Guest Lecturers: ಅತಿಥಿ ಉಪನ್ಯಾಸಕರ ಬೇಡಿಕೆಗಳ ವಿಚಾರವಾಗಿ ಒಂದೆರಡು ದಿನಗಳಲ್ಲೇ Good News

ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರ ಬೀಳಲಿದೆ. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಮನವಿ ಮಾಡಿದರು.

ಸಚಿವರ ನೇತೃತ್ವದಲ್ಲಿ ಸಭೆ

ಸಚಿವರ ನೇತೃತ್ವದಲ್ಲಿ ಸಭೆ

  • Share this:
ಬೆಂಗಳೂರು: ರಾಜ್ಯದಲ್ಲಿರುವ 14 ಸಾವಿರ ಅತಿಥಿ ಉಪನ್ಯಾಸಕರು ( Guest Lecturers) ಎದುರಿಸುತ್ತಿರುವ ಸಮಸ್ಯೆಗಳನ್ನು (Problems) ಪರಿಹರಿಸುವ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ (CM Bommai) ಸಾಕಷ್ಟು ಚರ್ಚಿಸಿದ್ದು, ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರ ಬೀಳಲಿದೆ. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ (CN Ashwath Narayan) ಮನವಿ ಮಾಡಿದರು. ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆಗಳನ್ನು ಕುರಿತು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಚೇರಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ತಮ್ಮ ನೇತೃತ್ವದಲ್ಲಿ ಮಂಗಳವಾರ ನಡೆದ ಮೂರು ತಾಸುಗಳ ಸಭೆಯ ನಂತರ ಅವರು ಈ ಭರವಸೆ ನೀಡಿದರು. ಸಭೆಯಲ್ಲಿ ಉಪನ್ಯಾಸಕರಿಗೆ ಸಂಬಂಧಿಸಿದ ನಾಲ್ಕೈದು ಸಂಘಗಳ ಪ್ರತಿನಿಧಿಗಳೂ ಭಾಗವಹಿಸಿದ್ದರು.

ಸಹಾನುಭೂತಿಯಿಂದ ಪರಿಶೀಲಿಸಲಾಗುತ್ತಿದೆ

ಸಭೆಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ತಿನ ಹಲವು ಸದಸ್ಯರೊಂದಿಗೆ ವಿಷಯವನ್ನು ಕುರಿತು ಚರ್ಚಿಸಲಾಯಿತು. ಜೊತೆಗೆ ಅತಿಥಿ ಉಪನ್ಯಾಸಕರ ಸಂಘಗಳ ಪರವಾಗಿ ಸಲ್ಲಿಸಿದ ಅಹವಾಲುಗಳನ್ನು ಕೂಡ ಪರಿಶೀಲಿಸಲಾಯಿತು. ನಂತರ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು. ಸಿಎಂ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆಯುತ್ತಿರುವ ಕಾರಣ ಒಂದೆರಡು ದಿನಗಳಲ್ಲಿ ಸೂಕ್ತ ತೀರ್ಮಾನ ಪ್ರಕಟಿಸಲಾಗುವುದು. ಅತಿಥಿ ಉಪನ್ಯಾಸಕರ ಸಮಸ್ಯೆ ಇತ್ಯರ್ಥದಲ್ಲಿ ಆರ್ಥಿಕ ಹೊರೆ ಮುಂತಾದ ಅಂಶಗಳಿವೆ. ಒಟ್ಟಿನಲ್ಲಿ ವಿಚಾರವನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುತ್ತಿದೆ ಎಂದರು.

ಇದನ್ನೂ ಓದಿ: ರಾಜ್ಯದಲ್ಲಿ Weekend Curfew, Night Curfew ವಿಸ್ತರಣೆ.. ಎಲ್ಲಿಯವರೆಗೆ..?

ವಿ.ವಿ.ಗಳ ಸ್ವಾಯತ್ತೆ, ಆರ್ಥಿಕ ಸ್ವಾವಲಂಬನೆ

ಎನ್ಇಪಿ ಮಾನದಂಡಗಳಿಗೆ ಅನುಸಾರವಾಗಿ ವಿ.ವಿ.ಗಳಲ್ಲಿ ಆಗಬೇಕಾದ ಸುಧಾರಣೆ ಮತ್ತು ನೇಮಕಾತಿ ವಿಧಿವಿಧಾನ ಕುರಿತು ಸರಕಾರ ರಚಿಸಿರುವ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪಾಶ್ಚಾತ್ಯ ದೇಶಗಳ ವಿ.ವಿ.ಗಳಲ್ಲಿರುವ ಬೋಧನಾ ವ್ಯವಸ್ಥೆ, ಸಿಬ್ಬಂದಿ ಬಲ, ಕೋರ್ಸುಗಳ ಸ್ವರೂಪ, ಸರಕಾರ ಕೊಡಬೇಕಾದ ಅನುದಾನದ ಪ್ರಮಾಣ ಎಷ್ಟಿರಬೇಕು ಎನ್ನುವಂತಹ ಮಹತ್ತ್ವದ ವಿಚಾರಗಳನ್ನು ಕುರಿತು ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ ನಾರಾಯಣ  ಚರ್ಚಿಸಿದರು. ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷರು ಮತ್ತು ಹಲವು ಕುಲಪತಿಗಳೊಂದಿಗೆ ಸಂವಾದ ನಡೆಸಿದ ಸಚಿವರು, `ವಿಶ್ವವಿದ್ಯಾಲಯಗಳು ಸ್ವಾವಲಂಬಿ ಸಂಸ್ಥೆಗಳಾಗಿ ಬೆಳೆಯಬೇಕಾದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಮಿತಿಯು ನೀಡಿರುವ ಕೆಲವು ಸಲಹೆ ಮತ್ತು ಶಿಫಾರಸುಗಳು ಅರ್ಥಪೂರ್ಣವಾಗಿವೆ. ಈ ನಿಟ್ಟಿನಲ್ಲಿ ಇನ್ನಷ್ಟು ಸ್ಪಷ್ಟತೆ ಬೇಕಾಗಿದ್ದು, ಮುಂದಿನ ಸಭೆಯೊಳಗೆ ಇದಕ್ಕೆ ಅಂತಿಮ ರೂಪುರೇಷೆ ನೀಡಬೇಕು’ ಎಂದು ಸೂಚಿಸಿದರು.

ಸಾಕಷ್ಟು ಯೋಜನೆಗಳ ಬಗ್ಗೆ ಚರ್ಚೆ 

ವಿ.ವಿ.ಗಳಲ್ಲಿ ಸ್ವಾಯತತ್ತೆ ಮತ್ತು ಸ್ವಾವಲಂಬನೆ ಎರಡೂ ಬರಬೇಕು. ಆದ್ದರಿಂದ ಕನಿಷ್ಠ ಮೂರನೇ ಒಂದು ಭಾಗದಷ್ಟು ಆರ್ಥಿಕ ಖರ್ಚುವೆಚ್ಚಗಳನ್ನಾದರೂ ಈ ಸಂಸ್ಥೆಗಳು ಉದ್ದಿಮೆಗಳೊಂದಿಗೆ ಸಹಭಾಗಿತ್ವ ಹೊಂದುವ ಮೂಲಕ ತಾವೇ ಭರಿಸುವಂತಾಗಬೇಕು ಎನ್ನುವ ಸಲಹೆಯನ್ನು ಅವರು ನೀಡಿದರು. `ಪಾಶ್ಚಾತ್ಯ ವಿ.ವಿ.ಗಳಲ್ಲಿ ನಮ್ಮಲ್ಲಿರುವಷ್ಟು ಬೋಧನಾ ಸಿಬ್ಬಂದಿಯೇ ಇಲ್ಲ. ನಮ್ಮಲ್ಲಿರುವ ಬೋಧನಾ ಕ್ರಮಕ್ಕೆ ಈಗಿರುವ ಬೋಧಕ ವರ್ಗದಲ್ಲಿ ಮೂರನೇ ಎರಡರಷ್ಟು ಮಂದಿಯೇ ಸಾಕು.  ಉಳಿದ ಇನ್ನೊಂದು ಭಾಗದ ಕಾರ್ಯಭಾರವನ್ನು ಸಂಶೋಧನಾ ವಿದ್ಯಾರ್ಥಿಗಳ ನೆರವಿನಿಂದ ಪೂರೈಸಬಹುದು. ಇದರ ಜೊತೆಗೆ ವಾಣಿಜ್ಯ ಮತ್ತು ಕೈಗಾರಿಕಾ ವಲಯದ ವಿಷಯತಜ್ಞರನ್ನು ಸಂದರ್ಶಕ ಮತ್ತು ಗೌರವ ಬೋಧಕರನ್ನಾಗಿ ಪರಿಗಣಿಸಿ, ಅವರ ಸೇವೆಯನ್ನು ಪಡೆಯುವ ವ್ಯವಸ್ಥೆಯನ್ನು ತರುವ ಸಾಧ್ಯತೆಗಳ ಬಗ್ಗೆ ಯೋಚಿಸಬಹುದು ಎಂದು ಅವರು ಹೇಳಿದರು.

ಇದನ್ನೂ ಓದಿ: Marathi Schools: ಗಡಿ ಬಿಕ್ಕಟ್ಟಿನ ನಡುವೆಯೂ ಮರಾಠಿ ಶಾಲೆಗೆ ದಾಖಲಾಗಲು ರಾಜ್ಯದಲ್ಲಿ ನೂಕುನುಗ್ಗಲು..!

ಮೆರಿಟ್ ಆಧಾರದ ಮೇಲೆ ನೇಮಕ

ಎನ್ಇಪಿ ಪ್ರಕಾರ ವಿಶ್ವವಿದ್ಯಾಲಯಗಳು ಬೋಧನಾ ಸಿಬ್ಬಂದಿಯ ನೇಮಕಾತಿ ವಿಧಾನವನ್ನು ಆಮೂಲಾಗ್ರವಾಗಿ ಬದಲಿಸಿಕೊಳ್ಳಬೇಕಿದೆ; ಇದರ ಜತೆಯಲ್ಲೇ ಪದವಿ ಮತ್ತು ಸ್ನಾತಕೋತ್ತರ ಹಂತದಲ್ಲಿ ಹಾಗೂ ಸಂಶೋಧನೆಯಲ್ಲಿ ಅತ್ಯುನ್ನತ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕಾಗಿದೆ ಎಂದು ಸಚಿವರು ಗಮನ ಸೆಳೆದರು. ಈಗಿರುವ ವಿ.ವಿ.ಗಳಲ್ಲಿ ಸರಕಾರದ ಅನುದಾನವು ಪೋಲಾಗುತ್ತಿದೆ. ವಿ.ವಿ.ಗಳನ್ನು ಸಾರ್ವಜನಿಕ ಮತ್ತು ಖಾಸಗಿ ವಲಯಗಳ ಪಾಲುದಾರಿಕೆ ಮಾದರಿಯಲ್ಲಿ (ಪಿಪಿಪಿ) ನಿರ್ವಹಣೆ ಮಾಡುವ ಬಗ್ಗೆ ಗಂಭೀರವಾಗಿ ಆಲೋಚಿಸಬೇಕು. ಉದ್ದಿಮೆಗಳ ಸಿಎಸ್ಆರ್ ನಿಧಿ ಮತ್ತು ಹಿರಿಯ ವಿದ್ಯಾರ್ಥಿ ಸಂಘಗಳ ಮೂಲಕ ವಿ.ವಿ.ಗಳನ್ನು ಅಭಿವೃದ್ಧಿ ಪಡಿಸಬೇಕು. ಸಹಾಯಕರ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಸಾಮಾನ್ಯ ಅರ್ಹತಾ ಪರೀಕ್ಷೆ ನಡೆಸಿ, ಮೆರಿಟ್ ಆಧಾರದ ಮೇಲೆ ನೇಮಕ ಪ್ರಕ್ರಿಯೆ ನಡೆಸಲಾಗುವುದು ಎಂದು ಅವರು ನುಡಿದರು.

ಸಭೆಯಲ್ಲಿ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ. ಬಿ.ತಿಮ್ಮೇಗೌಡ, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್, ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತಕುಮಾರ್, ಶ್ರೀ ಕೃಷ್ಣದೇವರಾಯ ವಿವಿ ಕುಲಪತಿ ಪ್ರೊ.ಸಿದ್ದು ಆಲೂರು, ರಾಣಿ ಚೆನ್ನಮ್ಮ ವಿವಿ ಕುಲಪತಿ ಪ್ರೊ.ರಾಮಚಂದ್ರಗೌಡ, ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಅವರಿದ್ದರು.
Published by:Kavya V
First published: