Independence day: ಮಾಣಿಕ್ ಷಾ ಗ್ರೌಂಡ್ ಸುತ್ತಲೂ ಇಂದು ಹೇಗಿರಲಿದೆ ಪೊಲೀಸ್ ಭದ್ರತೆ? ಸಾರ್ವಜನಿಕರಿಗಿಲ್ಲ ಪ್ರವೇಶ!

ಈ ಬಾರಿ ವಿಶೇಷತೆ ಏನೆಂದರೆ, ವೈದ್ಯರು, ಸ್ವಚ್ಛತಾ ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಯ ಕೋವಿಡ್ ವಾರಿಯರ್‌ಗಳು ಒಟ್ಟು 100 ಸಿಬ್ಬಂದಿ ಹಾಗೂ ಕೊರೋನಾ ಸೋಂಕಿನಿಂದ ಗುಣಮುಖರಾಗಿರುವ 25 ಜನರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು: ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಬೆಂಗಳೂರಿನಲ್ಲಿ ಭರದ ಸಿದ್ದತೆ ನಡೆದಿದೆ. ಆದ್ರೆ ಕೋವಿಡ್ 19 ಹಿನ್ನಲೆ ಸರಳವಾಗಿ ಆಚರಣೆ ಮಾಡಲು ಬಿಬಿಎಂಪಿ ಮುಂದಾಗಿದೆ. ಈ ಮಧ್ಯೆ ಪೊಲೀಸ್ ಇಲಾಖೆಯೂ ಸಹ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸುವ ಮೂಲಕ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ತಾಲೀಮು ನಡೆಸಿದೆ.

ಸರಳ ಸ್ವಾತಂತ್ರ್ಯ ದಿನಾಚರಣೆಗೆ ಬಿಬಿಎಂಪಿ ಸಜ್ಜು..!

ಇನ್ನೂ ಕೊರೋನಾ ಅನ್ನೋದು ಮಾಸಿಲ್ಲ.‌ ಈಗಾಗಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದೆ.‌ ಶಿವಾಜಿನಗರದ ಬಳಿ ಇರುವ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನ ಆಚರಿಸಲು ಕಳೆದ ಎರಡು ದಿನಗಳಿಂದ ಸಿದ್ಧತೆ ನಡೆಸಲಾಗಿದೆ. ಈ ಬಾರಿ ವಿಶೇಷತೆ ಏನೆಂದರೆ, ವೈದ್ಯರು, ಸ್ವಚ್ಛತಾ ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಯ ಕೋವಿಡ್ ವಾರಿಯರ್‌ಗಳು ಒಟ್ಟು 100 ಸಿಬ್ಬಂದಿ ಹಾಗೂ ಕೊರೋನಾ ಸೋಂಕಿನಿಂದ ಗುಣಮುಖರಾಗಿರುವ 25 ಜನರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಗಣ್ಯರೂ ಸೇರಿ ಒಟ್ಟು 1000 ಜನರನ್ನು ಮಾತ್ರ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಈ ಸಮಾರಂಭಕ್ಕಾಗಿ ಈಗಾಗ್ಲೇ ಮಾಣಿಕ್ ಷಾ ಪರೇಡ್ ಮೈದಾನವನ್ನು ಸಂಪೂರ್ಣವಾಗಿ ಸಿದ್ಧಗೊಳಿಸಲಾಗಿದೆ. ಶಾಮಿಯಾನ, ವೇದಿಕೆಯ ನಿರ್ಮಾಣ, ಬ್ಯಾರಿಕೇಡಿಂಗ್ ಮತ್ತು ಒಂದು ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ವೇದಿಕೆಗೆ ಆಲಂಕಾರಿಕ ಪರಿಕರಗಳನ್ನು ಅಳವಡಿಸಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗ್ಗೆ 9.00 ಗಂಟೆಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಇನ್ನು ಗೌರವ ರಕ್ಷೆ ಸ್ವೀಕರಿಸಲು KSRP, CRPF, BSF ಸೇರಿ ಟ್ರಾಫಿಕ್ ಪೊಲೀಸರು, ಮಹಿಳಾ ಪೊಲೀಸರು ಜೊತೆಗೆ ಹೋಂ ಗಾರ್ಡ್ಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯನ್ನು‌ ನಿಯೋಜನೆ ಮಾಡಲಾಗಿದೆ. ಡಾಗ್ ಸ್ಕ್ವಾರ್ಡ್ ನಿಂದ ‌ಸಂಪೂರ್ಣ ಪರಿಶೀಲನೆ ಸಹ ನಡೆಯಲಿದೆ‌.

ಇದನ್ನು ಓದಿ: ಕೋವಿಡ್​ ವಿರುದ್ಧದ ಹೋರಾಟ ಇನ್ನೂ ಮುಗಿದಿಲ್ಲ; 75ನೇ ಸ್ವಾತಂತ್ರ್ಯ ದಿನದ ರಾಷ್ಟ್ರಪತಿಗಳ ಭಾಷಣದ ಪ್ರಮುಖಾಂಶ

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಭದ್ರತೆ ಮತ್ತು ಸುರಕ್ಷತೆಗಾಗಿ 60 ಸಿ.ಸಿ ಕ್ಯಾಮೆರಾ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಂದು ಸಿಸಿ ಕ್ಯಾಮರಾವನ್ನ ಮಾನಿಟರ್ ಮಾಡಲಾಗುತ್ತೆ. ಜೊತೆಗೆ ಮಾಣಿಕ್ ಷಾ ಗ್ರೌಂಡ್ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಒಂದೂವರೆ ಸಾವಿರ ಪೊಲೀಸ್ ಸಿಬ್ಬಂದಿ ಭದ್ರತೆಗೆ ನಿಯೋಜಿಸಲಾಗಿದೆ. ಒಟ್ಟು 10 ಮಂದಿ ಡಿಸಿಪಿ ಸ್ಥಳದಲ್ಲಿ ನಿಯೋಜನೆ ಆಗಲಿದ್ದು, ಎರಡು ಕಮಾಂಡೋ ಟೀಂ ಮೊಕ್ಕಾಂ ಹೂಡಲಿದ್ದಾರೆ. ಈ ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಿದ್ದಾದೆ. ಇದೆಲ್ಲದರ ಜೊತೆಗೆ ಆಕಸ್ಮಿಕ ಬೆಂಕಿ ಅವಘಡಗಳನ್ನು ನಿಭಾಯಿಸಲು ಅಗ್ನಿಶಾಮಕ ವಾಹನ ಸ್ಥಳದಲ್ಲಿ ನಿಯೋಜಿಸಲಾಗಿರುತ್ತದೆ. ಅಲ್ಲದೇ ಆಂಬುಲೆನ್ಸ್ ವ್ಯವಸ್ಥೆ ಹಾಗೂ ವೈದ್ಯಕೀಯ ವ್ಯವಸ್ಥೆಯೂ ಸ್ಥಳದಲ್ಲಿರಲಿದೆ. ಈ ಬಾರಿ ಸಾರ್ವಜನಿಕರಿಗೆ ಯಾವುದೇ ಪ್ರವೇಶ ಇಲ್ಲದಂತಾಗಿದೆ. ಯಾಕಂದ್ರೆ ಈಗಾಗಲೇ ಕೋವಿಡ್ ಪ್ರಕರಣಗಳ ಸಂಖ್ಯೆ ಜಾಸ್ತಿ ಆಗ್ತಾ ಇದ್ದು ಸಾರ್ವಜನಿಕರ ಪ್ರವೇಶದ ಜೊತೆಗೆ ಸಾಂಸ್ಕ್ರತಿಕ ಕಾರ್ಯಕ್ರಮಗಳಿಗೂ ನಿರ್ಬಂಧ ಹೇರಲಾಗಿದ್ದು ಸರಳವಾಗಿ ಆಚರಣೆ ಮಾಡಲು ಬಿಬಿಎಂಪಿ ತೀರ್ಮಾನ ಮಾಡಿದೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಬರಬಾರದು ಹಾಗೂ ಅನಗತ್ಯವಾಗಿ ಗುಂಪುಗೂಡುವುದನ್ನುನಿಯಂತ್ರಿಸುವ ಮೂಲಕ ಅಗತ್ಯ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಬೇಕಿದೆ.
Published by:HR Ramesh
First published: