Bus Strike: ಗಮನಿಸಿ! ಮಾರ್ಚ್ 29ರಂದು KSRTC, BMTC ಬಸ್ ರಸ್ತೆಗಿಳಿಯೋದು ಅನುಮಾನ!

ಬಳ್ಳಾರಿಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಅವರ ಮನೆ ಮುಂದೆಯೂ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬೆಂಗಳೂರು: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರು (Karnataka Road Transport) ರಾಜ್ಯ ಸರ್ಕಾರದ  (Karnataka Government)ವಿರುದ್ಧ ಮತ್ತೆ ಸಿಡಿದಿದ್ದಾರೆ. ತಮ್ಮ ವೇತನ ಪರಿಷ್ಕರಣೆ, ಅಧಿಕಾರಿಗಳ ಕಿರುಕುಳ ಸೇರಿದಂತೆ 2021 ರ ಮುಷ್ಕರದಲ್ಲಿ ಭಾಗಿಯಾದ ನೌಕರರನ್ನು ವಜಾಗೊಳಿದ ಕ್ರಮ ವಿರೋಧಿಸಿ ಪ್ರತಿಭಟನೆ ನಡೆಸಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು (KSRTC Strike) ತೀರ್ಮಾನಿಸಿದ್ದಾರೆ. ಮಾರ್ಚ್ 29ರಂದು ಕರ್ನಾಟಕ ರಾಜ್ಯದಾದ್ಯಂತ ಸರ್ಕಾರಿ ಬಸ್​ಗಳ (Government Bus Service) ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ಬಸ್​ಗಲನ್ನೇ ನಂಬಿಕೊಂಡು ಪ್ರಯಾಣ ಮಾಡುವ ನಾಗರಿಕರು  ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಒಳಿತು.

  ಮಾರ್ಚ್ 29 ರಂದು  ರಾಜ್ಯಾದ್ಯಂತ KSRTC, BMTC ಬಸ್ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆಯಿದೆ. ಮಾರ್ಚ್ 29 ರಂದು ಬೆಂಗಳೂರಿನ ಫ್ರೀಡಂಪಾಕ್೯ ನಲ್ಲಿ ಪ್ರತಿಭಟನೆ ನಡೆಯಲಿದೆ  ಪ್ರತಿಭಟನೆಯಲ್ಲಿ ಸಾವಿರಾರು ಸಾರಿಗೆ ನೌಕರರು ಹಾಗೂ ಸಾರಿಗೆ ನೌಕರರ ಕುಟುಂಬದವರು ಸತ್ಯಾಗ್ರಹ ಮಾಡಲು ಯೋಜನೆ ರೂಪಿಸಿದ್ದಾರೆ ಎಂದು ವರದಿಯಾಗಿದೆ. ಅಷ್ಟೇ ಅಲ್ಲದೇ, ಬಳ್ಳಾರಿಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಅವರ ಮನೆ ಮುಂದೆಯೂ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

  ಕರೆ ನೀಡಿದವರು ಯಾರು?
  ರಾಜ್ಯ ರಸ್ತೆ ಸಾರಿಗೆ ನಿಗಮಗಳ ಒಕ್ಕೂಟ ಹಾಗೂ CITU ಫೆಡೆರೇಷನ್​ನಿಂದ ಅಮಾರಣಾಂತಿಕ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಲಾಗಿದೆ.

  ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಮಾಡುವ ಬಗ್ಗೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ.

  ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳೇನು?
  2021 ರಲ್ಲಿ ಮುಷ್ಕರದಲ್ಲಿ ಭಾಗಿಯಾದ ಸಾರಿಗೆ ಕಾರ್ಮಿಕರನ್ನ  ವಜಾಗೊಳಿಸಲಾಗಿದೆ. ಅವ್ರನ್ನ ಕೂಡಲೇ ನೇಮಕ ಮಾಡಿಕೊಳ್ಳಬೇಕು

  01-01-2020 ರಿಂದ ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ, ಸಮಾನವಾಗಿ ವೇತನ ಪರಿಷ್ಕರಣೆ ಮಾಡಬೇಕು

  ಇದನ್ನೂ ಓದಿ: Chitra Santhe 2022: ಬೆಂಗಳೂರಿನಲ್ಲಿ ಚಿತ್ರಗಳ ಚಿತ್ತಾರ, 19ನೇ ಚಿತ್ರಸಂತೆಯ ಸೊಬಗು ನೋಡಿ...ಫೋಟೋ ಇಲ್ಲಿದೆ

  ಮೇಲಾಧಿಕಾರಿಗಳಿಂದ ಆಗ್ತಿರುವ ಕಿರುಕುಳ, ದೌರ್ಜನ್ಯಗಳು ನಿಲ್ಲಬೇಕು

  ಕಿರುಕುಳದಿಂದ ನಿಧನ ಹೊಂದಿದ ಕುಟುಂಬಗಳಿಗೆ ಪರಿಹಾರ ನೀಡಬೇಕು.

  ಸಾರಿಗೆ ಇಲಾಖೆಯನ್ನ ಖಾಸಗಿಕರಣ ಮಾಡಬಾರದು. ನಿಗಮಗಳ ಆಸ್ತಿಗಳನ್ನು ಅಡಮಾನ ಇಡೋದನ್ನ ನಿಲ್ಲಿಸಬೇಕು

  ಸರಿಯಾದ ಸಮಯಕ್ಕೆ ವೇತನ ನೀಡಬೇಕು

  ಮಾರ್ಚ್ 29 ರಂದು ಬೆಂಗಳೂರಿನ ಫ್ರೀಡಂಪಾಕ್೯ ನಲ್ಲಿ ಪ್ರತಿಭಟನೆ ನಡೆಯಲಿದೆ  ಪ್ರತಿಭಟನೆಯಲ್ಲಿ ಸಾವಿರಾರು ಸಾರಿಗೆ ನೌಕರರು ಹಾಗೂ ಸಾರಿಗೆ ನೌಕರರ ಕುಟುಂಬದವರು ಸತ್ಯಾಗ್ರಹ ಮಾಡಲು ಯೋಜನೆ ರೂಪಿಸಿದ್ದಾರೆ.

  ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್
  ದಿನಾಂಕ: 02.04.2022ರಂದು ಯುಗಾದಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 01.04.2022 ಹಾಗೂ 02.04.2022 ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ 600 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 03.04.2022ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

  ಇದನ್ನೂ ಓದಿ: Karnataka Weather: ಕರಾವಳಿ, ದಕ್ಷಿಣ ಕರ್ನಾಟಕದಲ್ಲಿ ಮಳೆ, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಸಾಧ್ಯತೆ

  ಯುಗಾದಿ ಪ್ರಯುಕ್ತ ಹೆಚ್ಚುವರಿ ಬಸ್​ಗಳ ಸಂಚಾರ
  ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಗುಲ್ಬರ್ಗ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಾಗುವುದು
  Published by:guruganesh bhat
  First published: