ಬೆಂಗಳೂರು (ಜು. 6): ಪೆಟ್ರೋಲ್, ಡಿಸೇಲ್ ಬೆಳೆ ಏರಿಕೆ ಖಂಡಿಸಿ ನಾಳೆ ಕಾಂಗ್ರೆಸ್ (Congress protest) ಪಕ್ಷ ರಾಜ್ಯದ್ಯಾಂತ ಸೈಕಲ್ ಜಾಥಾ(Cycle jatha) ನಡೆಸುವ ಮೂಲಕ ಪ್ರತಿಭಟನೆ ಮಾಡಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಕೊರೋನಾ ಆತಂಕದ ನಡುವೆ ಪೆಟ್ರೋಲ್ ಬೆಲೆ ಏರಿಕೆ(fule price)ಯಿಂದ ಜನರು ಕಂಗೆಟ್ಟಿದ್ದಾರೆ. ದಿನನಿತ್ಯ ಪೆಟ್ರೋಲ್ ದರ ಏರುತ್ತಲೇ ಇದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದೆ. ಜನಸಾಮಾನ್ಯರು ತೊಂದರೆಯಲ್ಲಿದ್ದಾರೆ. ಸರ್ಕಾರದಿಂದ ಯಾವುದೇ ಸಹಾಯವಿಲ್ಲ. ಹೀಗಾಗಿ ನಾಳೆ ಈ ಜಾಥಾ ಹಮ್ಮಿಕೊಂಡಿದ್ದೇವೆ. ನಾಳೆ ರಾಜ್ಯಾದ್ಯಂತ 32 ವಿಧಾನಸಭಾ ಕ್ಷೇತ್ರಗಳಲ್ಲಿ ಸೈಕಲ್ ಜಾಥಾ ನಡೆಸಲಾಗುವುದು. ಬೆಂಗಳೂರಿನ ಬಿಬಿಎಂಪಿಯ 28 ಕ್ಷೇತ್ರ, ಗ್ರಾಮಾಂತರದ ನಾಲ್ಕು ಕ್ಷೇತ್ರಗಳಲ್ಲೂ ಕೂಡ ಜಾಥಾ ನಡೆಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಕೊರೋನಾ ದಿಂದ ಈಗಾಗಲೇ ಜನರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಪೆಟ್ರೋಲ್ ಬೆಲೆ ಏರಿಕೆಯಿಂದ ಅಗತ್ಯವಸ್ತುಗಳ ಬೆಲೆ ಕೂಡ ಗಗನಮುಖಿಯಾಗಿದೆ. ಈ ನಡುವೆ ಅಡುಗೆ ಅನಿಲದ ದರವನ್ನು ಕೂಡ ಸರ್ಕಾರ ನಿರಂತರವಾಗಿ ಹೆಚ್ಚು ಮಾಡುತ್ತಿದ್ದು, ಮಧ್ಯಮ ವರ್ಗದ ಮತ್ತು ಬಡ ಜನರು ಕಂಗೆಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕೊರೋನಾ ಸಂಕಷ್ಟದ ಕಾಲದಲ್ಲಿ ಇನ ಡ್ರೈವರ್, ರೈತರಿಗೆ ಕೂಲಿ ಕಾರ್ಮಿಕರಿಗೆ ಪರಿಹಾರ ಅಂತಿದ್ದಾರೆ. ಆದರೆ, ಯಾರಿಗೂ ಕೂಡ ಪರಿಹಾರ ತಲುಪಿಸಿಲ್ಲ. ಕೇವಲ ಕಣ್ಣೊರಿಸುವ ತಂತ್ರ ಸರ್ಕಾರ ಮಾಡಿದೆ. ಕಾರ್ಮಿಕರು ಎಷ್ಟಿದ್ದಾರೆ ಅಂತ ಯಾರಿಗೂ ಗೊತ್ತಿಲ್ಲ. ಯಾರಿಗೆ ಪರಿಹಾರ ಕೊಟ್ಟರು ಅಂತ ಗೊತ್ತಿಲ್ಲ. ಪರಿಹಾರ ಹಣ ಕಡಿಮೆಯಿದೆ. ಬೇರೆ ರಾಜ್ಯಗಳನ್ನು ನೋಡಿ ಸಿಎಂ ಕಲಿಯಬೇಕಿತ್ತು. ನೆರೆಯ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶದ ಸರ್ಕಾರ ನೋಡಬೇಕು. ಅವರು ಕೊಟ್ಟ ಪರಿಹಾರದ ಬಗ್ಗೆ ತಿಳಿದುಕೊಳ್ಳಬೇಕು ಎಂದು ಇದೇ ವೇಳೆ ಟೀಕಿಸಿದ್ದು, ಪರಿಹಾರ ಹೆಚ್ಚು ಮಾಡುವಂತೆ ಒತ್ತಾಯಿಸಿದರು.
ಇದನ್ನು ಓದಿ: ಸಿದ್ದರಾಮಯ್ಯ ಬಾದಾಮಿಯ ಇಮ್ಮಡಿ ಪುಲಿಕೇಶಿ: ಸಿದ್ದು ಮನೆ ಮುಂದೆ ಹುಲಿಯಾ ಅಭಿಮಾನಿಗಳ ದಂಡು
ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿರಂತರವಾಗಿ ಪ್ರತಿಭಟನೆ ನಡೆಸುತ್ತಲೇ ಇದೆ. ಕಳೆದೊಂದು ವಾರದ ಹಿಂದೆ ಕೂಡ ರಾಜಧಾನಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಸಿ ಪ್ರತಿಭಟನೆ ನಡೆಸಲಾಗಿತ್ತು. ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ನೂರಾರು ಕಾರ್ಯಕರ್ತರು ಹಾಗೂ ಮುಖಂಡರು ಸೈಕಲ್, ಜಟಕಾ ಗಾಡಿ ಇನ್ನಿತರ ವಾಹನಗಳಲ್ಲಿ ಆಗಮಿಸಿ ಬೆಂಗಳೂರಿನ ಇಂಡಿಯನ್ ಎಕ್ಸ್ ಪ್ರೆಸ್ ಸಮೀಪ ಇರುವ ಆದಾಯ ತೆರಿಗೆ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು.
ಪೆಟ್ರೋಲ್ ದರ ಏರಿಕೆ ಖಂಡಿಸಿ 100 ನಾಟೌಟ್ ಕ್ಯಾಂಪೇನ್ ಕೂಡ ನಡೆಸಿತ್ತು ಜೂ. 11ರಿಂದ 15 ರವರೆಗೆ ರಾಜ್ಯದ ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರ ಹೋಬಳಿ ಮಟ್ಟ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರತಿಭಟನೆಯನ್ನು ನಡೆಸಿತ್ತು.
ಈಗ ಮತ್ತೆ ರಾಜ್ಯದೆಲ್ಲೆಡೆ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ನಾಳೆ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸಜ್ಜಾಗಿದ್ದಾರೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
ನಿಮ್ಮ ಜಿಲ್ಲೆಯಿಂದ (ಬೆಂಗಳೂರು ನಗರ)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ