Mysore Road to Kengeri Metro : ಬಹು ದಿನಗಳ ಕನಸು ನನಸು- ಮೈಸೂರು ರಸ್ತೆಯಿಂದ ಕೆಂಗೇರಿಗೆ ಇಂದಿನಿಂದ ಮೆಟ್ರೊ ಸಂಚಾರ ಶುರು

Metro Route Inaugurated :  ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿವರೆಗಿನ ಒಟ್ಟು 7.5 ಕಿ.ಮಿ. ಉದ್ದದ 6 ನಿಲ್ದಾಣಗಳಿರುವ ಮಾರ್ಗವನ್ನು ಇಂದು ಉದ್ಘಾಟನೆ ಮಾಡಲಾಗಿದೆ.

ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡಿದ ಗಣ್ಯರು

ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡಿದ ಗಣ್ಯರು

  • Share this:
Namma Metro: ರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸೇವೆ‌‌ ಪ್ರಯಾಣಿಕರಿಗೆ ಬಹಳ ಅನುಕೂಲಕರ ವ್ಯವಸ್ಥೆ.  ಈಗಾಗಲೆ ಹಲವು ಕಡೆ ಮೆಟ್ರೊ ಸೇವೆ ಇದೆ, ಆದರೆ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿಗೆ  ಮೆಟ್ರೊ ನಿರ್ಮಾನ ಕಾರ್ಯ ನಡೆಯುತ್ತಿತ್ತು. ಇಂದು ಬೆಂಗಳೂರಿಗರ ಕನಸು ನನಸಾಗುತ್ತಿದೆ. ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿವರೆಗಿನ ಒಟ್ಟು 7.5 ಕಿ.ಮಿ. ಉದ್ದದ 6  ನಿಲ್ದಾಣಗಳಿರುವ ಮಾರ್ಗವನ್ನು ಇಂದು ಉದ್ಘಾಟನೆ ಮಾಡಲಾಗಿದೆ. ಈ ಮೆಟ್ರೋ ಸಂಚಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹಸಿರು ನಿಶಾನೆ ತೋರಿಸುವ ಮೂಲಕ ಮೆಟ್ರೋ ಮಾರ್ಗ ಉದ್ಘಾಟನೆ ಮಾಡಿದ್ದಾರೆ. ಇನ್ನು ಮೊದಲ ರೈಲು ಸಂಚಾರ ಆರಂಭವಾಗಿದ್ದು, ಲೇಡಿ ಲೋಕೊ ಪೈಲೆಟ್ ಮೊದಲ ಸಂಚಾರ ಆರಂಭಿಸಿದ್ದಾರೆ. 

2019 ರಲ್ಲೇ ಈ ಮಾರ್ಗದ ಉದ್ಘಾಟನೆಯಾಗಬೇಕಿತ್ತು. ಆದರೆ ಕಾಮಗಾರಿ ವಿಳಂಬವಾದ ಹಿನ್ನೆಲೆಯಲ್ಲಿ 2 ವರ್ಷ ತಡವಾಗಿ ಈ ಮಾರ್ಗ ಸಂಚಾರಕ್ಕೆ ಮುಕ್ತವಾಗಿದೆ. 1,560 ಕೋಟಿ ರೂ. ವೆಚ್ಚದಲ್ಲಿ ಈ ರೈಲು ಮಾರ್ಗ ನಿರ್ಮಾಣಗೊಂಡಿದ್ದು, ಭೂ ಸ್ವಾದೀನಕ್ಕಾಗಿ 360 ಕೋಟಿ ರೂ. ವೆಚ್ಚ ಮಾಡಲಾಗಿದೆ. ಈ ಮಾರ್ಗದಲ್ಲಿ ಮೆಟ್ರೋ ಸೇವೆ ಆರಂಭವಾದರೆ ದಿನಕ್ಕೆ 75 ಸಾವಿರ ಪ್ರಯಾಣಿಕರು ಸಂಚರಿಸುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ. ಇನ್ನು ನಮ್ಮ ಮೆಟ್ರೋ ಯೋಜನೆಯ ಹಂತ-2 ಅಡಿ ನಾಯಂಡಹಳ್ಳಿಯಿಂದ ಕೆಂಗೇರಿಯವರೆಗೆ ರೀಚ್ 2ರ ವಿಸ್ತರಣಾ ಕಾಮಗಾರಿ ಯೋಜನೆ ಇದಾಗಿದೆ.

ಇದು ನೇರಳೆ ಮಾರ್ಗವಾಗಿದ್ದು, ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಜ್ಞಾನ ಭಾರತಿ, ಪಟ್ಟಣಗೆರೆ, ಮೈಲಸಂದ್ರ ಮತ್ತು ಕೆಂಗೇರಿ ಬಸ್ ನಿಲ್ದಾಣ ಸೇರಿದಂತೆ ಒಟ್ಟು ಆರು ಮೆಟ್ರೋ ನಿಲ್ದಾಣಗಳು ಈ ಮೆಟ್ರೊ ಅಡಿಯಲ್ಲಿ ಬರಲಿದೆ.  ಅಲ್ಲದೇ ನೇರಳೆ ಮಾರ್ಗ ಬೈಯಪ್ಪನಹಳ್ಳಿ-ಕೆಂಗೇರಿವರೆಗೆ ಮೆಟ್ರೋ ಸಂಚಾರ ಇರಲಿದ್ದು, ಬೈಯಪ್ಪನ ಹಳ್ಳಿಯಿಂದ ಕೆಂಗೇರಿಗೆ ಪ್ರಯಾಣಿಸಲು 56 ರೂ. ದರ ನಿಗದಿ ಮಾಡಲಾಗಿದೆ.ಕೆಂಗೇರಿಯಿಂದ ಸಿಲ್ಕ್ ಇನ್ಸ್​ಟಿಟ್ಯೂಟ್​ವರೆಗೆ 60 ರೂಪಾಯಿ ದರ ನಿಗದಿಯಾಗಿದೆ. ಹಾಗೂ ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆಗೆ 45 ರೂಪಾಯಿ ಟಿಕೆಟ್ ದರ ನಿರ್ಧರಿಸಲಾಗಿದೆ.

ಈ ಮಾರ್ಗದ ದರಪಟ್ಟಿ ಹೀಗಿದೆ..

ಮೆಜೆಸ್ಟಿಕ್ ಟು ಕೆಂಗೇರಿ – 38 ರೂ.

ಮೈಸೂರು ರಸ್ತೆ ಟು ಕೆಂಗೇರಿ – 22 ರೂ‌

ನಾಯಂಡಹಳ್ಳಿ ಟು ಕೆಂಗೇರಿ – 20 ರೂ.

ಮೈಸೂರು ರಸ್ತೆ ಟು ನಾಯಂಡಹಳ್ಳಿ – 10 ರೂ.

ಮೈಸೂರು ರಸ್ತೆ ಟು ರಾಜರಾಜೇಶ್ವರಿ ನಗರ – 15 ರೂ.

ಮೈಸೂರು ರಸ್ತೆ ಟು ಜ್ಞಾನಭಾರತಿ – 15 ರೂ.

ಮೈಸೂರು ರಸ್ತೆ ಟು ಪಟ್ಟಣಗೆರೆ – 18 ರೂ.

ಮೈಸೂರು ರಸ್ತೆ ಟು ಕೆಂಗೇರಿ ಟರ್ಮಿನಲ್ – 20 ರೂ.

ಮೈಸೂರು ರಸ್ತೆ ಟು ಕೆಂಗೇರಿ 22 ರೂ

ಇದನ್ನೂ ಓದಿ: ಐವರು ಆರೋಪಿಗಳು 10 ದಿನ ಪೊಲೀಸ್ ಕಸ್ಟಡಿಗೆ; ಅಜ್ಞಾತ ಸ್ಥಳದಲ್ಲಿ ವಿಚಾರಣೆ

ರೈಲು ಸಂಚರಿಸುವ ನಾಯಂಡಹಳ್ಳಿ, ರಾಜರಾಜೇಶ್ವರಿನಗರ, ಜ್ಞಾನಭಾರತಿ ನಿಲ್ದಾಣಗಳಲ್ಲಿ ಪಾರ್ಕಿಂಗ್  ವ್ಯವಸ್ಥೆ ಮಾಡಲಾಗಿದೆ. ಕೆಂಗೇರಿ ಬಸ್ ಟರ್ಮಿನಲ್ ನಿಲ್ದಾಣದಲ್ಲಿ ಎರಡು ಅಂತಸ್ತಿನ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ.‌ ಕೆಂಗೇರಿ ಬಸ್ ಟರ್ಮಿನಲ್ ನಿಲ್ದಾಣವನ್ನು ಬಿಟ್ಟು ಉಳಿದ ಎಲ್ಲಾ ನಿಲ್ದಾಣಗಳನ್ನು ರಸ್ತೆದಾಟಲು ಪಾದಚಾರಿ ಮಾರ್ಗ ಕಲ್ಪಿಸಲಾಗಿದೆ.

ಸೋಮವಾರದಿಂದ ರೈಲು ಮಾರ್ಗ  ಸಂಚಾರಕ್ಕೆ ಮುಕ್ತವಾಗಲಿದೆ. ಜನರು ಹೆಚ್ಚು ಓಡಾಡುವ ಸಮಯದಲ್ಲಿ  7 ರಿಂದ 8 ನಿಮಿಷಕ್ಕೆ ಒಂದು ರೈಲು ಓಡಾಡಲಿದ್ದು, , ಉಳಿದ ಅವಧಿಯಲ್ಲಿ 10 ರಿಂದ 12 ನಿಮಿಷಕ್ಕೊಂದು ರೈಲು ಕೆಂಗೇರಿ ಮತ್ತು ಬೈಯಪ್ಪನಹಳ್ಳಿ ನಡುವೆ ಸಂಚಾರ ಮಾಡಲಿವೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.

 
Published by:Sandhya M
First published: