HOME » NEWS » State » BENGALURU URBAN HIGHLIGHTS OF THE MEETING WHICH WAS CHAIRED BY CM BSY ON KOVID MANAGEMENT RHHSN

ಕೋವಿಡ್ ನಿರ್ವಹಣೆ ಕುರಿತಂತೆ ಸಿಎಂ ಬಿಎಸ್​ವೈ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಮುಖ್ಯಾಂಶಗಳು

ಸಿಎಂ ಬಿಎಸ್ ಯಡಿಯೂರಪ್ಪ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ವರ್ಚುವಲ್​ ಮೀಟ್ ಮೂಲಕ ಸಚಿವರ ಸಭೆ ನಡೆಸಿದರು. ಸಭೆಯಲ್ಲಿ ಕೋವಿಡ್ ನಿರ್ವಹಣೆ ಕುರಿತಂತೆ  ಮಹತ್ವದ ಮಾತುಕತೆ ನಡೆಸಲಾಯಿತು. ಸಭೆಯ ಪ್ರಮುಖಾಂಶಗಳು ಹೀಗಿವೆ.

news18-kannada
Updated:April 22, 2021, 8:02 PM IST
ಕೋವಿಡ್ ನಿರ್ವಹಣೆ ಕುರಿತಂತೆ ಸಿಎಂ ಬಿಎಸ್​ವೈ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಮುಖ್ಯಾಂಶಗಳು
ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆ.
  • Share this:
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದೆ. ಇಂದು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೊರೋನಾ ಪೀಡಿತರ ಸಂಖ್ಯೆ 25 ಸಾವಿರ ದಾಟಿದೆ. ಮೃತರ ಸಂಖ್ಯೆಯಲ್ಲೂ ಹೆಚ್ಚಳವಾಗಿದ್ದು, ಇಂದು ಒಂದೇ ದಿನದಲ್ಲಿ 123 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 15 ಸಾವಿರ ಪ್ರಕರಣಗಳು ಇಂದು ವರದಿಯಾಗಿವೆ ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ವರ್ಚುವಲ್​ ಮೀಟ್ ಮೂಲಕ ಸಚಿವರ ಸಭೆ ನಡೆಸಿದರು. ಸಭೆಯಲ್ಲಿ ಕೋವಿಡ್ ನಿರ್ವಹಣೆ ಕುರಿತಂತೆ  ಮಹತ್ವದ ಮಾತುಕತೆ ನಡೆಸಲಾಯಿತು. ಸಭೆಯ ಪ್ರಮುಖಾಂಶಗಳು ಹೀಗಿವೆ.


  • ನಗರದಲ್ಲಿ ಈಗಾಗಲೇ ಆಕ್ಸಿಜನ್ ಪೂರೈಕೆ ಮತ್ತು ಔಷಧ ಕೊರತೆಯ ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸಭೆಗೆ ಮಾಹಿತಿ ನೀಡಿದರು.

  • ಜೊತೆಗೆ ಕೊರೋನಾ ಲಸಿಕೆಗಳ ಕೊರತೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.

  • ನಗರದಲ್ಲಿ ಫೀವರ್ ಕ್ಲಿನಿಕ್ ಗಳನ್ನು ಬಲಪಡಿಸಿ, ಜ್ವರ, ಮತ್ತಿತರ ಲಕ್ಷಣ ಹೊಂದಿರುವವರ ಪರೀಕ್ಷೆ ಹಾಗೂ ಸೂಕ್ತ ಮಾರ್ಗದರ್ಶನ ನೀಡಲು ತೀರ್ಮಾನಿಸಲಾಯಿತು. ಇದರಿಂದ ಅಗತ್ಯವಿರುವವರಿಗೆ ಮಾತ್ರ ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗುತ್ತದೆ.

  • ಸಹಾಯವಾಣಿಗಳನ್ನು ಇನ್ನಷ್ಟು ಬಲಪಡಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಸೂಚಿಸಿದರು.

  • ಹೋಮ್ ಐಸೋಲೇಷನ್ ನಲ್ಲಿ ಇರುವವರ ಚಿಕಿತ್ಸೆ, ಟೆಲಿ ಕನ್ಸಲ್ಟೇಷನ್ ಒದಗಿಸಲು ಹಾಗೂ ಅವರ ಮೇಲೆ ನಿಗಾ ವಹಿಸಲು ಆದ್ಯತೆ ನೀಡುವಂತೆ ಸೂಚಿಸಿದರು.
  • ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಬೆಡ್ ಗಳನ್ನು ಒದಗಿಸುವುದನ್ನು ಖಾತರಿ ಪಡಿಸಬೇಕು. ಆಯಾ ವಲಯಗಳ ಡಿಸಿಪಿಗಳು ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಲಾಯಿತು.

  • ನೋಡಲ್ ಅಧಿಕಾರಿಗಳು ಆಯಾ ವಲಯದ ಕೋವಿಡ್ ನಿರ್ವಹಣೆಗೆ ಸಂಪೂರ್ಣ ಜವಾಬ್ದಾರರು. ಅವರು ಎಲ್ಲ ಸಮಸ್ಯೆಗಳ ಕುರಿತೂ ಸ್ಪಂದಿಸಬೇಕು.

  • ಆರೋಗ್ಯ ಸೇವೆಯಲ್ಲಿ ನಿರತರಾಗಿರುವ ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿಗೆ ಸ್ಥೈರ್ಯ ತುಂಬುವಂತೆ ಸೂಚಿಸಿದರು.

  • ಚಿತಾಗಾರಗಳಿಗೆ ಶವ ಸಾಗಿಸುವ ಅಂಬ್ಯುಲೆನ್ಸ್ ಗಳು ತಾಸುಗಟ್ಟಲೆ ಸರದಿಯಲ್ಲಿ ನಿಲ್ಲುವುದರಿಂದ ಶವಗಳನ್ನು ಸಾಗಿಸಲು ಅಂಬ್ಯುಲೆನ್ಸ್ ಗಳ ಕೊರತೆ ಆಗಿರುವ ಹಿನ್ನೆಲೆಯಲ್ಲಿ ಶವಗಳನ್ನು ಇರಿಸಲು ಚಿತಾಗಾರಗಳಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡಲು ಸೂಚಿಸಲಾಯಿತು.

  • ಕೋವಿಡ್ ನಿರ್ವಹಣೆಯಲ್ಲಿ ಸಾಧ್ಯವಿರುವಲ್ಲಿ ಸ್ವಯಂ ಸೇವಕರ ನೆರವು ಪಡೆಯಲು ಸಭೆಯಲ್ಲಿ ನಿರ್ಧರಿಸಲಾಯಿತು.


ಇದನ್ನು ಓದಿ: Coronavirus | ನಾಳೆ ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ; 2ನೇ ಬಾರಿಗೆ ದೇಶವನ್ನುದ್ದೇಶಿ ಭಾಷಣ ಸಾಧ್ಯತೆ

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಸಚಿವರಾದ ಆರ್. ಅಶೋಕ್, ಡಾ. ಕೆ. ಸುಧಾಕರ್, ಎಸ್. ಸುರೇಶ್ ಕುಮಾರ್, ವಿ.ಸೋಮಣ್ಣ, ಎಂ.ಟಿ. ಬಿ. ನಾಗರಾಜ್, ಎಸ್.ಟಿ.ಸೋಮಶೇಖರ್, ಕೆ. ಗೋಪಾಲಯ್ಯ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Published by: HR Ramesh
First published: April 22, 2021, 8:02 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories