ದ್ವೀತಿಯ ಪರೀಕ್ಷೆ ಫಲಿತಾಂಶ ಹೊರ ಬಿದ್ದಿದ್ದು, ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಸುಲಭವಾಗಿ ಫಲಿತಾಂಶವನ್ನು ನೋಡಬಹುದಾಗಿದೆ. http://pue.kar.nic.in/ ವೈಬ್ ಸೈಟ್ ಮೂಲಕ ಫಲಿತಾಂಶ ಪ್ರಕಟವಾಗಿದೆ. Know My Register Number ಮೂಲಕ ರಿಜಿಸ್ಟರ್ ನಂಬರ್ನ್ನು ಈಗಾಗಲೇ ಹಂಚಿಕೆ ಮಾಡಲಾಗಿದೆ. ನಿಮ್ಮ ರಿಜಿಸ್ಟರ್ ನಂಬರ್ ಸಮೂದಿಸುವ ಮೂಲಕ ಫಲಿತಾಂಶವನ್ನು ನೋಡಬಹುದಾಗಿದೆ.
ಫಲಿತಾಂಶ ನೋಡುವುದು ಹೇಗೆ? (How to Check PU Result)ಪ್ರತಿ ವರ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದ ರಿಜಿಸ್ಟರ್ ನಂಬರ್ ಮೂಲಕ ಫಲಿತಾಂಶವನ್ನು ನೋಡುತ್ತಿದ್ದರು. ಆದರೆ, ಈ ಬಾರಿ ಪರೀಕ್ಷೆ ಬರೆಯದೇ ಯಾವ ರಿಜಿಸ್ಟರ್ ನಂಬರ್ ಮೂಲಕ ಫಲಿತಾಂಶ ನೋಡುವುದು ಎಂಬ ಗೊಂದಲ ಇದೆ. ಇದೇ ಕಾರಣಕ್ಕೆ ಪಿಯು ಮಂಡಳಿ ಈ ಬಾರಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಪ್ರತ್ಯೇಕ ರಿಜಿಸ್ಟರ್ ನಂಬರ್ ಸೃಷ್ಟಿಸಿದೆ. ಇದನ್ನು ಕೂಡ ಮಂಡಳಿಯ ವೆಬ್ಸೈಟ್ ಮೂಲಕವೇ ಪಡೆಯಬೇಕಾಗಿದೆ. ಈಗಾಗಲೇ ಈ ರಿಜಿಸ್ಟರ್ ನಂಬರ್ ಪಡೆಯಲು ಅವಕಾಶ ನೀಡಲಾಗಿದೆ.
ವಿದ್ಯಾರ್ಥಿಗಳಿಗೆ ಎಸ್ ಎಂ ಎಸ್ ಹಾಗೂ ಆಯಾ ಕಾಲೇಜಿಗೆ ಫಲಿತಾಂಶದ ಮಾಹಿತಿ ನೀಡಲಾಗುತ್ತದೆ. ಫಲಿತಾಂಶಕ್ಕೂ ಮುನ್ನ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ನ್ನು ಖಚಿತಪಡಿಸಿಕೊಳ್ಳಬೇಕು. ಜನರೇಟ್ ಆದ ರಿಜಿಸ್ಟರ್ ನಂಬರ್ ಚೆಕ್ ಮಾಡಿ ನಂತರ ರಿಸಲ್ಟ್ ಪಡೆಯಬೇಕು.
ಮಂಡಳಿಯ ವೆಬ್ಸೈಟ್
http://pue.kar.nic.in/ ತೆರೆದ ಕೂಡಲೇ ನಿಮಗೆ Know my Register Number ಎಂಬ ಲಿಂಕ್ ಸಿಗುತ್ತದೆ. ಅದನ್ನು ಕ್ಲಿಕ್ ಮಾಡಿದರೆ ಅದರ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಗೂ ರಿಜಿಸ್ಟರ್ ನಂಬರ್ ಸಿಗಲಿದೆ. ಈ ಲಿಂಕ್ ಮೂಲಕ ವಿದ್ಯಾರ್ಥಿಗಳು ಫಲಿತಾಂಶ ಪಡೆಯಬಹುದು.
ಕೊರೊನಾ ಕಾರಣದಿಂದ 2020-2021ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಪರೀಕ್ಷೆ ನಡೆಸದ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ, ಪ್ರಥಮ ಪಿಯು ಫಲಿತಾಂಶ, ಆಂತರಿಕ ಅಂಗಗಳ ಆಧಾರದ ಮೇಲೆ ಅಂಕಗಳನ್ನು ನೀಡಲಾಗಿದೆ. ಈಗ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳಿಗೆ ಒಪ್ಪಿಗೆ ಇಲ್ಲವಾದರೆ ಆಗಸ್ಟ್ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಆಗ ಅವರು ಎಕ್ಸಾಂ ಬರೆಯಬಹುದಾಗಿದೆ. ಪರೀಕ್ಷೆಯ ಫಲಿತಾಂಶವನ್ನೂ ತಿರಸ್ಕರಿಸುವ ವಿದ್ಯಾರ್ಥಿಗಳಿಗೆ ಮತ್ತೆ ಹಳೇ ಅಂಕ ಪಡೆಯಲು ಅವಕಾಶ ಇಲ್ಲ ಎಂದು ಪಿಯು ಮಂಡಳಿ ಸ್ಪಷ್ಟವಾಗಿ ಹೇಳಿದೆ.
5 ಲಕ್ಷದ 90 ಸಾವಿರದ 153 ಹೊಸ ವಿದ್ಯಾರ್ಥಿಗಳು ಮತ್ತು 76 ಸಾವಿರದ 344 ರಿಪೀಟರ್ಸ್ ಸೇರಿದಂತೆ ಒಟ್ಟು 6 ಲಕ್ಷ 66 ಸಾವಿರದ 497 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದೆ.
ನಿಮ್ಮ ಜಿಲ್ಲೆಯಿಂದ (ಬೆಂಗಳೂರು ನಗರ)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ