Bangalore Night Curfew: ಬೆಂಗಳೂರಲ್ಲಿ ನೈಟ್​​ಕರ್ಫ್ಯೂ ಆ.30ರವರೆಗೆ ವಿಸ್ತರಣೆ: ಯಾವುದಕ್ಕೆಲ್ಲಾ ಅನುಮತಿ?

Night Curfew extended till august 30: ಈ ತಿಂಗಳ ಅಂತ್ಯದವರೆಗೆ ನಗರದಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ರವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸದ್ಯ ಜಾರಿಯಲ್ಲಿರುವ ನೈಟ್​​ ಕರ್ಫ್ಯೂವನ್ನು ಆಗಸ್ಟ್ 30 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಈ ತಿಂಗಳ ಅಂತ್ಯದವರೆಗೆ ನಗರದಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ರವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದೆ. ನೈಟ್​​ ಕರ್ಫ್ಯೂ ವಿಸ್ತರಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

    ಆದರೆ ಏರ್​​ಪೋರ್ಟ್​​ ಸಂಚಾರ, ಅಗತ್ಯ- ಮೂಲಭೂತ ಸೌಕರ್ಯಗಳ ಸರಬರಾಜಿಗೆ ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ಕೊರೊನಾ 3ನೇ ಅಲೆ ಭೀತಿ ಇರುವುದರಿಂದ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ರಾತ್ರಿ ವೇಳೆ ಅನಗತ್ಯವಾಗಿ ರಸ್ತೆಗಿಳಿಯುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಕಮಿಷನರ್​ ಎಚ್ಚರಿಸಿದ್ದಾರೆ.

    ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿರಲಿದ್ದು, ಅಗತ್ಯ ವಸ್ತುಗಳ ಸರಬರಾಜು, ಏರ್​ಪೋರ್ಟ್​ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಇನ್ನು ಇಂದು ರಾಜ್ಯದಲ್ಲಿ  1,298 ಕೊರೊನಾ ಪಾಸಿಟಿವ್​ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿನಿಂದ ರಾಜ್ಯಾದ್ಯಂತ 32 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 1,833 ಸೋಂಕಿನಿಂದ ಗುಣಮುಖರಾಗಿದ್ದಾರೆ.

    ಇತ್ತ ರಾಜಧಾನಿ ಬೆಂಗಳೂರಲ್ಲಿ ಒಂದೇ ದಿನ 340 ಮಂದಿ ಕೊರೊನಾ ರಿಪೋರ್ಟ್​ ಪಾಸಿಟಿವ್​ ಬಂದಿದೆ. 10 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇಂದು ಪಾಸಿಟಿವಿಟ್ 1.1 % ಹಾಗೂ ಸಾವಿನ ಪ್ರಮಾಣ 2.46 % ರಷ್ಟಿದೆ.

    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
    Published by:Kavya V
    First published: