Hijab Judgement: ಹಿಜಾಬ್ ಧರಿಸೋದು ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ, ಸರ್ಕಾರದ ಆದೇಶ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್

ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ ಅವರ ಪೂರ್ಣ ಪೀಠ ತೀರ್ಪು ನೀಡಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ ಅವರ ಪೂರ್ಣ ಪೀಠ ತೀರ್ಪು ನೀಡಿದೆ. ಹಿಜಾಬ್ (Hijab) ಧರಿಸೋದು ಇಸ್ಲಾಂನ ಅತ್ಯಗತ್ಯ ಭಾಗವೂ ಅಲ್ಲ. ಸಮವಸ್ತ್ರ (Uniform) ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ (Karnataka High court) ಎತ್ತಿ ಹಿಡಿದಿದೆ. ಸಮವಸ್ತ್ರ ಕಡ್ಡಾಯವಾಗಿರುವ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ಇಲ್ಲ. ಹಿಜಾಬ್ ಪರವಾಗಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ಸರ್ಕಾರ ನೀಡಿದ ಆದೇಶ ಕಾನೂನುಬದ್ಧವಾಗಿದೆ ಎಂದು ಹೇಳಿದೆ. ತೀರ್ಪು ಬರುವ ಮೊದಲು ಗೃಹ ಸಚಿವ ಅರಗ  ಜ್ಞಾನೇಂದ್ರ (Araga Jnanendra) ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇತ್ತ ಪೊಲೀಸರು ಸಹ ಶಾಲಾ-ಕಾಲೇಜುಗಳ ಬಳಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. 

ಹೈಕೋರ್ಟ್ ಕೇಳಿಕೊಂಡಿದ್ದ ಪ್ರಶ್ನೆಗಳು ,

1. ಹಿಜಾಬ್ ಧರಿಸುವುದು ಇಸ್ಲಾಂ ನಂಬಿಕೆ ಪ್ರಕಾರ ಇದು ಅತ್ಯಗತ್ಯ ಆಚರಯೇ.?

2. ಸರ್ಕಾರದ ಆದೇಶ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯೇ.?

3. ಸರ್ಕಾದ ಆದೇಶ ಆರ್ಟಿಕಲ್ 14 & 15ರ ಉಲ್ಲಂಘನೆಯೇ.?

4. ಉಡುಪಿ ಕಾಲೇಜಿನ ಬಗ್ಗೆ ಶಿಸ್ತು ತನಿಖೆಯ ಅಗತ್ಯವಿದೇಯೇ.?

ಸಮವಸ್ತ್ರದ ಜತೆ ಹಿಜಾಬ್​ಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ನಿರ್ಬಂಧಿಸಿರುವ ಕ್ರಮ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ 11 ದಿನಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಕಾಯ್ದಿರಿಸಿತ್ತು.

ಇದನ್ನೂ ಓದಿ:  Hijab Controversy: ವಿಧಾನಸಭೆಯಲ್ಲಿ ಹಿಜಾಬ್​ ವಿವಾದದ ಗದ್ದಲ, ಜಮೀರ್​ ಹಾಗೂ JDS ಶಾಸಕರ ನಡುವೆ ವಾಗ್ವಾದ  

ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ 10ಕ್ಕೂ ಹೆಚ್ಚು ಮುಖ್ಯ ಅರ್ಜಿಗಳನ್ನು ಸತತ 11 ದಿನಗಳ ಕಾಲ 25 ತಾಸುಗಳಿಗೂ ಹೆಚ್ಚು ಸಮಯ ಹೈಕೋರ್ಟ್​​ ವಿಚಾರಣೆ ನಡೆಸಿತ್ತು. ಅರ್ಜಿದಾರರು ಅಲ್ಲದೇ ಸರ್ಕಾರ, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕರು ಸೇರಿದಂತೆ ಉಳಿದ  ಪ್ರತಿವಾದಿಗಳ ಪರವಾಗಿ ಒಟ್ಟು 25ಕ್ಕೂ ಹೆಚ್ಚು ವಕೀಲರು ತಮ್ಮ ವಾದವನ್ನು ಮಂಡಿಸಿದ್ರು.

ಏನಿದು ಹಿಜಾಬ್​ ಪ್ರಕರಣ?


ಉಡುಪಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಿಜಾಬ್​ ನಿರ್ಬಂಧಿಸುವುದನ್ನು ಪ್ರಶ್ನಿಸಿ ಕಾಲೇಜಿನ ಐವರು ವಿದ್ಯಾರ್ಥಿನಿಯರು, ಸಮವಸ್ತ್ರದ ಜೊತೆ ಹಿಜಾಬ್​ ಧರಿಸಿ ತರಗತಿಗಳಿಗೆ ಹಾಜರಾಗಲು ಅನುಮತಿ ನೀಡುವಂತೆ ಕೋರಿ ಕುಂದಾಪುರದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅರ್ಜಿಗಳನ್ನು ಸಲ್ಲಿಸಿದ್ರು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ನಿರ್ಬಂಧಿಸಿ ರಾಜ್ಯ ಸರ್ಕಾರ ಫೆ.5ರಂದು ಹೊರಡಿಸಿದ್ದ ಆದೇಶವನ್ನೂ ಅರ್ಜಿಗಳಲ್ಲಿ ಪ್ರಶ್ನಿಸಲಾಗಿತ್ತು.

ಮಧ್ಯಂತರ ಆದೇಶ ನೀಡಿದ್ದ ಕೋರ್ಟ್

ಈ ಹಿಂದೆ ಹೈಕೋರ್ಟ್‌ ತ್ರಿದಸ್ಯ ಪೀಠವು ಮೌಖಿಕ ಸಂದೇಶವನ್ನು ನೀಡಿದ್ದು, ಅಂತಿಮ ತೀರ್ಪಿನ ವರೆಗೆ ಶಾಲೆಗೆ ವಿದ್ಯಾರ್ಥಿಗಳು ಯಾವುದೇ ಧರ್ಮದ ಗುರುತುಗಳನ್ನು ಬಳಸುವಂತಿಲ್ಲ ಎಂದು ಮಧ್ಯಂತರ ಆದೇಶ ನೀಡಿತ್ತು. ಆದರೂ ಸಹ ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡೇ ಕಾಲೇಜಿಗಳಿಗೆ ಆಗಮಿಸಿದ್ದಾರೆ. ಅಲ್ಲದೇ ಹಿಜಾಬ್‌ಗೆ ಅವಕಾಶ ನೀಡಬೇಕೆಂದು ಕಾಲೇಜುಗಳ ಮುಂದೆ ಪ್ರತಿಭಟನೆಗಳು ನಡೆದಿದ್ದವು. 


ಒಂದು ವಾರಗಳ ಕಾಲ 144 ಸೆಕ್ಷನ್​ ಜಾರಿ

ಹಿಜಾಬ್ ಗೆ ಸಂಬಂಧಿಸಿದಂತೆ ಮುಂಜಾಗೃತ ಕ್ರಮಗಳನ್ನ ತಗೆದುಗೊಳ್ಳಲಾಗಿದೆ. ಇಂದಿನಿಂದ ನಿಷೇದಾಜ್ಙೆ 144 ಸೆಕ್ಷನ್​. ಒಂದು ವಾರಗಳ ಕಾಲ ಯಾವುದೇ ಪ್ರತಿಭಟನೆಗೆ ಅವಕಾಶವಿರೊದಿಲ್ಲ. ಹೆಚ್ಚುವರಿಯಾಗಿ ಕೆಎಸ್ ಆರ್​ಪಿ ತುಕಡಿ, ಸಿಎಆರ್ ತುಕಡಿ ನಿಯೋಜನೆ ಮಾಡಲಾಗುತ್ತೆ. ಸೂಕ್ಷ್ಮ ಪ್ರದೇಶಗಳನ್ನ ಗುರುತಿಸಿ ಬಂದೋಬಸ್ತ್ ಮಾಡಲಾಗುತ್ತೆ. ಬೆಂಗಳೂರು ಜನತೆ ಇಲ್ಲಿವರೆಗೂ ನಮಗೆ ಸಹಕಾರ ನೀಡಿದ್ದೀರಿ ಮುಂದಿನಗಳಲ್ಲೂ ನೀಡಿ ಅಂತ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮನವಿ ಮಾಡಿಕೊಂಡಿದ್ದಾರೆ.

ಶಾಲಾ-ಕಾಲೇಜುಗಳಿಗೆ ರಜೆ

ಬೆಂಗಳೂರು ಗ್ರಾಮಾಂತರ, ಗದಗ, ಕಲಬುರಗಿ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯನಗರ, ಬೆಳಗಾವಿ, ಧಾರವಾಡ, ರಾಮನಗರ, ವಿಜಯಪುರ, ಚಿತ್ರದುರ್ಗ, ಕೋಲಾರ, ಚಾಮರಾಜನಗರ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ರಾಯಚೂರು, ಶಿವಮೊಗ್ಗ, ಹಾಸನ, ತುಮಕೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಒಂದು ವಾರ 144 ಸೆಕ್ಷನ್ ಹಾಕಲಾಗಿದೆ.

ಹೈಕೋರ್ಟ್​ ಸುತ್ತಮುತ್ತ ಹೈ ಅಲರ್ಟ್

ಹಿಜಾಬ್​ ತೀರ್ಪು ಹಿನ್ನೆಲೆ ಹೈಕೋರ್ಟ್ ಸುತ್ತಮುತ್ತ ಬಂದೋಬಸ್ತ್ ಗೆ ಕೇಂದ್ರ ವಿಭಾಗ ಡಿಸಿಪಿ ಎಂ.ಎನ್ ಅನುಚೇತ್ ಗೆ ಸೂಚನೆ, ಅಂಬೇಡ್ಕರ್ ಗೇಟ್, ಡೈಮಂಡ್ ಜೂಬ್ಲಿ ಗೇಟ್, ಮಹಾರಾಣಿ ಜಂಕ್ಷನ್ ಬಳಿ ಬಂದೋಬಸ್ತ್ ಮಾಡಲಾಗಿದೆ.

Published by:Mahmadrafik K
First published: