ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಇದೇ ವಾತಾವರಣವು ಮುಂದಿನ ಎರಡು ದಿನಗಳ ಕಾಲವೂ ಮುಂದುವರೆಯುವ ಸಾಧ್ಯತೆ ದಟ್ಟವಾಗಿದೆ (Karnataka Weather) ಎಂದು ಬೆಂಗಳೂರು (Bengaluru Weather) ಹವಾಮಾನ ಕೇಂದ್ರ ಮಾಹಿತಿ ನೀಡಿದೆ. ಉತ್ತರ ಕರ್ನಾಟಕದಲ್ಲಿ ಒಣ ಹವಾಮಾನ ಮುಂದುವರೆಯಲಿದೆ. ಆದರೆ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Karnataka Rain Alert) ಸಾಧ್ಯತೆಯಿದೆ ಎಂದು ಹವಾಮಾನ ವರದಿ ಮಾಹಿತಿ ನೀಡಿದೆ.
ಬೆಂಗಳೂರಿನ ನಾಳೆಯ ಹವಾಮಾನ ಹೇಗಿರಲಿದೆ? ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಉಂಟಾಗಲಿದೆ. ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 ಮತ್ತು 22 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ಕೇಂದ್ರವು ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಯಲ್ಲಿ ಏನಾಗಲಿದೆ? ಬೆಂಗಳೂರು ನಗರದ ಮುಂದಿನ 48 ಗಂಟೆಗಳ ಹವಾಮಾನ ವರದಿ ಗಮನಿಸುವುದಾದರೆ ಭಾಗಶಃ ಮೋಡ ಕವಿದ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ.
Rainfall Forecast: Scattered to widespread very light to moderate rains with isolated heavy rains likely over SIK and scattered to widespread very light to moderate rains likely over Coastal Karnataka & Malnad and isolated very light to moderate rains likely over NIK. pic.twitter.com/dHcHunBiii
ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 ಮತ್ತು 22 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಯಚೂರಿನಲ್ಲಿ ಗರಿಷ್ಠ 41.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಜ್ಯದ ಬಯಲು ಸೀಮೆ ಭಾಗದ ಧಾರವಾಡದಲ್ಲಿ 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಮೀನುಗಾರಿಕೆ ಯಾವುದೇ ರೀತಿಯ ಎಚ್ಚರಿಕೆ ಸಂದೇಶವನ್ನು ಹವಾಮಾನ ಇಲಾಖೆ ನೀಡಿಲ್ಲ.
ಪ್ರಬಲ ಮಾರುತಗಳು ಚಲನೆ ಹೀಗಿದೆ ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದ ಮೂಲಕ ಕರ್ನಾಟಕದ ದಕ್ಷಿಣ ಒಳನಾಡಿಗೆ ಬರುತ್ತಿದ್ದ ಪ್ರಬಲ ಮಾರುತಗಳು ಇದೀಗ ಇದೀಗ ಛತ್ತೀಸಗಡ ಮಾರ್ಗವಾಗಿ ತಮಿಳುನಾಡಿನತ್ತ ತೆರಳುವ ಸಾಧ್ಯತೆಯಿದೆ. ಸಮುದ್ರಮಟ್ಟದಿಂದ 0.9 ಕಿಮೀ ಮೇಲ್ಪಟ್ಟದಲ್ಲಿರುವ ಈ ಸುಳಿಗಾಳಿಯು ತೆಲಂಗಾಣ ಮತ್ತು ಕರ್ನಾಟಕ ಮಾರ್ಗದಲ್ಲಿ ಹಾದುಹೋಗಲಿದೆ
ಮುಂದಿನ ನಾಲ್ಕು ದಿನಗಳಲ್ಲಿ ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಮೇಲೆ ಮತ್ತು ಕರಾವಳಿ ಆಂಧ್ರಪ್ರದೇಶ ಮತ್ತು ರಾಯಲಸೀಮಾದಲ್ಲಿ ಮಧ್ಯಮ ಪ್ರಮಾಣದಲ್ಲಿ ಮಿಂಚು ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಮೂಲಕ ದೇಶದ ರೈತರಿಗೆ ಭಾರೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.