HOME » NEWS » State » BENGALURU URBAN KARNATAKA GOVERNMENT POSTPONES CONDUCT OF LOCAL BODY ELECTIONS KVD

Karnataka Local Body Elections: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ 6 ತಿಂಗಳುಗಳ ಕಾಲ ಮುಂದೂಡಿ ಆದೇಶ ಹೊರಡಿಸಿದ ಸರ್ಕಾರ

Karnataka Local Body Elections: ರಾಜ್ಯದಲ್ಲಿ ನಡೆಯಬೇಕಿದ್ದ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ, ಉಪ ಚುನಾವಣೆ ಹಾಗೂ ಅಧ್ಯಕ್ಷರು, ಉಪಾಧ್ಯಕ್ಷರ ಸ್ಥಾನಗಳ ಚುನಾವಣೆಯನ್ನು ಮುಂದೂಡಲಾಗಿದೆ.

Kavya V | news18-kannada
Updated:June 18, 2021, 10:03 AM IST
Karnataka Local Body Elections: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ 6 ತಿಂಗಳುಗಳ ಕಾಲ ಮುಂದೂಡಿ ಆದೇಶ ಹೊರಡಿಸಿದ ಸರ್ಕಾರ
ಬಿಎಸ್ ಯಡಿಯೂರಪ್ಪ
  • Share this:
ಬೆಂಗಳೂರು : ಕೊರೋನಾ ಕಾರಣದಿಂದಾಗಿ ರಾಜ್ಯದಲ್ಲಿ ನಡೆಯಬೇಕಿದ್ದ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ, ಉಪ ಚುನಾವಣೆ ಹಾಗೂ ಅಧ್ಯಕ್ಷರು, ಉಪಾಧ್ಯಕ್ಷರ ಸ್ಥಾನಗಳ ಚುನಾವಣೆಯನ್ನು ಮುಂದೂಡಲಾಗಿದೆ. ಚುನಾವಣೆಗಳನ್ನು 6 ತಿಂಗಳ ಕಾಲ ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಲ್ ಪ್ರಸಾದ್ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರಿಗೆ, ಯೋಜನಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕ ಆರೋಗ್ಯದ ಹಿತದೃಷ್ಠಿಯಿಂದ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ ಚುನಾವಣೆ ನಡೆಸುವುದು ಬಾಕಿ ಇದ್ದಲ್ಲಿ, ಚುನಾವಣೆಯನ್ನು ಕೂಡಲೇ ಮುಂದೂಡುವಂತೆ ನಿರ್ದೇಶನ ನೀಡಲಾಗಿದೆ.

ಸಚಿವ ಸಂಪುಟ ನಿರ್ಣಯದ ಹಿನ್ನಲೆಯಲ್ಲಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳು ಹಾಗೂ ಮಹಾನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆ, ಉಪ ಚುನಾವಣೆ ಹಾಗೂ ಸದರಿ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಚುನಾವಣೆಗಳನ್ನು  ಮುಂದೂಡಲಾಗಿದೆ. ದಿನಾಂಕ 26-04-2021ರಿಂದ ಮುಂದಿನ 6 ತಿಂಗಳ ಅವಧಿಗೆ ಮುಂದೂಡುವ ಬಗ್ಗೆ ಸಚಿವ ಸಂಪುಟವು ತೀರ್ಮಾನಿಸಿದ್ದು, ಅದರಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.
Youtube Video

ಇನ್ನು ರಾಜ್ಯಾದ್ಯಂತ ಇಂದು 5,983 ಕೊರೊನಾ ಪಾಸಿಟಿವ್​​ ಪ್ರಕರಣಗಳು ದಾಖಲಾಗಿವೆ. ಒಂದೇ ದಿನ ಸೋಂಕಿನಿಂದ 138 ಜನ ಸಾವನ್ನಪ್ಪಿದ್ದಾರೆ. 10,683 ಮಂದಿ ಇಂದು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು 1209 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸಾವಿನ ಪ್ರಮಾಣ ತಗ್ಗಿದ್ದು, 17 ಮಂದಿ ಮೃತಪಟ್ಟಿದ್ದಾರೆ. ಇಂದು ಪಾಸಿಟಿವಿಟ್ ಶೇ. 3.77 ಹಾಗೂ ಸಾವಿನ ಪ್ರಮಾಣ ಶೇ. 2.30 ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಕೋವಿಡ್​​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by: Kavya V
First published: June 17, 2021, 10:25 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories