Karnataka Unlock 3.0: ವೀಕೆಂಡ್​​​ ಕರ್ಫ್ಯೂ ರದ್ದು, ಧಾರ್ಮಿಕ ಸ್ಥಳಗಳು ತೆರೆಯಲು ಅನುಮತಿ

ಮದುವೆ ಸಮಾರಂಭಗಳಲ್ಲಿ 100 ಜನರಿಗೆ ಭಾಗಿಯಾಗಲು ಅವಕಾಶ ನೀಡಲಾಗಿದ್ದು, ಅಂತ್ಯ ಸಂಸ್ಕಾರದಲ್ಲಿ 20 ಜನರು ಭಾಗಿಯಾಗಬಹುದು

ಬಿ.ಎಸ್​. ಯಡಿಯೂರಪ್ಪ.

ಬಿ.ಎಸ್​. ಯಡಿಯೂರಪ್ಪ.

  • Share this:
    ರಾಜ್ಯದಲ್ಲಿ ಸೋಂಕು ಇಳಿಕೆಯಾಗಿರುವ ಹಿನ್ನಲೆ ರಾಜ್ಯದಲ್ಲಿ ವಿಧಿಸಿದ್ದ ವಾರಾಂತ್ಯ ಕರ್ಫ್ಯೂವನ್ನು (Weekend Curfew)  ತೆಗೆದು ಹಾಕಲಾಗಿದೆ. ರಾಜ್ಯದಲ್ಲಿ ಮೂರನೇ ಹಂತದ ಲಾಕ್​ಡೌನ್ ಸಡಿಲಿಕೆ ಕುರಿತು ಅಧಿಕಾರಿಗಳು, ತಜ್ಞರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಬಿಎಸ್​ ಯಡಿಯೂರಪ್ಪ (CM BSY), ರಾಜ್ಯದಲ್ಲಿ ಪ್ರತಿದಿನ ವಿಧಿಸಿದ್ದ ನೈಟ್​ ಕರ್ಫ್ಯೂ (night Curfew) ಅವಧಿ ಕಡಿತ ಮಾಡಿರುವುದಾಗಿ ತಿಳಿಸಿದರು. ಇದೇ ವೇಳೆ ಧಾರ್ಮಿಕ ಸ್ಥಳಗಳಲ್ಲಿ ದೇವರ ದರ್ಶನಕ್ಕೆ ಅನುಮತಿ ನೀಡಲಾಗಿದೆ. ಮದುವೆ ಸಮಾರಂಭಗಳಲ್ಲಿ 100 ಜನರಿಗೆ ಭಾಗಿಯಾಗಲು ಅವಕಾಶ ನೀಡಲಾಗಿದ್ದು, ಅಂತ್ಯ ಸಂಸ್ಕಾರಕ್ಕೆ 20 ಜನರು ಪಾಲ್ಗೊಳ್ಳಬಹುದು ಎಂದು ತಿಳಿಸಿದ್ದರು.

    ಮೂರನೇ ಹಂತದ ಅನ್​ಲಾಕ್ (Unlock 3.0)​ ವೇಳೆ ಚಿತ್ರಮಂದಿರಗಳು ತೆರೆಯಲು ಯಾವುದೇ ಅವಕಾಶ ನೀಡಿಲ್ಲ. ಶಾಲಾ -ಕಾಲೇಜು ತೆರೆಯುವ ಕುರಿತು ಇನ್ನು ಯಾವುದೇ ತೀರ್ಮಾನವಾಗಿಲ್ಲ. ಪರಿಸ್ಥಿತಿ ನೋಡಿಕೊಂಡು ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು

    ಸೋಮವಾರ ಬೆಳಗ್ಗೆ 5ಗಂಟೆಯಿಂದ ಜು 19ರವರೆಗೆ ಈ ನಿಯಮಗಳು ಜಾರಿಯಲ್ಲಿರಲಿದೆ. ಕೊಡಗಿನಲ್ಲಿ ಸೋಂಕು ಇಳಿಕೆಯಾಗದ ಹಿನ್ನಲೆ ಅಲ್ಲಿ ಪರಿಸ್ಥಿತಿ ಸುಧಾರಣೆ ನಂತರ ಅಲ್ಲಿನ ಡಿಸಿ ತೀರ್ಮಾನ ಮಾಡುತ್ತಾರೆ. ಯಾವ ಯಾವ ಜಿಲ್ಲೆ ಗಳಲ್ಲಿ ಸಮಸ್ಯೆ ದೆಯೋ, ಆ ಜಿಲ್ಲೆಗಳು ಸುಧಾರಣೆ ಆಗಿ ಅನ್ ಲಾಕ್ ತೀರ್ಮಾನ ಮಾಡುವ ಬಗ್ಗೆ ಅಲ್ಲಿನ ಡಿಸಿಗಳ ವಿವೇಚನೆ ಗೆ ಬಿಡಲಾಗಿದೆ.

    ಯಾವುದೆಲ್ಲಾ ಸಡಿಲಿಕೆ



    1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

    2. ಮಾಲ್​ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

    3. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.

    4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.

    5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

    6. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

    7. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

    8. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.

    9. ಕೊರೋನಾ ಕರ್ಫ್ಯೂ (Night curfew) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

    10. ವಾರಾಂತ್ಯದ ಕರ್ಫ್ಯೂ (Weekend Curfew) ಜಾರಿಯಲ್ಲಿರುವುದಿಲ್ಲ.

    11. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.

    12. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.

    13. ಪಬ್​ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್​ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

    14. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.

    ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಬೇಕು. ಈಗ ಜಾರಿಯಲ್ಲಿರುವ ಮಾರ್ಗಸೂಚಿ ಯನ್ನು ಜನರು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪಾಲನೆ ಮಾಡದೆ ಮತ್ತೆ ಸೋಂಕು ಹೆಚ್ಚಾದ್ರೆ, ಈ ನಿಯಮಗಳನ್ನು ಅನಿವಾರ್ಯ ವಾಗಿ ನಿಲ್ಲಿಸಲಾಗುವುದು. ಒಂದು ವೇಳೆ ಜನರು ಸರ್ಕಾರದ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲನೆ ಮಾಡಿ,ಸೋಂಕು ಕಡಿಮೆ ಮಾಡಲು ಸಹಕಾರಿಸಬೇಕು. ಈ ನಿಯಮ ಗಳನ್ನೇ ಮತ್ತೆ ಜೂನ್ 21 ರ ನಂತರ ವೂ ಮುಂದುವರಿಸಲಾಗುವುದು ಎಂದರು



    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
    Published by:Seema R
    First published: