Sexual abuse: 5 ವರ್ಷದ ಮಗುವಿನೊಂದಿಗೆ ಅಸಭ್ಯ ವರ್ತನೆ; ಆರೋಪಿ ವಶಕ್ಕೆ ಪಡೆದ ಸಂಜಯನಗರ ಪೊಲೀಸರೊಂದಿಗೆ ಸ್ಥಳೀಯರ ವಾಗ್ವಾದ, ಠಾಣೆ ಮುಂದೆ ಪ್ರತಿಭಟನೆ
ನೂರಾರು ಸ್ಥಳೀಯರು ಸಂಜಯನಗರ ಪೊಲೀಸ್ ಠಾಣೆ ಮುಂದಿನ ರಸ್ತೆ ಮಧ್ಯೆದಲ್ಲಿ ಬ್ಯಾರಿಕೇಡ್ ಹಾಕಿ ಪ್ರತಿಭಟನೆ ಮಾಡುತ್ತಿದ್ದಾರೆ. ಪೊಲೀಸ್ ಠಾಣೆಗೆ ಹೆಬ್ಬಾಳ ಶಾಸಕ ಬೈರತಿ ಸುರೇಶ್ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದ್ದಾರೆ.
ಬೆಂಗಳೂರು: ಐದು ವರ್ಷ ಬಾಲಕಿ ಜೊತೆ ಅಸಭ್ಯವಾಗಿ ವರ್ತನೆ (Sexual abuse) ತೋರಿದ ಘಟನೆ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿನ ಗೆದ್ದಲಹಳ್ಳಿಯಲ್ಲಿ (Sanjaynagar Police Station Limits Geddalahalli) ನಡೆದಿದೆ. ಆರೋಪ ಸಂಬಂಧ ಪಶ್ಚಿಮಬಂಗಾಳ ಮೂಲದ ಯುವಕನ್ನು ಸಂಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಆತನ ಮನೆ ಬಳಿಕೆ ತೆರಳಿ ಬಂಧಿಸಿ ಕರೆದೊಯ್ಯುವ ವೇಳೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿ, ಆರೋಪಿಯನ್ನು ತಮ್ಮ ವಶಕ್ಕೆ ನೀಡಿ ಎಂದು ಆಗ್ರಹಿಸಿದ್ದಾರೆ. ಅಲ್ಲದೇ ಪೊಲೀಸರ ವಾಹನಗಳನ್ನು ತಡೆದಿದ್ದಾರೆ. ಆ ಬಳಿಕ, ಸಂಜಯನಗರ ಪೊಲೀಸ್ ಠಾಣೆ ಎದುರು ನೂರಾರು ಜನರು ಸೇರಿ ರಸ್ತೆ ತಡೆದು, ಪ್ರತಿಭಟೆ ನಡೆಸಿದ್ದಾರೆ.
ಐದು ವರ್ಷದ ಮಗುವನ್ನು ಛೋಟಾ ಬೀಮ್ ತೋರಿಸುವುದಾಗಿ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದಾನೆ. ಮಗುವಿನ ಎದೆಗಳ ಮೇಲೆ ಗಾಯಗಳಾಗಿವೆ ಎಂದು ಆರೋಪಿ ವಿರುದ್ಧ ದೂರು ದಾಖಲಿಸಲಾಗಿದೆ. ಆರೋಪಿಯನ್ನು ಪೊಲೀಸರು ಭಾನುವಾರ ರಾತ್ರಿ ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗುವಾಗ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಆರೋಪಿಯನ್ನು ತಮಗೆ ಒಪ್ಪಿಸಿ ಎಂದು ಪೊಲೀಸರೊಂದಿಗೆ ವಾಗ್ವಾದ ಕೂಡ ನಡೆಸಿದ್ದಾರೆ. ಬಳಿಕ ಆರೋಪಿಯನ್ನು ಠಾಣೆಗೆ ಕರೆದುಕೊಂಡು ಹೋದ ಬಳಿಕವೂ ಠಾಣೆ ಎದುರು ನೂರಾರು ಜನರು ಜಮಾಯಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಕ್ಷಣಕ್ಷಣಕ್ಕೂ ಪ್ರತಿಭಟನಾಕಾರರು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಂಜಯನಗರ ಪೊಲೀಸರು ಭದ್ರತೆ ಹೆಚ್ಚಿಸಿಕೊಂಡಿದ್ದಾರೆ. ಸ್ಥಳದಲ್ಲಿ ಕೆಎಸ್ ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ನೂರಾರು ಸ್ಥಳೀಯರು ಸಂಜಯನಗರ ಪೊಲೀಸ್ ಠಾಣೆ ಮುಂದಿನ ರಸ್ತೆ ಮಧ್ಯೆದಲ್ಲಿ ಬ್ಯಾರಿಕೇಡ್ ಹಾಕಿ ಪ್ರತಿಭಟನೆ ಮಾಡುತ್ತಿದ್ದಾರೆ. ಪೊಲೀಸ್ ಠಾಣೆಗೆ ಹೆಬ್ಬಾಳ ಶಾಸಕ ಬೈರತಿ ಸುರೇಶ್ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದ್ದಾರೆ.