Corona Review Meeting: ಹೋಮ್ ಐಸೋಲೇಷನ್​​ನಲ್ಲಿ ಇರುವವರಿಗೆ ಮೆಡಿಕಲ್ ಕಿಟ್ ವಿತರಣೆ

ಬಾಕಿ ಇರುವ 40 ಲಕ್ಷ ಜನರಿಗೆ 2 ಡೋಸ್ ಪೂರ್ಣ ಮಾಡಲು ಸೂಚನೆ ನೀಡಲಾಗಿದೆ. ಮಕ್ಕಳಿಗೆ ಬೇಗ ಲಸಿಕೆ ಕೊಡಲು ಸಿಎಂ ಸೂಚನೆ ನೀಡಿದ್ದಾರೆ. ಹೋಮ್ ಐಸೋಲೇಷನ್ ನಲ್ಲಿ ಇರೋರಿಗೆ ಮೆಡಿಕಲ್ ಕಿಟ್ ಕೊಡಲು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಆರೋಗ್ಯ ಸಚಿವ ಡಾ.ಕೆ.ಸುಧಾಕರ್

  • Share this:
ಬೆಂಗಳೂರು: ರಾಜ್ಯದಲ್ಲಿನ ಕೊರೊನಾ(Corona) ಸ್ಥಿತಿಗತಿಗಳ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai)ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಪಾಲ್ಕೊಂಡ ಬಳಿಕ ಆರೋಗ್ಯ ಸಚಿವ ಕೆ ಸುಧಾಕರ್ (Health Minister K Sudhakar) ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಟಾಸ್ಕ್ ಫೋರ್ಸ್ ಸದಸ್ಯರ ಜೊತೆ ಸಿಎಂ ಸಭೆ ಮಾಡಿದ್ದಾರೆ. ಯಾರಿಗೆ ಪಾಸಿಟಿವ್ ಇರ್ತಾರೆ ಅವರ ಮೇಲೆ ನಿಗಾ ವಹಿಸಿ 5 ರಿಂದ 7 ದಿನಗಳೊಗೆ ಸಂಪರ್ಕ ಮಾಡಿ ಮಾತಾಡಬೇಕು. ಅವರಿಗೆ ಧೈರ್ಯ ಹೇಳುವಂತೆ ಸೂಚನೆ ನೀಡಿದ್ದಾರೆ. ಬಾಕಿ ಇರುವ 40 ಲಕ್ಷ ಜನರಿಗೆ 2 ಡೋಸ್ ಪೂರ್ಣ ಮಾಡಲು ಸೂಚನೆ ನೀಡಲಾಗಿದೆ. ಮಕ್ಕಳಿಗೆ ಬೇಗ ಲಸಿಕೆ ಕೊಡಲು ಸಿಎಂ ಸೂಚನೆ ನೀಡಿದ್ದಾರೆ. ಹೋಮ್ ಐಸೋಲೇಷನ್ ನಲ್ಲಿ ಇರೋರಿಗೆ ಮೆಡಿಕಲ್ ಕಿಟ್ ಕೊಡಲು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಔಷಧಿ‌ ಕಿಟ್ ವಿತರಣೆ

ಗ್ರಾಮೀಣ ಭಾಗಗಳಲ್ಲಿ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಸೆಕೆಂಡ್ ಡೋಸ್ ಗೆ ವೇಗ ಕೊಡಬೇಕು. 8-9 ಜಿಲ್ಲೆಗಳಲ್ಲಿ ಲಸಿಕಾಕರಣ ವಿಳಂಬ ಆಗಿದೆ, ಆ ಜಿಲ್ಲೆಗಳ‌ ಜತೆ ಸಿಎಂ ಸಭೆ ಮಾಡ್ತಾರೆ. ಔಷಧಿ‌ ಕಿಟ್ ಗಳನ್ನು ಹೋಂ ಐಸೋಲೇಷನ್ ನಲ್ಲಿರೋರಿಗೆ ತಲುಪಿಸಲು ಸೂಚನೆ ನೀಡಲಾಗಿದೆ. ಸ್ವಯಂ ಸೇವಾ ಸಂಘಗಳು, ಸಂಸ್ಥೆಗಳ ನೆರವು ಪಡೆದು ಜನರಿಗೆ ಜಾಗೃತಿ, ಕಿಟ್ ಹಂಚಲಾಗುವುದು. ಮಾಸ್ಕ್ ಗಳನ್ನು ಧರಿಸುವ ಬಗ್ಗೆ ಹೆಚ್ಚು ಪ್ರಚಾರ ಅಗತ್ಯವಿದೆ.

ಇದನ್ನೂ ಓದಿ: ಜ.25ರ ವೇಳೆಗೆ ರಾಜ್ಯದಲ್ಲಿ Corona ಸ್ಫೋಟ ಸಾಧ್ಯತೆ: ಶುಕ್ರವಾರದವರೆಗೆ ಕಾದು ನೋಡಲು ಮುಂದಾದ ಸರ್ಕಾರ

ಶುಕ್ರವಾರ ಮಹತ್ವದ ಸಭೆ

ಐಸಿಎಂಆರ್ ಸೂಚಿಸಿರುವ ಪರೀಕ್ಷೆಗಳನ್ನು ಮುಂದುವರೆಸುತ್ತೇನೆ. ಹೆಚ್ಚು ಟೆಸ್ಟಿಂಗ್ ನಮ್ಮಲ್ಲಿ ಆಗ್ತಿದೆ. ಹೀಗಾಗಿ ಹೆಚ್ಚು ಕೇಸ್ ಗಳು ಬರ್ತಿವೆ. ಮಕ್ಕಳಲ್ಲಿ ಸೋಂಕು ತೀವ್ರತೆ ಹೆಚ್ಚು ಇಲ್ಲ. ಶುಕ್ರವಾರ ಮತ್ತೊಂದು ಸಭೆ ಮಾಡಿ ವೀಕೆಂಡ್ ಕರ್ಫ್ಯೂ ಬಗ್ಗೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳುತ್ತೇವೆ. ನಮ್ಮಲ್ಲಿ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು. ಹೋಟೆಲ್ ಉದ್ಯಮಿಗಳು ವೀಕೆಂಡ್ ಕರ್ಫ್ಯು ಬೇಡ ಅಂತ ವಿರೋಧ ಮಾಡ್ತಿದ್ದಾರೆ.  ಇದೆಲ್ಲದರ ಬಗ್ಗೆ ಶುಕ್ರವಾರ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದರು.

ಸಿಎಂ ನೇತೃತ್ವದಲ್ಲಿ ಸಭೆಯಲ್ಲಿ ಪ್ರಮುಖಾಂಶಗಳು

1)ಬೆಂಗಳೂರಿನಲ್ಲಿ OPDಗಳಿಗೆ ಹೆಚ್ಚಿನ ಗಮನ ಕೊಡಲು ಸೂಚಿಸಲಾಯಿತು.. ಹೆಚ್ಚು ಸಿಬ್ಬಂದಿ ನಿಯೋಜಿಸಲು ಸೂಚನೆ

2) ಜನ ಟ್ರಯಾಜಿಂಗ್ ಗೆ ದಾಖಲಾಗುವುದನ್ನು ನಿಯಂತ್ರಿಸಲು ಸಲಹೆ

3) ಹೋಮ್ ಐಸೊಲೇಷನ್ ಕಾಲ್ಸ್ ಹೆಚ್ಚಿಸಲು ಸೂಚಿಸಲಾಯಿತು. ಕೊ-ಮಾರ್ಬಿಡಿಟಿ ಇರುವವರಿಗೆ ದಿನಕ್ಕೆ ಒಂದು ಬಾರಿ ಕರೆ ಮಾಡಿ ಅವರ ಆರೋಗ್ಯ ಸ್ಥಿತಿ ಅವಲೋಕಿಸಬೇಕು ಹಾಗೂ ವಿಶ್ವಾಸ ಮೂಡಿಸಬೇಕು.

4) ಮನೆಯವರಿಗೆ ಹರಡದಂತೆ ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚಿಸಿದರು.

5) ಔಷಧಿ ಕಿಟ್ ಗಳನ್ನು ಮನೆಗಳಿಗೆ ಪರಿಣಾಮಕಾರಿಯಾಗಿ ತಲುಪಿಸಲು ಸೂಚಿಸಿದರು.

6) ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಕಾರ್ಯನಿರ್ವಹಿಸುವ ಮೂಲಕ ಜನರಲ್ಲಿರುವ ನಕಾರಾತ್ಮಕ ಮನೋಭಾವವನ್ನು ತೊಡೆಯಲು ಸಲಹೆ ನೀಡಿದರು.

7) ಸ್ಥಳೀಯ ವೈದ್ಯರು ಕನ್ಸಲ್ಟೇಷನ್ ಮಾಡುವಂತಾಗಬೇಕು.

8) ಸೋಂಕಿತ ಮಕ್ಕಳ ಕುರಿತು, ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಪೋಷಕರಿಗೆ ಧೈರ್ಯ ಹೇಳಬೇಕು. ಔಷಧಿ ಕಿಟ್ ಗಳನ್ನು ನೀಡಬೇಕು. ಮಕ್ಕಳಿಗೆ ಪ್ರತ್ಯೇಕ ಔಷಧಿ ಕಿಟ್ ಸಿದ್ಧಪಡಿಸಬೇಕು.

9) ಗ್ರಾಮೀಣ ಪ್ರದೇಶದಲ್ಲಿ ಜನರಲ್ಲಿ ವಿಶ್ವಾಸ ಮೂಡಿಸಬೇಕು.

10) ಆಕ್ಸಿಜನ್ ಪ್ಲಾಂಟ್ಗಳನ್ನು ಸಜ್ಜುಗೊಳಿಸಿ, ಸಿಬ್ಬಂದಿ, ಇಂಧನ ಮೊದಲಾದವುಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚಿಸಲಾಗಿದೆ.

11) ಆಸ್ಪತ್ರೆಗಳಲ್ಲಿ ಜನರೇಟರುಗಳ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದರು.

12) ಮಕ್ಕಳು ಮತ್ತು 60 ವರ್ಷ ಮೇಲ್ಪಟ್ಟವರ ಕುರಿತು ಹೆಚ್ಚಿನ ನಿಗಾ ವಹಿಸಬೇಕು.

13) ಲಸಿಕೆ ಅಭಿಯಾನ ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದರು.

14) ಔಷಧಿಗಳನ್ನು ಕೂಡಲೇ ಒದಗಿಸಬೇಕು. ಅವುಗಳನ್ನು ಸಕಾಲದಲ್ಲಿ ಆಸ್ಪತ್ರೆಗಳಿಗೆ ತಲುಪಿಸಲು ಕ್ರಮ ವಹಿಸಲು ಸೂಚಿಸಿದರು.

15) ಜನರು ಕೋವಿಡ್-ಸೂಕ್ತ ನಡವಳಿಕೆಯನ್ನು ಅನುಸರಿಸುವ ಬಗ್ಗೆ ಮಾಧ್ಯಮಗಳಲ್ಲಿ ಜಾಗೃತಿ ಮೂಡಿಸಲು ತೀರ್ಮಾನಿಸಲಾಯಿತು.

16) ಭಾರತ ಸರ್ಕಾರದ ನಿಯಮಾವಳಿಗಳಂತೆ  ಐ.ಸಿ.ಎಂ.ಆರ್ ಸೂಚಿಸಿರುವ ಶ್ರೇಣೀಕೃತ ಮಾದರಿಯಲ್ಲಿ ಪರೀಕ್ಷೆ ನಡೆಸಲು ಅನುಸರಿಸಲು ಸೂಚಿಸಿದರು.

17) ಎರಡನೇ ಡೋಸ್ ಲಸಿಕೆ ಪಡೆದವರ ಸಂಖ್ಯೆ  ಕಡಿಮೆ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಸಿಇಒ ಗಳೊಂದಿಗೆ ವಿಡಿಯೋ ಸಂವಾದ ನಡೆಸಲು ನಿರ್ಧರಿಸಲಾಯಿತು.

18) 15 ರಿಂದ 18 ವರ್ಷ  ವಯೋಮಾನದವರಿಗೆ  ಲಸಿಕಾ ಅಭಿಯಾನವನ್ನು ಚುರುಕುಗೊಳಿಸಲು ಸೂಚಿಸಲಾಯಿತು.
Published by:Kavya V
First published: