HOME » NEWS » State » BENGALURU URBAN KARNATAKA UNLOCK LOCKDOWN IMPOSITION ON 11 DISTRICT SESR

Karnataka Unlock: 11 ಜಿಲ್ಲೆಗಳಲ್ಲಿ ಲಾಕ್​ಡೌನ್​ ಮುಂದುವರಿಕೆ; ವೀಕೆಂಡ್​​ ಕರ್ಫ್ಯೂ ಜಾರಿ

11 ಜಿಲ್ಲೆಗಳಲ್ಲಿ ಲಾಕ್​ಡೌನ್​ ಮುಂದುವರೆಯಲಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸಡಿಸಲಾಗಿದೆ.

news18-kannada
Updated:June 10, 2021, 9:05 PM IST
Karnataka Unlock: 11 ಜಿಲ್ಲೆಗಳಲ್ಲಿ ಲಾಕ್​ಡೌನ್​ ಮುಂದುವರಿಕೆ; ವೀಕೆಂಡ್​​ ಕರ್ಫ್ಯೂ ಜಾರಿ
ಬಿ.ಎಸ್​. ಯಡಿಯೂರಪ್ಪ.
  • Share this:
ಬೆಂಗಳೂರು (ಜೂ. 10): ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದ 11 ಜಿಲ್ಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಲಾಕ್​ಡೌನ್​ ಅನ್ನು ಜೂ. 21ರವರೆಗೆ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಿಳಿಸಿದರು.  ಲಾಕ್​ಡೌನ್​ ಸಡಿಲಿಕೆ ಕುರಿತು ಇಂದು ಅಧಿಕಾರಿಗಳು, ಸಚಿವರು, ತಜ್ಞರೊಂದಿಗೆ ಅವರು ಸಭೆ ನಡೆಸಿದರು. ಇದಾದ ಬಳಿಕ ಮಾತನಾಡಿರುವ ಅವರು. ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆ ಹೊರತು ಪಡಿಸಿ ನಿರ್ಬಂಧ ಸಡಿಲಿಕೆ ಮಾಡಿರುವುದಾಗಿ ತಿಳಿಸಿದ್ದಾರೆ. ಸೋಂಕಿನ ದರ ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್​ಡೌನ್​ ಮುಂದುವರೆಯಲಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸಡಿಸಲಾಗಿದೆ. ರಾಜ್ಯಾದ್ಯಾಂತ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ. ಇದರ ಜೊತೆ ಪ್ರತಿನಿತ್ಯ ರಾತ್ರಿ ಕರ್ಫ್ಯೂ ಕೂಡ ಜಾರಿಯಲ್ಲಿರಲಿದೆ. ಅಂತರ ಜಿಲ್ಲೆ ಸಂಚಾರಕ್ಕೆ ಅವಕಾಶವಿದ್ದು, ಅಂತರ್​ ರಾಜ್ಯ ಸಂಚಾರಕ್ಕೆ ನಿರ್ಬಂಧ ಇರಲಿದೆ ಎಂದು ಅವರು ತಿಳಿಸಿದರು

ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಬಂಧ ಗಳಲ್ಲಿ ಕೆಲವು ಮಾರ್ಪಾಡುಗಳನ್ನು  ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದ ಅವರು ಪಾಸಿಟಿವಿಟಿ ಹೆಚ್ಚಿರುವ 11 ಜಿಲ್ಲೆಗಳಲ್ಲಿ ಲಾಕ್​ಡೌನ್​ ಮುಂದುವರೆಯಲಿದೆ ಎಂದರು

ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಈಗಿರುವಂತೆ ಲಾಕ್​ಡೌನ್​ ಮಾರ್ಗಸೂಚಿಯನ್ನು ಜೂ 21ರವರೆಗೆ ಮುಂದುವರೆಸಬೇಕು. ಇದರಲ್ಲಿ ಯಾವುದೇ ಬದಾವಣೆ ಇಲ್ಲ.  ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಹಾಗೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದರು.

ಉಳಿದ  ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಕೆಲವು ಸಡಿಲಿಕೆ ಮಾಡಲಾಗಿದೆ.  ಇದರ ಜೊತೆ ವಾರಾಂತ್ಯದಲ್ಲಿ ಕರ್ಫ್ಯೂ ಮುಂದುವರೆಯಲಿದೆ. ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 2ರವರೆಗೂ ಅವಕಾಶ ನೀಡಲಾಗಿದೆ

  • ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ

  •  ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
  •  ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿರ್ಮಾಣ ಚಟುವಟಿಕೆ ಸಂಬಂಧಿಸಿದ ಅಂಗಡಿಗಳನ್ನು ಅದರಲ್ಲೂ ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ಅಂಗಡಿ ತೆರೆಯಲು ಅವಕಾಶ ನಿಡಲಾಗಿದೆ.

  •  ಪಾರ್ಕ್ ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

  • ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.

  •  ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.

  •  ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

  •  ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.


ಇದನ್ನು ಓದಿ: ಲಸಿಕೆಗಾಗಿ ಕರವೇ ಸಾವಿರಾರು ಪ್ರತಿಭಟನೆ; ಯಶಸ್ಸಿಗೆ ಧನ್ಯವಾದ ತಿಳಿಸಿದ ನಾರಾಯಣಗೌಡ

ಉಳಿದಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು. ಈ ನಿಯಮಗಳನ್ನು ಜನರು ಕಟ್ಟು ನಿಟ್ಟಾಗಿ ಪಾಲಿಸಬೇಕು. ಈ ಮೂಲಕ  ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಇದೇ ವೇಳೆ ಅವರು ಮನವಿ ಮಾಡಿದರು

ರಾಜ್ಯದಲ್ಲಿ ಇಂದು 11, 042 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಕೋವಿಡ್​ಗೆ 194 ಜನ ಸಾವನ್ನಪ್ಪಿದ್ದಾರೆ, ಕಳೆದ 24 ಗಂಟೆಯಲ್ಲಿ 15, 721 ಮಂದಿ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಇಂದು 2191 ಕೇಸ್ ಪತ್ತೆಯಾಗಿದ್ದು, 47 ಮಂದಿ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆ.
Youtube Video

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by: Seema R
First published: June 10, 2021, 8:08 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories