HOME » NEWS » State » BENGALURU URBAN KARNATAKA GOVT PLANNING TO GIVE 2 MONTH RATION FOR BPL CARD HOLDERS KVD

LOCKDOWN: ಸಂಪೂರ್ಣ ಲಾಕ್​​ಡೌನ್​ಗೆ ಸಿದ್ಧತೆ: 2 ತಿಂಗಳು ಹೆಚ್ಚುವರಿ ಪಡಿತರ ವಿತರಣೆಗೆ ಪ್ಲಾನ್..?

ಲಾಕ್​ಡೌನ್​ ಜಾರಿ ಹಿನ್ನೆಲೆಯಲ್ಲಿ 2 ತಿಂಗಳ ಪಡಿತರ ವಿತರಣೆಗೆ ಸರ್ಕಾರ ಪ್ಲಾನ್​ ಮಾಡುತ್ತಿದೆ ಎನ್ನಲಾಗುತ್ತಿದೆ. ಬಿಪಿಎಲ್​​, ಅಂತ್ಯೋದಯ ಕಾರ್ಡುದಾರರಿಗೆ ಎಷ್ಟು ಕೆಜಿ ಅಕ್ಕಿ, ಎಷ್ಟು ಕೆಜಿ ರಾಗಿ-ಬೇಳೆ ವಿತರಿಸಲಿದೆ ಎಂದು ನಿರ್ಧರಿಸಲಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.

news18-kannada
Updated:May 7, 2021, 2:17 PM IST
LOCKDOWN: ಸಂಪೂರ್ಣ ಲಾಕ್​​ಡೌನ್​ಗೆ ಸಿದ್ಧತೆ: 2 ತಿಂಗಳು ಹೆಚ್ಚುವರಿ ಪಡಿತರ ವಿತರಣೆಗೆ ಪ್ಲಾನ್..?
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕರ್ಫ್ಯೂ ಹೆಸರಿನ ಸೆಮಿ ಲಾಕ್​ಡೌನ್​ನಿಂದ ಸೋಂಕು ಕಂಟ್ರೋಲ್​ ಬರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಲಾಕ್​ಡೌನ್​ ಮೊರೆ ಹೋಗುತ್ತಿದೆ. ಉನ್ನತ ಮೂಲಕ ಮಾಹಿತಿಗಳ ಪ್ರಕಾರ ರಾಜ್ಯಾದ್ಯಂತ ಕಠಿಣ ಲಾಕ್​ಡೌನ್​ ಜಾರಿಗೊಳಿಸಲು ಸಿದ್ಧತೆಗಳು ನಡೆಯುತ್ತಿದೆ. ಸಿಎಂ ಬಿ.ಎಸ್​.ಯಡಿಯೂರಪ್ಪ ಸರ್ಕಾರ ಲಾಕ್​ಡೌನ್​ಗೆ ಸಮ್ಮತಿ ಸೂಚಿಸಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಲಾಕ್​ಡೌನ್​ ಸಮಯದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಪಡಿತರ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಎರಡು ತಿಂಗಳ ಆಹಾರ ಧಾನ್ಯ ವಿತರಣೆಗೆ  ಸರ್ಕಾರ ಪ್ಲಾನ್ ಮಾಡುತ್ತಿದೆ.

ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ‌ ಪಡಿತರ ವಿತರಣೆಗೆ ತಯಾರಿ ನಡೆದಿದೆ. ಮುಂದಿನ 2 ತಿಂಗಳು ಹೆಚ್ಚುವರಿ ಪಡಿತರ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮೇ 11ರಿಂದಲೇ ಹೆಚ್ಚುವರಿ ಅಕ್ಕಿ-ಬೇಳೆ ನೀಡಲು ಮುಂದಾಗುವ ಸಾಧ್ಯತೆ ಇದೆ. ಬಿಪಿಎಲ್, ಅಂತ್ಯೋದಯ ಕಾರ್ಡುದಾರರಿಗೆ ಹೆಚ್ಚುವರಿ ಅಕ್ಕಿ ವಿತರಣೆ ಮಾಡಲಾಗುವುದು. ಮೇ-ಜೂನ್‍ನಲ್ಲಿ ಹೆಚ್ಚುವರಿ ಅಕ್ಕಿ, ರಾಗಿ, ಗೋಧಿ, ಜೋಳ ನೀಡಲಾಗುವುದು. ಅಂತ್ಯೋದಯ ಸ್ಕೀಂನಲ್ಲಿ ಮೇ, ಜೂನ್‍ನಲ್ಲಿ ತಲಾ 35 ಕೆಜಿ ಅಕ್ಕಿ ಹಾಗೂ ಬಿಪಿಎಲ್ ಕಾರ್ಡ್‍ಗೆ ತಲಾ ಒಬ್ಬರಿಗೆ ತಿಂಗಳಿಗೆ 10 ಕೆಜಿ ಅಕ್ಕಿ  ನೀಡುವ ಸಾಧ್ಯತೆ ಇದೆ.

ಕೇಂದ್ರದ 5 ಕೆಜಿ, ರಾಜ್ಯದ 5 ಕೆಜಿ ಸೇರಿ ಒಟ್ಟು 10 ಕೆಜಿ ಅಕ್ಕಿ ವಿತರಿಸಲು ಪ್ಲಾನ್ ಮಾಡಲಾಗಿದೆ. ರಾಗಿ ಬಳಸುವ ಪ್ರದೇಶದಲ್ಲಿ 3 ಕೆಜಿ ರಾಗಿ, 7 ಕೆಜಿ ಅಕ್ಕಿ, 2 ಕೆಜಿ ಗೋಧಿಯನ್ನು ನೀಡಲಾಗುವುದು.  ಅಕ್ಕಿಯನ್ನು ಬಳಸುವ ಭಾಗದಲ್ಲಿ 7 ಕೆಜಿ ಅಕ್ಕಿ, 3 ಕೆಜಿ ಜೋಳ, 3 ಕೆಜಿ ಗೋಧಿ ವಿತರಿಸಲು ಪ್ಲಾನ್​ ಮಾಡಲಾಗುತ್ತಿದೆ.
Youtube Video

ಕರ್ನಾಟಕದಲ್ಲಿ ದಿನವೊಂದಕ್ಕೆ ಅರ್ಧ ಲಕ್ಷದಷ್ಟು ಕೊರೋನಾ ಕೇಸುಗಳು ದಾಖಲಾಗುತ್ತಿರುವುದರಿಂದ ಇನ್ನೂ 14 ದಿನಗಳ ಕಾಲ ಕರ್ನಾಟಕದಲ್ಲಿ ಸಂಪೂರ್ಣ ಲಾಕ್​ಡೌನ್ ಘೋಷಿಸಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈಗಾಗಲೇ ಮೇ 12ರವರೆಗೂ ಜನತಾ ಕರ್ಫ್ಯೂ ಜಾರಿಯಲ್ಲಿದ್ದು, ಇದರಿಂದಲೂ ಕೊರೋನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಿರ್ಧರಿಸಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಮೇ 10ರಿಂದ 2 ವಾರಗಳ ಕಾಲ ಕಠಿಣ ಲಾಕ್​ಡೌನ್ ಜಾರಿಗೊಳಿಸಲು ನಿರ್ಧರಿಸಿದೆ ಎನ್ನಲಾಗುತ್ತಿದೆ. ಈಗಾಗಲೇ ಸಚಿವರು, ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿರುವ ಸಿಎಂ ಯಡಿಯೂರಪ್ಪ ಲಾಕ್​ಡೌನ್ ಜಾರಿಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಕೆಲವೇ ಹೊತ್ತಿನಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ.

ಸೆಮಿ ಲಾಕ್​ಡೌನ್​ನಿಂದ ಯಾವುದೇ ಉಪಯೋಗವಾಗದ ಕಾರಣ ಸೋಮವಾರದಿಂದ ಸಂಪೂರ್ಣ ಲಾಕ್​ಡೌನ್ ಮಾಡಲು ಸಿಎಂ ಯಡಿಯೂರಪ್ಪ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಕೊರೋನಾ ಮೊದಲ ಅಲೆಯ ಮಾದರಿಯಲ್ಲೇ 14 ದಿನಗಳ ಕಾಲ ಲಾಕ್​ಡೌನ್ ಘೋಷಣೆ ಮಾಡಲಾಗುತ್ತಿದ್ದು, ಪ್ಯಾಕೇಜ್ ಕೂಡ ಘೋಷಣೆ ಮಾಡುವ ಸಾಧ್ಯತೆಯಿದೆ. ಹಾಲು, ತರಕಾರಿ, ದಿನಸಿ ವಸ್ತುಗಳು, ಮೆಡಿಕಲ್ ಶಾಪ್​ಗೆ ಮಾತ್ರ ಅನುಮತಿ ನೀಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಉಳಿದಂತೆ ಸಂಪೂರ್ಣ ಬಂದ್ ಆಗಿರಲಿದೆ.
Published by: Kavya V
First published: May 7, 2021, 2:17 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories