Heavy Rains in Bengaluru: ಬೆಂಗಳೂರಲ್ಲಿ ಮಧ್ಯಾಹ್ನವೇ ಭರ್ಜರಿ ಮಳೆ, ಇನ್ನೂ 2 ದಿನ ವರುಣನ ಕಾಟ ತಪ್ಪಲ್ಲ!

yellow alert issued for 6 districts: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ  ವರುಣ ಅಬ್ಬರಿಸಲಿದ್ದಾನೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ 6 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ಘೋ ಘೋಷಿಸಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು: ನಗರದಲ್ಲಿ ಮಧ್ಯಾಹ್ನವೇ ವರುಣ ಅಬ್ಬರಿಸುತ್ತಿದ್ದು ಬಹುತೇಕ ಕಡೆ ಮಳೆ ಸುರಿದಿದೆ. ಹವಾಮಾನ ಇಲಾಖೆ(Department of Meteorology) ಅಧಿಕಾರಿಗಳು ತಿಳಿಸಿರುವಂತೆ ಬೆಂಗಳೂರಲ್ಲಿ ಇಂದಿನಿಂದ ಆ.31ರವರೆಗೆ ಮಳೆಯ ಆಗಲಿದ್ದು, ಮೋಡ ಮುಸುಕಿದ ವಾತಾವರಣೆ ಇರಲಿದೆ. ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಮಲ್ಲೇಶ್ವರಂ, ಯಶವಂತಪುರ, ಶೇಷಾದ್ರಿಪುರಂ, ಮೆಜೆಸ್ಟಿಕ್, ಕಾರ್ಪೊರೇಷನ್, ಬಸವೇಶ್ವರನಗರ, ಶ್ರೀರಾಂಪುರ, ವಿಜಯನಗರ ಸುತ್ತಮುತ್ತ ಮಳೆಯಾಗಿದೆ.  ತಗ್ಗುಪ್ರದೇಶಗಳಿಗೆ ಮಳೆನೀರು ನುಗ್ಗುತ್ತಿದ್ದು ಅವಾಂತರ ಸೃಷ್ಟಿಸಿದೆ.  ಇಂದು ಕರಾವಳಿ ಭಾಗದಲ್ಲಿ ಅತ್ಯಧಿಕ ಮಳೆಯಾಗಿದೆ. ಕೋಲಾರ ಹಾಗೂ ಕೆಜಿಎಫ್​​ ಭಾಗದಲ್ಲಿ, ಭಾಗಮಂಡಲದಲ್ಲಿ 5 ಸೆ.ಮೀ. ಮಳೆಯಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ  ವರುಣ ಅಬ್ಬರಿಸಲಿದ್ದಾನೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ 6 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್(yellow alert )ಘೋಷಿಸಲಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾದ ಮೋಡ ಕವಿದ ವಾತಾವರಣವಿರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆಗಸ್ಟ್​​​ 30ರವರೆಗೂ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಲೆನಾಡಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಇಂದೂ ಸಹ ಮಳೆ ಮುಂದುವರೆಯಲಿದೆ. ನಾಳೆಯಿಂದ ಮುಂದಿನ 2 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ., ರಾಮನಗರ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಬೆಂಗಳೂರು ನಗರ, ಹಾಸನ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಅಬ್ಬರ ಮುಂದುವರೆದಿದೆ. ಕೆಲವೆಡೆ ಜಿಟಿ ಜಿಟಿ ಮಳೆಯಾದರೆ, ಇನ್ನೂ ಕೆಲವೆಡೆ ಧಾರಾಕಾರ ಮಳೆ ಸುರಿದಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ರಾಜ್ಯದ ಇಂದು ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉಳಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲೂ ಇಂದು ಮಳೆ ಮುಂದುವರೆಯಲಿದೆ.

ಇದನ್ನೂ ಓದಿ: Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ

ಶಿರಾಲಿ, ಗೋಕರ್ಣ, ಆಗುಂಬೆ, ಕುಣಿಗಲ್, ಭಟ್ಕಳ, ಕಮಲಾಪುರ, ಬೀದರ್, ಚಾಮರಾಜನಗರ, ಕೃಷ್ಣರಾಜಪೇಟೆ, ಕಲಬುರಗಿ, ಹುಮ್ನಾಬಾದ್, ಎಂಎಂ ಹಿಲ್ಸ್, ಕಾರವಾರ, ಮಂಕಿ, ಅಂಕೋಲ, ಹಳಿಯಾಳ, ಮುಲ್ಕಿ, ಜೇವರಗಿ, ಹೊಸದುರ್ಗದಲ್ಲಿ ಮಳೆಯಾಗಿದೆ

ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇನ್ನೆರಡು ದಿನ ಮಳೆಯಾಗಲಿದೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:Kavya V
First published: