Festival Guidelines: ಗಣೇಶ- ಮೊಹರಂ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ; ಸಾರ್ವಜನಿಕ ಸ್ಥಳದಲ್ಲಿ ಗಣಪನ ಕೂರಿಸುವಂತಿಲ್ಲ

ಕೋವಿಡ್​ ನಿಯಂತ್ರಸಲು ಅಗತ್ಯ ಮುಂಜಾಗ್ರತಾ ವಹಿಸುವುದು ಅಗತ್ಯವಾಗಿದೆ. ಈ ಹಿನ್ನಲೆ ಜನರ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಹಬ್ಬ ಹರಿದಿನಗಳಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಗಣೇಶ

ಗಣೇಶ

  • Share this:
     ಕೊವೀಡ್​ ಆತಂಕದ ನಡುವೆಯೇ ಹಬ್ಬಗಳ ಸಾಲು ಆಗಮಿಸುತ್ತಿರುವುದು ಈಗ ಸರ್ಕಾರಕ್ಕೆ ಹೊಸ ಸವಾಲಾಗಿದೆ. ಆಗಸ್ಟ್​​ ಸೆಪ್ಟೆಂಬರ್​ಗಳಲ್ಲಿ ಕೃಷ್ಣ ಜನ್ಮಾಷ್ಟಮಿ, ಗಣೇಶ್​, ಮೊಹರಂ, ದುರ್ಗಾ ಪೂಜೆ ಸೇರಿದಂತೆ ಹಬ್ಬಗಳ ಸಂಭ್ರಮದಲ್ಲಿ ಜನರು ಮೈಮರೆತು ಭಾಗಿಯಾಗುವುದರಿಂದ ಮತ್ತಷ್ಟು ಪ್ರಕರಣ ಹೆಚ್ಚುವ ಆತಂಕ ಮೂಡಿದೆ. ಇದೇ ಕಾರಣದಿಂದ ಕೋವಿಡ್​ ನಿಯಂತ್ರಿಸಲು ಮುಂಜಾಗ್ರತಾ ವಹಿಸುವುದು ಅಗತ್ಯವಾಗಿದೆ. ಈ ಹಿನ್ನಲೆ ಜನರ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಹಬ್ಬ ಹರಿದಿನಗಳಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಈ ಮಾರ್ಗಸೂಚಿಗಳನ್ನು ಜನರು ಕಟ್ಟು ನಿಟ್ಟಾಗಿ ಪಾಲಿಸಿ, ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು ಕೂಡ ಸರ್ಕಾರ ತಿಳಿಸಿದೆ.

    ಹಬ್ಬವನ್ನು ಆಚರಿಸುವ ಸಂಬಂಧ ಹೊರಡಿಸಲಾದ  ಸರ್ಕಾರದ ಮಾರ್ಗಸೂಚಿಗಳು:

    • ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಬೇಕು

    • ದೇವಸ್ಥಾನದೊಳಗೆ ಹಾಗೂ ಮನೆಗಳಲ್ಲಿ ಆಚರಿಸಲು ಸೂಚನೆ

    • ಯಾವುದೇ ಸಾರ್ವಜನಿಕ ಸಭೆಗಳಲ್ಲಿ ಹೊರಾಂಗಣಗಳಲ್ಲಿ ಚಪ್ಪರ, ಪೆಂಡಾಲ್/ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ-ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆಗಿಲ್ಲ ಅನುಮತಿ

    • ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ

    • ಮೂರ್ತಿಗಳನ್ನ ಮನೆಯಲ್ಲಿಯೇ ವಿಸರ್ಜಿಸಲು ಸೂಚನೆ

    • ಇಲ್ಲದಿದ್ರೆ ಮಹಾನಗರ ಪಾಲಿಕೆ / ಜಿಲ್ಲಾಡಳಿತ / ಹತ್ತಿರದ ಸ್ಥಳೀಯ ಸಂಸ್ಥೆಗಳ ವತಿಯಿಂದ ನಿರ್ಮಿಸಲಾದ ಹೊಂಡ, ಕಲ್ಯಾಣಿ, ಅಥವಾ ಮೊಬೈಲ್ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜಿಸಬೇಕು

    • ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸಾನಿಟೈಸೇಷನ್ ಮಾಡಬೇಕು

    • ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್‌ ಹಾಗೂ ಥರ್ಮಲ್​ ಸ್ಕ್ರೀನಿಂಗ್​ ಕಡ್ಡಾಯ

    • ದರ್ಶನಕ್ಕಾಗಿ ಬರುವ ಭಕ್ತರಿಗೆ ಕೋವಿಡ್-19 ಮಾರ್ಗಸೂಚಿಯಂತೆ ಕಡ್ಡಾಯ ಮಾಸ್ಕ್​​ ಧರಿಸಬೇಕು

    • ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು

    • ಸರ್ಕಾರ ಜಿಲ್ಲಾಡಳಿತ, ಪೊಲೀಸ್, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಪ್ರಾಧಿಕಾರಿಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ, ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು

    • ಮೊಹರಂ ಹಬ್ಬವನ್ನು ಆಚರಿಸುವ ಸಂಬಂಧ ಸರ್ಕಾರದ ಮಾರ್ಗಸೂಚಿಗಳು :

    • ಸಾರ್ವಜನಿಕ ಸ್ಥಳಗಳಲ್ಲಿ ಅಲಂಗಳನ್ನು ಪಂಜಾವನ್ನು ಸ್ಥಾಪಿಸುವುದು ಹಾಗೂ ತಾಜಿಯಾವನ್ನು ನಿರ್ಬಂಧಿಸಲಾಗಿದೆ.

    • ದಿನಾಂಕ:12.08.2021 ರಿಂದ 20.08.2021 ರವರೆಗೆ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೊಹರಂ ಪ್ರಾರ್ಥನಾ ಸಭೆ ಮತ್ತು ಮೆರವಣಿಗೆಯನ್ನು ನಿಷೇಧ

    • ಮೊಹರಂ ಸಂಬಂಧಿತ ಆಚರಣೆಗಳಲ್ಲಿ ಭಾಗವಹಿಸುವ ಭಕ್ತಾದಿಗಳು ಸೂಕ್ತ ಸಾಮಾಜಿಕ ಅಂತರದೊಂದಿಗೆ ಕನಿಷ್ಠ ಸಂಖ್ಯೆಯಲ್ಲಿ ಭಾಗವಹಿಸಬೇಕು

    • ಪಂಜ, ಆಲಂ ಮತ್ತು ತಾಜಿಯಗಳನ್ನು ಸಾರ್ವಜನಿಕರು ಮುಟ್ಟದೆ ದೂರದಿಂದ ನೋಡಬೇಕು

    • ಖಬರಸ್ಕಾನ್ ಒಳಗೊಂಡಂತೆ ಯಾವುದೇ ಖಾಲಿ ಜಾಗಗಳಲ್ಲಿ ಯಾವುದೇ ತರಹದ ಸಭೆಏರ್ಪಡಿಸುವುದನ್ನು ನಿರ್ಬಂಧಿಸಲಾಗಿದೆ

    • ಖಬರಸ್ಥಾನಗಳಿಗೆ ಕೇವಲ ದವನ ಮಾಡಲು ಮಾತ್ರ ಅನುಮತಿ ನೀಡಿದ್ದು, ಮೊಹರಂಗೆ ಸಂಬಂಧಿಸಿದ ಆಚರಣೆಗಳಿಗೆ ಅನುಮತಿ ಇರುವುದಿಲ್ಲ.

    • ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್​​​ ಕಡ್ಡಾಯವಾಗಿ ಧರಿಸತಕ್ಕದ್ದು

    • 60 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡತಕ್ಕದ್ದು

    • ಕೋವಿಡ್-19 ಸಮುಚಿತ ವರ್ತನಗಳೊಂದಿಗೆ, ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ

    • ಹೆಚ್ಚು ಜನರು ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸತಕ್ಕದ್ದು

    • ಕೋವಿಡ್ 19 ಸಮುಚಿತ ವರ್ತನೆಯಂತೆ ಮಸೀದಿಗಳಲ್ಲಿ ನಮಾಜ್ ನಿರ್ವಹಿಸುವವರ ಮಧ್ಯ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು

    • ಆಗಾಗ ಕೈಗಳನ್ನು ಸೋಪು ಮತ್ತು ಸಾನಿಟೈಸರ್‌ಗಳಿಂದ ಶುಚಿಗೊಳಿಸಿಕೊಳ್ಳಬೇಕು

    • ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು, ದೇಹದ ತಾಪಮಾನವನ್ನು ತಪಾಸಣೆ ಮಾಡತಕ್ಕದ್ದು

    • ಭಕ್ತಾದಿಗಳು ಪ್ರವೇಶಿಸುವ ದ್ವಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ತಡೆಗಟ್ಟಬೇಕು

    • ಆಡಳಿತ ಮಂಡಳಿ, ಆಡಳಿತಾಧಿಕಾರಿ, ಭಕ್ತಾಧಿಗಳು ಕುಳಿತುಕೊಳ್ಳುವ ಗರಿಷ್ಟ ಸಂಖ್ಯೆಯನ್ನು ಮುಖ್ಯದ್ವಾರದ ಬಳಿ ಪ್ರದರ್ಶಿಸಬೇಕು

    • ಮಸೀದಿಗಳಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸುವವರು ತಮ್ಮ ತಮ್ಮ ಮನೆಗಳಿಂದ ಮುಸಲ್ಲಾವನನ್ನು (ನಮಾಜು ಚಾಪೆ) ಕಡ್ಡಾಯವಾಗಿ ತರಬೇಕು

    • ಪರಸ್ಪರ ಹಸ್ತಲಾಘವ ಮತ್ತು ಆಲಿಂಗನಗಳನ್ನು ಮಾಡಬಾರದು

    • ಮಸೀದಿಗಳನ್ನು ಹೊರತುಪಡಿಸಿ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಮತ್ತಿತರ ತೆರೆದ ಜಾಗಗಳಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಗೆ ನಿಷೇಧ

    • ಮೊಹರಂ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ / ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ
      ಕಾರ್ಯಕ್ರಮಗಳಿಗಿಲ್ಲ ಅನುಮತಿ

    • ಭಕ್ತಾದಿಗಳು ಯಾವ ಯಾವ ಕೆಲಸವನ್ನು ನಿರ್ವಹಿಸುವುದು/ಯಾವ ಯಾವ ಕೆಲಸವನ್ನು
      ನಿರ್ವಹಿಸಬಾರದು ಎಂಬ ಬಗ್ಗೆ ಧ್ವನಿ ವರ್ಧಕದ ಮೂಲಕ ಸೂಚಿಸಬೇಕು

    Published by:Seema R
    First published: