೆ ಬೀಳಲಿದೆ ಎಂದರು.

ಇದನ್ನೂ ಓದಿ:Bhaskar Rao: ಯಾವ ಪಕ್ಷ ಸೇರ್ತಿದ್ದಾರೆ ನಿವೃತ್ತ IPS ಅಧಿಕಾರಿ ಭಾಸ್ಕರ್ ರಾವ್? ರಾಜಕೀಯ ಸೇರ್ಪಡೆಗೆ ಮೂಹೂರ್ತ ಫಿಕ್ಸ್

ಇದೇ ಮೋದಿ ಸರ್ಕಾರ ಸಾಧನೆ

ಕೃಷಿ ಮೇಲೂ ತೆರಿಗೆ ವಿಧಿಸಿರುವುದು ಮೋದಿ ಅವರ ಸರ್ಕಾರದ ಮತ್ತೊಂದು ಸಾಧನೆ. ರಸಗೊಬ್ಬರದ ಮೇಲೆ ಶೇ. 5ರಷ್ಟು, ಕಳೆನಾಶಕದ ಮೇಲೆ ಶೇ.18ರಷ್ಟು, ಟ್ರ್ಯಾಕ್ಟರ್ ಹಾಗೂ ಕೃಷಿ ಸಲಕರಣೆಗಳ ಮೇಲೆ ಶೇ.12ರಷ್ಟು ತೆರಿಗೆ ವಿಧಿಸಲಾಗಿದೆ. ಮೋದಿ ಹಾಗೂ ಬೊಮ್ಮಾಯಿ ಅವರ ಡಬಲ್ ಇಂಜಿನ್ ಸರ್ಕಾರ ಕಳೆದ ವಾರದಿಂದ ಡೀಸೆಲ್ ಬೆಲೆಯನ್ನು 8.00 ರೂ. ಏರಿಕೆ ಮಾಡಿದೆ. ಸಗಟು ಡೀಸೆಲ್ ವ್ಯಾಪಾರದಲ್ಲಿ 25 ರೂ. ಹೆಚ್ಚಳ ಮಾಡಲಾಗಿದೆ ಎಂದು ಹೇಳಿದರು
Published by:Pavana HS
First published: