HOME » NEWS » State » BENGALURU URBAN HOME MINISTER BASAVARAJ BOMMAI SAYS KARNATAKA WILL WIN IN MEKEDATU DAM PROJECT SESR

Mekedatu Project: ಮೇಕೆದಾಟು ವಿವಾದ ಗೆಲ್ಲುವ ವಿಶ್ವಾಸವಿದೆ ಎಂದ ಗೃಹ ಸಚಿವ ಬೊಮ್ಮಾಯಿ

ನಾವು ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ. ಈ ಹಿನ್ನಲೆ ನಮಗೆ ಗೆಲ್ಲುವ ವಿಶ್ವಾಸ ಇದೆ

news18-kannada
Updated:June 18, 2021, 4:22 PM IST
Mekedatu Project: ಮೇಕೆದಾಟು ವಿವಾದ ಗೆಲ್ಲುವ ವಿಶ್ವಾಸವಿದೆ ಎಂದ ಗೃಹ ಸಚಿವ ಬೊಮ್ಮಾಯಿ
ಗೃಹ ಸಚಿವ ಬಸವರಾಜ ಬೊಮ್ಮಾಯಿ
  • Share this:
ಬೆಂಗಳೂರು (ಜೂ. 18): ರಾಜ್ಯದ ಮಹಾತ್ವಕಾಂಕ್ಷೆಯ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಸರ್ಕಾರ ಈ ಯೋಜನೆಗೆ ಅನುಮತಿ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಈ ಬೆಳವಣಿಗೆ ಕುರಿತು ಇಂದು ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮೇಕೆದಾಟು ವಿಚಾರದ ಕುರಿತು ಇನ್ನು ಸುಪ್ರೀಂ ಕೋರ್ಟಿನಲ್ಲಿ ಇನ್ನು ಕೇಸ್​ ನಡೆಯುತ್ತಿದೆ. ರಾಜ್ಯದ ಹಿತಾಸಕ್ತಿ ಬದ್ಧವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಈಗಾಗಲೇ ಈ ಕುರಿತು ಉತ್ತಮ ವಾದ ಕೂಡ ನಡೆದಿದೆ. ಈ ಬಗ್ಗೆ ನ್ಯಾಷನಲ್ ಎನ್.ಜಿ.ಟಿ ಸ್ಪಷ್ಟಪಡಿಸಿದ್ದು, ಈ ಪ್ರಕರಣ ದೆಹಲಿಯಲ್ಲಿ ಇತ್ಯರ್ಥವಾಗುವುದಿಲ್ಲ. ಸುಪ್ರೀಂ ಕೋರ್ಟ್​ನಲ್ಲಿ ಈ ಪ್ರಕರಣ ನಡೆಯುತ್ತಿದೆ. ನ್ಯಾಷನಲ್​ ಎನ್​ಜಿಟಿ ಈ ಬಗ್ಗೆ ಸ್ಪಷ್ಟವಾಗಿ ತಿಳಿಸಿದೆ. ಅಂತರರಾಜ್ಯ ನದಿ ವಿವಾದ ಹಿನ್ನಲೆ ಇದನ್ನು ಮೂರು ಸದಸ್ಯರ ಸಮಿತಿ ಈ ಕುರಿತು ತೀರ್ಮಾನ ಮಾಡಲಿದೆ. ಈ ಬಗ್ಗೆ ನಿನ್ನೆ ಕೂಡ ವಾದ ವಿವಾದ ನಡೆದಿದೆ. ನಾವು ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ. ಈ ಹಿನ್ನಲೆ ನಮಗೆ ಗೆಲ್ಲುವ ವಿಶ್ವಾಸ ಇದೆ ಎಂದು ಭರವಸೆ ವ್ಯಕ್ತಪಡಿಸಿದರು.

ರಾಜ್ಯದ ಹಿತಾಸಕ್ತಿಗೆ ಸರ್ಕಾರ ಬದ್ಧವಾಗಿದೆ. ಮೇಕೆದಾಟು ಇರಬಹುದು, ಮಹಾದಾಯಿ ಇರಬಹುದು. ನಮ್ಮ ನೆಲ , ಜಲದ ಹಿತಾಸಕ್ತಿಯನ್ನು ಕಾಪಾಡುವಲ್ಲಿ ನಾವು ಅತ್ಯಂತ ಬದ್ದವಾಗಿದ್ದೇವೆ ಎಂದರು

ತೀರ್ಪು ಕಾಯ್ದಿರಿಸಿರುವ ಎನ್​ಜಿಟಿ
ಮೇಕೆದಾಟು ಸ್ಥಳ ಪರಿಶೀಲನೆಗಾಗಿ ಸಮಿತಿ ರಚಿಸಿ ದಕ್ಷಿಣ ಪೀಠ ನೀಡಿದ್ದ ಆದೇಶ ಪ್ರಶ್ನಿಸಿದ್ದ ಕರ್ನಾಟಕ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್​ಜಿಟಿ) ಈ ಸಂಬಂಧ ತೀರ್ಪು ಕಾಯ್ದಿರಿಸಿದೆ. ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್​ಗೆ ಈಗಾಗಲೇ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಬಾಕಿ ಇದೆ. ಹಾಗಾಗಿ ಎನ್​ಜಿಟಿ ದಕ್ಷಿಣ ಪೀಠ ಸ್ವಯಂ ಪ್ರೇರಣೆಯ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಲು ಅವಕಾಶವಿಲ್ಲ ಎಂದು ತಿಳಿಸಿದೆ.

ಇದನ್ನು ಓದಿ: ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಸ್ಟಾಲಿನ್ ತಕರಾರು: ಅನುಮತಿ ನೀಡದಂತೆ PMಗೆ ಮನವಿ

ಕಾವೇರಿಯ ಹೆಚ್ಚುವರಿ ನೀರನ್ನು ತಡೆದು ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳ ಜನರಿಗೆ ಕುಡಿಯುವ ನೀರು ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ರೂಪಿಸಿತ್ತು. ಈ ಕಾಮಗಾರಿಗೆ ತಮಿಳುನಾಡು ಸರ್ಕಾರ ತಕರಾರು ತೆಗೆದ ಪರಿಣಾಮ ಈ ಸ್ಥಳದಲ್ಲಿ ಯಾವುದೇ ಕಾಮಗಾರಿ ಆರಂಭಿಸಲಾಗಿಲ್ಲ.

ಪ್ರಧಾನಿ ಭೇಟಿಯಾದ ಸ್ಟಾಲಿನ್​ಇನ್ನು ಎನ್​ಜಿಟಿ ಈ ಕುರಿತು ತೀರ್ಪು ಕಾಯ್ದಿರಿಸಿದ ಬೆನ್ನಲ್ಲೇ ನಿನ್ನೆ ತಮಿಳುನಾಡು ಸಿಎಂ ಸ್ಟಾಲಿನ್​ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಈ ಕುರಿತು ಚರ್ಚೆ ನಡೆಸಿದ ತಮಿಳುನಾಡು ಸಿಎಂ,  ಮೇಕೆದಾಟು ಯೋಜನೆ ಬಗ್ಗೆ ತಮಿಳುನಾಡು ಸರ್ಕಾರ ಈಗಾಗಲೇ ಸುಪ್ರೀಂ ಕೋರ್ಟಿನಲ್ಲೂ ದೂರು ದಾಖಲಿಸಿದೆ.‌ ಸುಪ್ರೀಂ ಕೋರ್ಟಿನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೂ ಕರ್ನಾಟಕ ಯೋಜನೆ ‌ಜಾರಿಗೆ ಇರುವ ಇತರೆ ಅಡೆ ತಡೆಗಳನ್ನು ನಿಯಂತ್ರಿಸಿಕೊಳ್ಳಲು ಪ್ರಯತ್ನ ಮಾಡುತ್ತಿದೆ. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ನೆರವು ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.
Youtube Video

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by: Seema R
First published: June 18, 2021, 4:20 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories