ಬೆಂಗಳೂರು (ಆ. 23): ಬಹು ನಿರೀಕ್ಷಿತ ನಾಯಂಡಹಳ್ಳಿಯಿಂದ ಕೆಂಗೇರಿ ಮೆಟ್ರೋ (nayandahalli to kengeri metro route) ಮಾರ್ಗ ಸಂಚಾರ ಇದೇ ಆಗಸ್ಟ್ 29ರಿಂದ ಆರಂಭವಾಗಿದೆ. ಆಗಸ್ಟ್ 29ರಂದು ಬೆಳಗ್ಗೆ 11 ಗಂಟೆಗೆ ಈ ಮೆಟ್ರೋ ರೈಲು ಮಾರ್ಗವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja bommai) ಅವರು ಉದ್ಘಾಟಿಲಿದ್ದಾರೆ. ಜೊತೆಗೆ ಕೇಂದ್ರ ನಗರಾಭಿವೃದ್ಧಿ ಸಚಿ ಹರ್ದೀಪ್ ಸಿಂಗ್ ಪುರಿ (hardeep singh puri) ಈ ಯೋಜನೆಗೆ ಹಸಿರು ನಿಶಾನೆ ತೋರಲಿದ್ದಾರೆ. ಉದ್ಘಾಟನೆ ಬಳಿಕ ಅದೇ ರೈಲಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅದೇ ನಾಯಂಡಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲಿದ್ದಾರೆ. ಮೈಸೂರು ರಸ್ತೆಯ ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ 7. 50 ಕಿ.ಮೀ ಮೆಟ್ರೋ ಮಾರ್ಗ ಸುಗಮ ಸಂಚಾರಕ್ಕೆ ಲಭ್ಯವಾಗಲಿದ್ದು, ಇದರಿಂದ ಟ್ರಾಫಿಕ್ ದಟ್ಟಣೆ ಕಡಿಮೆಯಾಗಲಿದೆ.
ಕಳೆದ ವಾರವಷ್ಟೇ ಈ ಮೆಟ್ರೋ ಮಾರ್ಗದಲ್ಲಿ ಸುರಕ್ಷತಾ ಆಯುಕ್ತರು ಪರಿಶೀಲನೆ ನಡೆಸಿದ್ದರು. ವಯಾಡಕ್ಟ್, ಸ್ಟೇಷನ್ ವರ್ಕ್ಸ್, ಪವರ್ ಸಪ್ಲೇ, ಸಿಸ್ಟಮ್ ವರ್ಕ್, ಟ್ರ್ಯಾಕ್ ಲೈನಿನ್ ವರ್ಕ್, ಎಂಟ್ರಿ ಎಕ್ಸಿಟ್ ಸೇಫ್ಟಿ ಸೇರಿ ಎಲ್ಲಾ ವಿಧವಾದ ಪ್ಯಾಸೆಂಜರ್ ಸುರಕ್ಷತೆ ಬಗ್ಗೆ ಆಯುಕ್ತರು ಪರಿಶೀಲನೆ ನಡೆಸಿದ ಬಳಿಕ ಈಗ ಇದರ ಚಾಲನೆಗೆ ಹಸಿರು ನಿಶಾನೆ ತೋರಲಾಗಿದೆ.
ಈ ನೇರಳೆ ಬಣ್ಣದ (Metro purple line) ವಿಸ್ತರಿತ ಮೆಟ್ರೋ ಮಾರ್ಗವು ನಾಯಂಡಹಳ್ಳಿಯಿಂದ ರಾಜರಾಜೇಶ್ವರಿ ನಗರ (RR Nagar), ಬೆಂಗಳೂರು ವಿಶ್ವವಿದ್ಯಾಲಯ (Bangalore university), ಆರ್ ವಿ ಕಾಲೇಜ್ (RV College), ಮೈಲಸಂದ್ರ (mylasandra), ಕೆಂಗೇರಿ ಬಸ್ ಡಿಪೋ ಮತ್ತು ಕೆಂಗೇರಿ ಟರ್ಮಿನಲ್ (kengeri) ಒಳಗೊಂಡಿದೆ, ಈ ನೂತನ ನೇರಳೆ ಮಾರ್ಗದ ಆರಂಭದಿಂದಾಗಿ ಈ ಪ್ರದೇಶದ ಜನರ ಬಹು ದಿನದ ಕನಸು ನನಸಾಗಿದೆ. ಹೊಸ ಮಾರ್ಗದಲ್ಲಿ ಒಟ್ಟು 70 ಸಾವಿರಕ್ಕೂ ಹೆಚ್ಚುವರಿ ಪ್ರಯಾಣಿಕರು ಪ್ರಯಾಣಿಸೋ ನಿರೀಕ್ಷೆಯನ್ನ ಬಿಎಂಆರ್ಸಿಎಲ್ ಇಟ್ಟುಕೊಂಡಿದೆ.
ಇದನ್ನು ಓದಿ: ಇನ್ನು ಹತ್ತು ದಿನ ನೋಡಿ ಉಳಿದ ತರಗತಿ ಆರಂಭಿಸಲಾಗುವುದು; ಸಿಎಂ ಬೊಮ್ಮಾಯಿ
ಟ್ರಾಫಿಕ್ ದಟ್ಟಣೆ ಕಡಿಮೆಯಾಗುವ ಸಾಧ್ಯತೆ
ಮೈಸೂರು ರಸ್ತೆಯ ಈ ಮಾರ್ಗದಲ್ಲಿ ಉಂಟಾಗುವ ಅತಿ ಹೆಚ್ಚು ಟ್ರಾಫಿಕ್ ದಟ್ಟಣೆಯಿಂದ ಜನರು ಪ್ರತಿನಿತ್ಯ ಹೈರಾಣುಗುತ್ತಿದ್ದಾರೆ. ಪ್ರತಿನಿತ್ಯ ಕಚೇರಿಗೆ ಓಡಾಡುವವರು ಇದರಿಂದ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದರು. ಈಗ ಈ ಮೆಟ್ರೋ ಮಾರ್ಗದ ಮೂಲಕ ಈ ಭಾಗದ ಜನರು ಲಭ ಸಂಚಾರ ಮಾಡಬಹುದಾಗಿದ್ದು, ಟ್ರಾಫಿಕ್ ದಟ್ಟಣೆ ಕೂಡ ಕಡಿಮೆಯಾಗಲಿದೆ.
ಈ ವಿಸ್ತರಿತ ಮಾರ್ಗವು 2019ರ ಕೊನೆಯ ವೇಳೆಗೆ ಮುಕ್ತಾಯವಾಗಲಿದೆ ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ, ಕೊರೋನಾ ಸೇರಿ ಹಲವು ಕಾರಣಗಳಿಂದ ಇದು ವಿಳಂಬವಾಗಿತು. ಗುತ್ತಿಗೆದಾರರ ಬದಲಾವಣೆ, ಭೂಸ್ವಾಧೀನದಲ್ಲಾದ ವಿಳಂಬ ಮತ್ತು ನಂತರ ಕೊರೊನಾ ಸೋಂಕಿನ ಕಾರಣದಿಂದ ಈ ಮಾರ್ಗ ನಿರ್ಮಾಣ ನೆನೆಗುದಿಗೆ ಬಿದ್ದಿತ್ತು. ಆದರೆ ಇದೆಲ್ಲದಕ್ಕೂ ಈಗ ಕೊನೆ ಎಂಬಂತೆ ಈಗ ಕಾಮಗಾರಿ ಪೂರ್ಣ ಗೊಂಡಿದ್ದು ಸಾರ್ವಜನಿಕರ ಸೇವೆಗೆ ಲಭ್ಯವಾಗುತ್ತಿದೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
ನಿಮ್ಮ ಜಿಲ್ಲೆಯಿಂದ (ಬೆಂಗಳೂರು ನಗರ)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ