Karnataka Weather Today: ರಾಜ್ಯದಲ್ಲಿ ಇಂದು ಸಹ ಭಾರೀ ಮಳೆಯ ನಿರೀಕ್ಷೆ- ಇಂದಿನ ಹವಾಮಾನ ವರದಿ ಹೀಗಿದೆ.

Rainfall: ಇನ್ನು ಕಳೆದ 2 ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಮಿಶ್ರ ವಾತಾವರಣವಿತ್ತು. ಕೆಲವೊಮ್ಮೆ ಬಿಸಿಲಿದ್ದರೆ, ಇನ್ನು ಕೆಲವೊಮ್ಮೆ ಮೋಡ ಕವಿದ ವಾತವರಣವಿತ್ತು, ಆದರೆ  ನಗರದ ಬಹುತೇಕ ಪ್ರದೇಶಗಳಲ್ಲಿ  ಸೋಮವಾರ ಮಧ್ಯಾಹ್ನವೇ ಅಬ್ಬರದ ಮಳೆ ಸುರಿತಿದೆ. ಮಧ್ಯಾಹ್ನ 2 ಗಂಟೆಯಿಂದಲೇ ಜಿಟಿ ಜಿಟಿ ಮಳೆ ಆರಂಭವಾಗಿ, ನಂತರ ಜೋರು ಮಳೆಯಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today:ಬೆಂಗಳೂರು(ಸೆ.21)ಕಳೆದ ಕೆಲವು ವಾರಗಳಿಂದ ಮುಂಗಾರು ಹಾಗೂ ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿತ್ತು(Heavy Rainfall). ಆದರೆ ಕಳೆದ ಕೆಲವು ದಿನಗಳಿಂದ ಕೊಂಚ ಬಿಡುವು ಮೂಡಿದೆ. ಹವಾಮಾನ ಇಲಾಖೆಯ ಪ್ರಕಾರ 2 ದಿನಗಳಿಂದ ಭಾರೀ ಮಳೆಯ ನಿರೀಕ್ಷೆ ಇತ್ತು. ಆದರೆ ರಾಜ್ಯದ ಕರಾವಳಿ(Coastal) ಮತ್ತು ಮಲೆನಾಡು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಿಲ್ಲ. ಇನ್ನು ಇಂದು ಸಹ ಭಾರೀ ಮಳೆಯ ನಿರೀಕ್ಷೆ ಇದ್ದು, ಕರಾವಳಿ ಭಾಗಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ.

ಮಾನ್ಸೂನ್ ಬಿಕನೇರ್ ಮೂಲಕ ಕಡಿಮೆ ಒತ್ತಡದ ಪ್ರದೇಶ, ಸತ್ನಾ, ದಾಲ್ತೊಂಗಂಜ್, ದಿಘಾ ಮತ್ತು ಆಗ್ನೇಯ ವಾರ್ಡ್‌ಗಳಿಂದ ಪೂರ್ವ ಮಧ್ಯ ಬಂಗಾಳಕೊಲ್ಲಿಯವರೆಗೆ ಹಾದು ಹೋಗುತ್ತಿದೆ.

ಸೆ.20ರಿಂದ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿತ್ತು, ಇಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದೆ ಎಂಬ ನಿರೀಕ್ಷೆ ಇದೆ. ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದೆ. ಆದರೆ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರೆಯಲಿದೆ ವರುಣನ ಆರ್ಭಟ -ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ .

ರಾಜಾಧಾನಿ ಬೆಂಗಳೂರಲ್ಲಿ ನಿನ್ನೆ ಭಾರೀ ಮಳೆ

ಇನ್ನು ಕಳೆದ 2 ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಮಿಶ್ರ ವಾತಾವರಣವಿತ್ತು. ಕೆಲವೊಮ್ಮೆ ಬಿಸಿಲಿದ್ದರೆ, ಇನ್ನು ಕೆಲವೊಮ್ಮೆ ಮೋಡ ಕವಿದ ವಾತವರಣವಿತ್ತು, ಆದರೆ  ನಗರದ ಬಹುತೇಕ ಪ್ರದೇಶಗಳಲ್ಲಿ  ಸೋಮವಾರ ಮಧ್ಯಾಹ್ನವೇ ಅಬ್ಬರದ ಮಳೆ ಸುರಿತಿದೆ. ಮಧ್ಯಾಹ್ನ 2 ಗಂಟೆಯಿಂದಲೇ ಜಿಟಿ ಜಿಟಿ ಮಳೆ ಆರಂಭವಾಗಿ, ನಂತರ ಜೋರು ಮಳೆಯಾಗಿದೆ.  ನಗರದಲ್ಲಿ ಭಾನುವಾರ ರಾತ್ರಿ  ಸಹ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ಇಂದು ಸಹ ನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ನಗರದಲ್ಲಿ ಭಾರೀ ಮಳೆಯಿಂದಾಗಿ ನೀರು ರಸ್ತೆ ಮೇಲೆಯೇ ಹರಿಯುತ್ತಿದೆ. ಕೆಲ ಕಡೆ ಕಾಲುವೆಗಳಲ್ಲಿ ನೀರು ತುಂಬಿ ಹರಿಯುತ್ತಿದ್ದು, ತ್ಯಾಜ್ಯವೆಲ್ಲ ರಸ್ತೆಗೆ ಬಂದು ಬಿದ್ದು ಅವಾಂತರ ಸೃಷ್ಟಿಸಿದೆ. ಮಳೆಯಿಂದ ತಪ್ಪಿಸಿಕೊಳ್ಳಲು ಕೆಲವರು, ರಸ್ತೆಯ ಪಕ್ಕ–ಪಕ್ಕದ ಮಳಿಗೆಗಳಲ್ಲಿ ಆಶ್ರಯ ಪಡೆದರು. ಭಾರೀ ಮಳೆಯಿಂದಾಗಿ ಹಲವರು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರಕ್ಕೆ ಪರದಾಡುವ ಪರಿಸ್ಥಿತಿ ಇದುರಾಗಿತ್ತು.

ಮೆಜೆಸ್ಟಿಕ್, ಶೇಷಾದ್ರಿಪುರ, ವಿಧಾನಸೌಧ, ಶಿವಾಜಿನಗರ, ಇಂದಿರಾನಗರ, ಎಂ.ಜಿ. ರಸ್ತೆ, ಹಲಸೂರು, ವಿಲ್ಸನ್ ಗಾರ್ಡನ್, ಶಾಂತಿನಗರ, ವೈಟ್‌ಫೀಲ್ಡ್, ಬೆಳ್ಳಂದೂರು, ಈಜಿಪುರ, ಕೆ.ಆರ್. ಪುರ, ನಾಗವಾರ, ಹೆಬ್ಬಾಳ, ಸಂಜಯನಗರ, ಆರ್‌.ಟಿ. ನಗರ ಹಾಗೂ ಸುತ್ತಮುತ್ತ ಮಳೆ ಆರ್ಭಟ ಹೆಚ್ಚಿತ್ತು.

ಚಾಮರಾಜಪೇಟೆ, ಜಯನಗರ, ಹನುಮಂತನಗರ, ಗಿರಿನಗರ, ಬಸವನಗುಡಿ, ವಿಜಯನಗರ, ಬಸವೇಶ್ವರನಗರ, ರಾಜಾಜಿನಗರ, ಯಶವಂತಪುರ, ಮತ್ತೀಕೆರೆ, ಪೀಣ್ಯ, ವಿದ್ಯಾರಣ್ಯಪುರ, ಜಾಲಹಳ್ಳಿ, ಯಲಹಂಕ,  ಕೋರಮಂಗಲ, ಮಡಿವಾಳ, ಎಚ್‌ಎಸ್‌ಆರ್ ಲೇಔಟ್‌ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲೂ ಭಾರೀ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಮತ್ತು ಉತ್ತರ ಒಳನಾಡು ಕರ್ನಾಟಕ,  ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ, ಮಧ್ಯ ಮಹಾರಾಷ್ಟ್ರ, ಕರಾವಳಿ ಆಂಧ್ರ ಪ್ರದೇಶ, ತಮಿಳುನಾಡಿನ ಕೆಲವು ಭಾಗಗಳು, ಪಂಜಾಬ್‌ನ ಕೆಲವು ಭಾಗಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ.

ಇದನ್ನೂ ಓದಿ: ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ದಕ್ಷಿಣ ಒಳನಾಡಿನ ಕರ್ನಾಟಕ, ಕೇರಳ, ಲಕ್ಷದ್ವೀಪ, ಸೌರಾಷ್ಟ್ರ ಕಚ್ ಮತ್ತು ರಾಜಸ್ಥಾನದ ಪಶ್ಚಿಮ ಭಾಗಗಳಲ್ಲಿ  ಸಹ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ವಿಧಾನಸೌಧ ಕಟ್ಟಡದೊಳಗೆ ನೀರು ನುಗ್ಗಿತ್ತು. ಕಟ್ಟಡದ ಕಾರಿಡಾರ್‌ನಲ್ಲಿ ನೀರು ನಿಂತುಕೊಂಡಿತ್ತು. ಮಳೆ ನಿಂತ ನಂತರ ಸ್ವಚ್ಛತಾ ಸಿಬ್ಬಂದಿ ನೀರು ಹೊರ ಹಾಕಿದ್ದಾರೆ.
Published by:Sandhya M
First published: