Karnataka Weather Today: ಕರ್ನಾಟಕದಲ್ಲಿ ಮುಂದುವರೆದ ಮಳೆ, ಇಂದಿನ ಹವಾಮಾನ ಹೇಗಿರಲಿದೆ?

ಇಂದು ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  Karnataka Rains Today ಬೆಂಗಳೂರು(ಅ.11): ಇಂದು ಕರ್ನಾಟಕದ ದಕ್ಷಿಣ ಒಳನಾಡು(SIK) ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ(NIK) ಗುಡುಗು ಸಹಿತ ಭಾರೀ ಮಳೆಯಾಗಲಿದ್ದು(Rainfall), ಹಲವೆಡೆ ಯೆಲ್ಲೋ ಅಲರ್ಟ್(Yellow Alert)​ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ. ಜೊತೆಗೆ ಕರಾವಳಿ(Coastal) ಮತ್ತು ಮಲೆನಾಡಿನ(Malnad) ಜಿಲ್ಲೆಗಳಲ್ಲೂ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿ(Bay of Bengal)ಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.  ರಾಜ್ಯದ 19 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ನಿರೀಕ್ಷೆ ಇದ್ದು, ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

  ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅಂದರೆ ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಕಡೆ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಭಾರತದ ಕರಾವಳಿ ಪ್ರದೇಶಗಳಲ್ಲಿ 'ಜವಾದ್' ಚಂಡಮಾರುತದ ಪ್ರಭಾವದಿಂದ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದ್ದು , ಗುಲಾಬ್, ಶಾಹೀನ್ ನಂತರ ಇದೀಗ ಜವಾದ್ ಚಂಡಮಾರುತ ಅಪ್ಪಳಿಸಲಿರುವುದಾಗಿ ಮುನ್ಸೂಚನೆ ನೀಡಿದೆ. ಅಲ್ಲದೇ, ಅ.12 ಮತ್ತು 13ರಂದು ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

  ಇಂದು ಎಲ್ಲೆಲ್ಲಿ ಮಳೆ ಸಾಧ್ಯತೆ?

  ಇಂದು ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಂತೆಯೇ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

  ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

  ಬೆಂಗಳೂರಿನಲ್ಲಿ ಇಂದು ಭಾರೀ ಮಳೆ ಸಾಧ್ಯತೆ:

  ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಯಿತು. ಅಂತೆಯೇ, ಮಳೆಯಿಂದಾಗಿ ಟ್ರಾಫಿಕ್ ಸಮಸ್ಯೆಯೂ ಸೃಷ್ಟಿಯಾಗಿತ್ತು.

  ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಮಳೆ?

  ಕಳೆದ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ, ತೆಲಂಗಾಣ, ಗೋವಾ, ಮಧ್ಯಪ್ರದೇಶದ ಹಲವೆಡೆ ಹಾಗೂ ದಕ್ಷಿಣ ಗುಜರಾತ್​ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಅಂತೆಯೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ ಹಾಗೂ ಕೇರಳದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ರಾಯಲಸೀಮದಲ್ಲಿ ಅಧಿಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  ಕರಾವಳಿ ಆಂಧ್ರಪ್ರದೇಶ, ಗಂಗಾ ಪಶ್ಚಿಮ ಬಂಗಾಳ, ಸಿಕ್ಕಿಂ, ತೆಲಂಗಾಣದ ಕೆಲವು ಭಾಗಗಳು ಮತ್ತು ಉತ್ತರ ಕರ್ನಾಟಕದ ಒಳಭಾಗದಲ್ಲಿ ಭಾರೀ ಮಳೆಯಾಗಿದೆ. ಗುಜರಾತ್, ಕೊಂಕಣ ಮತ್ತು ಗೋವಾ, ಆಗ್ನೇಯ ಎಂಪಿ, ಉಪ ಹಿಮಾಲಯದ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಲಕ್ಷದ್ವೀಪದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.

  ಮುಂದಿನ 24 ಗಂಟೆ ಹವಾಮಾನ ಸ್ಥಿತಿ ಹೇಗಿರಲಿದೆ?

  ಮುಂದಿನ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೊಬಾರ್, ಆಂಧ್ರಪ್ರದೇಶ, ತೆಲಂಗಾಣ, ಲಕ್ಷದ್ವೀಪ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ತಮಿಳುನಾಡು, ಆಂಧ್ರ ಪ್ರದೇಶ, ಕೇರಳ, ಒಡಿಶಾ ಮತ್ತು ಗುಜರಾತ್‌ನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಇಲಾಖೆ ಮಾಹಿತಿ ನೀಡಿದೆ.
  Published by:Latha CG
  First published: