ಕಾಂಗ್ರೆಸ್​ ಭಯೋತ್ಪಾದಕರ ಪರ ನೀತಿಯನ್ನು ತೋರುತ್ತಿದೆ : ನಳಿನ್​​ ಕುಮಾರ್​ ಕಟೀಲ್​​ ಟೀಕೆ

ಜಿಹಾದಿ ಸಾಹಿತ್ಯದಿಂದ ಅವರನ್ನು ಭಯೋತ್ಪಾದಕರನ್ನಾಗಿ ಮಾಡಿದ ಜನರ ಬಗ್ಗೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್‍ಗೆ ಸಹಾನುಭೂತಿ ಯಾಕೆ  ಎಂದು ಅರ್ಥವಾಗುತ್ತಿಲ್ಲ

ನಳಿನ್ ಕುಮಾರ್ ಕಟೀಲ್.

ನಳಿನ್ ಕುಮಾರ್ ಕಟೀಲ್.

  • Share this:
ಬೆಂಗಳೂರು:  ಭಯೋತ್ಪಾದಕರ ವಿರುದ್ಧ ಸಂಸತ್ತಿನಲ್ಲಿ ಮಸೂದೆಯನ್ನು ತಂದಾಗ, ಕಾಂಗ್ರೆಸ್ ಪಕ್ಷದ ಸಂಸದರು ಸದನದಿಂದ ಹೊರ ನಡೆದಿರುವುದು ದೇಶದ ಸುರಕ್ಷತೆ ವಿಚಾರದಲ್ಲಿ ಆ ಪಕ್ಷಕ್ಕೆ ಇರುವ ನಿಷ್ಕಾಳಜಿಗೆ ಸಾಕ್ಷಿ. ಕಾಂಗ್ರೆಸ್‍ನ ಮುಖವಾಡ ಈ ಮೂಲಕ ಮತ್ತೊಮ್ಮೆ ಕಳಚಿಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷವು ಕೇಂದ್ರದಲ್ಲಿ ಆಡಳಿತದಲ್ಲಿದ್ದಾಗ ಹಿಂದೂಗಳ ವಿರುದ್ಧ ಮಸೂದೆಯನ್ನು ತರುತ್ತಿತ್ತು. ಆದರೆ, ಈಗ ದೇಶವಿರೋಧಿಗಳನ್ನು ಪತ್ತೆ ಹಚ್ಚಲು ಪೂರಕ ಮಸೂದೆ ತಂದಾಗ ಅದನ್ನು ಬೆಂಬಲಿಸದೆ ಸದನದ ಕಲಾಪ ಬಹಿಷ್ಕರಿಸಿರುವುದು ಕಾಂಗ್ರೆಸ್ ಪಕ್ಷದ ಭಯೋತ್ಪಾದಕರ ಪರ ನೀತಿಯನ್ನು ತೋರಿಸುವಂತಿದೆ ಎಂದು ಆರೋಪಿಸಿದರು. 

ಮತದಾನದ ಸಮಯ ಬಂದಾಗ ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್‍ನ ಎಲ್ಲ ಸಂಸದರು ಮಸೂದೆ ಸರಿಯಿಲ್ಲ ಎಂದು ಹೇಳಿ ಸದನವನ್ನು ಬಹಿಷ್ಕರಿಸಿದರು. ಭಯೋತ್ಪಾದಕರಿಗೆ ಆರ್ಥಿಕವಾಗಿ ಸಹಾಯ ಮಾಡಿದ ಮತ್ತು ಜಿಹಾದಿ ಸಾಹಿತ್ಯದಿಂದ ಅವರನ್ನು ಭಯೋತ್ಪಾದಕರನ್ನಾಗಿ ಮಾಡಿದ ಜನರ ಬಗ್ಗೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್‍ಗೆ ಸಹಾನುಭೂತಿ ಯಾಕೆ  ಎಂದು ಅರ್ಥವಾಗುತ್ತಿಲ್ಲ ಎಂದೂ ಅವರು ಪ್ರಶ್ನಿಸಿದ್ದಾರೆ.

ಭಯೋತ್ಪಾದಕರಿಗೆ ಹಣ ನೀಡುವವರನ್ನು ಮತ್ತು ಜಿಹಾದಿ ಸಾಹಿತ್ಯವನ್ನು ಒದಗಿಸಿ ಕೊಡುವವರನ್ನು ಭಯೋತ್ಪಾದಕರೆಂದು ಪರಿಗಣಿಸುವ ಮಸೂದೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ಅಂಗೀಕರಿಸಿದೆ. ಇದಕ್ಕಾಗಿ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರಿಗೆ ಧನ್ಯವಾದ ಸಮರ್ಪಿಸುವುದಾಗಿ ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ನಾನು ಅಕ್ಕಿ ಕೊಟ್ಟೆ.. ಹಾಲು ಕೊಟ್ಟೆ ಆದರೂ ನಮಗೆ ಯಾಕೆ ಈ ಶಾಪ..? ಸಿದ್ದರಾಮಯ್ಯ ಭಾವುಕ ನುಡಿ

ಭಯೋತ್ಪಾದಕರ ದುಷ್ಕೃತ್ಯ  ಗುರುತಿಸಿ, ಶಿಕ್ಷಿಸಿ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತೊಗೆಯಲು ಕಠಿಣ ಕಾನೂನುಗಳನ್ನು ತಂದಿರುವ ಬಿಜೆಪಿ ಸರಕಾರ ಮತ್ತು ಕೇಂದ್ರದ ನಾಯಕರ ಕ್ರಮಕ್ಕೆ ರಾಜ್ಯದ ಜನರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.. ಹೀಗೆ ನಳೀನ್ ಕುಮಾರ್ ಕಟೀಲ್ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ.. ಸಂಸತ್ ನಲ್ಲಿ ಪ್ರತಿಪಕ್ಷ ಹಾಗೂ ಆಡಳಿತ ಪಕ್ಷದ ನಾಯಕರ ನಡುವಿನ ವಾಕ್ಸಮರ ಕೂಡ ಜೋರಾಗಿದೆ.  ಹೀಗಾಗಿ ಪತ್ರಿಕ ಪ್ರಕಟಣೆ ಮೂಲಕ ಕೈ ನಾಯಕರ ವಿರುದ್ಧ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸೋದ್ರ ಮೂಲಕ ಅವರ ನಡೆ ಬಗ್ಗೆ ಟೀಕಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಕೇಂದ್ರದಲ್ಲಿ ಆಡಳಿತದಲ್ಲಿದ್ದಾಗ ಹಿಂದೂಗಳ ವಿರುದ್ಧ ಮಸೂದೆಯನ್ನು ತರುತ್ತಿತ್ತು. ಆದರೆ, ಈಗ ದೇಶವಿರೋಧಿಗಳನ್ನು ಪತ್ತೆ ಹಚ್ಚಲು ಪೂರಕ ಮಸೂದೆ ತಂದಾಗ ಅದನ್ನು ಬೆಂಬಲಿಸದೆ ಸದನದ ಕಲಾಪ ಬಹಿಷ್ಕರಿಸಿರುವುದು ಕಾಂಗ್ರೆಸ್ ಪಕ್ಷದ ಭಯೋತ್ಪಾದಕರ ಪರ ನೀತಿಯನ್ನು ತೋರಿಸುವಂತಿದೆ ಎಂದು ಅವರು ಟೀಕೆ ಮಾಡಿದ್ದಾರೆ. ಒಟ್ಟಾರೆ ಕಾಂಗ್ರೆಸ್ ನ ಹೋರಾಟ ಸದನದಲ್ಲಿ ಜೋರಾಗಿದ್ದು ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ನಡೆಗೆ ಖಂಡಿಸಿದ್ದಾರೆ. ಇದರ‌ ಜೊತೆಗೆ ಕಟೀಲ್ ತಮ್ಮ ಆಕ್ರೋಶ ವನ್ನು ವ್ಯಕ್ತಪಡಿಸಿದ್ದಾರೆ.
Published by:Kavya V
First published: