Karnataka Unlock 3: ಸೋಮವಾರದಿಂದ ಮತ್ತಷ್ಟು ನಿಯಮ ಸಡಿಲಿಕೆ; ಮಾಲ್​, ಥಿಯೇಟರ್​​​ ಓಪನ್​ ಸಾಧ್ಯತೆ

ವಾರಾಂತ್ಯದ ಕರ್ಫ್ಯೂ ರದ್ದು ಮಾಡುವ ಹಾಗೂ ರಾತ್ರಿ ಕರ್ಫ್ಯೂ ಸಮಯವನ್ನು ಕಡಿತ ಮಾಡುವ ಸಾಧ್ಯತೆ ಇದೆ

ಮಾಲ್

ಮಾಲ್

 • Share this:
  ಬೆಂಗಳೂರು (ಜು. 2): ರಾಜ್ಯದಲ್ಲಿ ಸೋಂಕು ಕಡಿಮೆಯಾಗಿರುವ ಹಿನ್ನಲೆ ರಾಜ್ಯ ಸರ್ಕಾರ ಮತ್ತಷ್ಟಯ ನಿಯಮ ಸಡಿಲಗೊಳಿಸಲು ಮುಂದಾಗಿದೆ. ಈ ಹಿನ್ನಲೆ ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸುವ ಸಾಧ್ಯತೆ ಕೂಡ ಇದೆ. ಈಗಾಗಲೇ ಜು. 5ರಿಂದ ಮತ್ತಷ್ಟು ನಿಯಮ ಸಡಿಲಿಕೆಯಾಗುವ ಬಗ್ಗೆ ಅನೇಕ ಸಚಿವರು ಸೂಚನೆ ನೀಡಿದ್ದಾರೆ. ಈ ಕುರಿತು ಕಳೆದ ಎರಡು ದಿನಗಳ ಹಿಂದೆ ಮಾತನಾಡಿದ ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸುಳಿವು ನೀಡಿದ್ದರು. ಇನ್ನು ಈ ಕುರಿತು ಮಾತನಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಯಿ ಅವರುಮ ವಾರಾಂತ್ಯದ ಕರ್ಫ್ಯೂ ರದ್ದು ಮಾಡುವ ಹಾಗೂ ರಾತ್ರಿ ಕರ್ಫ್ಯೂ ಸಮಯವನ್ನು ಕಡಿತ ಮಾಡುವ ಕುರಿತು ಚರ್ಚೆ ನಡೆಸುವ ಸಾಧ್ಯತೆ ಬಗ್ಗೆ ಸಿಎಂರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದರು.

  ಈ ಎಲ್ಲಾ ಕುರಿತು ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಚರ್ಚಿಸಲಾಗುವುದು ಎನ್ನಲಾಗಿದೆ. ಈ ಮಧ್ಯೆ ಮಾಲ್​ಗಳ ಮಾಲೀಕರು ಬುಧವಾರ ಸಿಎಂ ಬಿಎಸ್ವೈ ಅವರನ್ನು ಭೇಟಿಯಾಗಿ ಮಾತನಾಡಿದ್ದು, ಮಾಲ್​ ತೆರೆಯಲು ಅನುಮತಿಯನ್ನು ನೀಡುವಂತೆ ಮನವಿ ಮಾಡಿದ್ದರು. ಇದೇ ಹಿನ್ನಲೆ ಕೋವಿಡ್​ ಮಾರ್ಗಸೂಚಿ ಅನ್ವಯ ಸೀಮಿತ ಪ್ರವೇಶಕ್ಕೆ ಅನುಮತಿ ನೀಡಿ ಮಾಲ್​ ಮತ್ತು ಮಲ್ಟಿಪ್ಲೆಕ್ಸ್​ ತೆರೆಯುವ ಸಾಧ್ಯತೆ ಇದೆ.

  ವಿಕೇಂಡ್ ಕರ್ಫ್ಯೂ ದಿನಗಳಂದು ಅಗತ್ಯ ಸೇವೆ ಅಂಗಡಿಗಳು ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಈ ಅವಧಿಯನ್ನು ಸಂಜೆ 5ರವರೆಗೆ ವಿಸ್ತರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರ ಜೊತೆಗೆ ಬಾರ್​ಗಳಿಗೂ ಅನುಮತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

  ಇದನ್ನು ಓದಿ: ಅಮ್ಮನ ಗೆಲುವಿಗೆ ಚಿಯರ್​ಅಪ್​ ಮಾಡಿದ ಮಗ; ನೆಟ್ಟಿಗರ ಮನಗೆಲ್ಲುತ್ತಿದೆ ಸಾನಿಯಾ ಮಿರ್ಜಾ ಫೋಟೋ

  ಇನ್ನು ದೇವಾಲಯಗಳ ತೆರೆಯುವಂತೆ ಕೂಡ ಈಗಾಗಲೇ ಅನೇಕರು ಬೇಡಿಕೆ ಇಟ್ಟಿದ್ದು, ಕಟ್ಟುನಿಟ್ಟಿನ ಮಾರ್ಗಸೂಚಿ ಅನ್ವಯ ಇದಕ್ಕೂ ಅವಕಾಶ ನೀಡುವ ಸಾಧ್ಯತೆ ಇದೆ.
  ಇನ್ನು ಈ ನಡುವೆ ರಾಜ್ಯದಲ್ಲಿ ಡೆಲ್ಟಾ ಸೋಂಕು ಕೂಡ ಆತಂಕ ಮೂಡಿಸಿರುವ ಹಿನ್ನಲೆ ಕೋವಿಡ್​ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅನಿವಾರ್ಯವಾಗಿದೆ.
  ನೆರೆಯ ಕೇರಳ, ಮಹಾರಾಷ್ಟ್ರ ರಾಜ್ಯದಲ್ಲಿ ಡೆಲ್ಟಾ ಸೋಂಕಿನ ಭೀತಿ ಎದುರಾಗಿರುವ ಹಿನ್ನಲೆ ಇನ್ಮುಂದೆ ರಾಜ್ಯಕ್ಕೆ ಆಗಮಿಸುವವರಿಗೆ ಆರ್​ಟಿಪಿಸಿಆರ್​ ಟೆಸ್ಟ್​ ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ನೆರೆಯ ರಾಜ್ಯದಿಂದ ಆಗಮಿಸುವವರು ಆರ್​ಟಿಪಿಸಿಆರ್​ ನೆಗಟಿವ್​ ವರದಿ ಅಥವಾ ಕೋವಿಡ್​ ವಾಕ್ಸಿನೇಷನ್​ ಪ್ರಮಾಣ ಪತ್ರವನ್ನು ತೋರಿಸಿಯೇ ಕರ್ನಾಟಕಕ್ಕೆ ಬರಬೇಕು ಎಂದು ಸೂಚನೆ ನೀಡಲಾಗಿದೆ. ಇಷ್ಟು ದಿನ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಮಿಸುವವರಿಗೆ ಈ ನಿರ್ಬಂಧ ವಿಧಿಸಲಾಗಿತ್ತು. ಈಗ ಕೇರಳದಲ್ಲೂ ಡೆಲ್ಟಾ ಸೋಂಕಿನ ಭೀತಿ ಮೂಡಿರುವ ಹಿನ್ನಲೆ ಈ ಕ್ರಮ ಅನಿವಾರ್ಯವಾಗಿದೆ ಎಂದು ಸರ್ಕಾರ ನಿನ್ನೆಯಷ್ಟೇ ಆದೇಶ ನೀಡಿದೆ.

  ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಶೇ 2ಕ್ಕಿಂತ ಕಡಿಮೆಯಾಗಿದ್ದು, ಪ್ರತಿನಿತ್ಯ 3 ಸಾವಿರಕ್ಕಿಂತ ಕಡಿಮೆ ಸೋಂಕಿನ ಪ್ರಕರಣ ದಾಖಲಾಗುತ್ತಿದೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು
  Published by:Seema R
  First published: