Petrol Price Today: ಕರ್ನಾಟಕದಲ್ಲೂ ಹೊಸ ದಾಖಲೆ ಬರೆದ ಪೆಟ್ರೋಲ್ ಬೆಲೆ; ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್​ಗೆ 101 ರೂ.!

Bengaluru Petrol and Diesel Price: ಇಂದು ಒಂದು ಲೀಟರ್ ಪೆಟ್ರೋಲ್​ಗೆ 23ರಿಂದ 26 ಪೈಸೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲೂ 1 ಲೀಟರ್ ಪೆಟ್ರೋಲ್​ಗೆ 101 ರೂ. ಆಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    Fuel Price Today: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಏರಿಕೆಯಿಂದ ಈಗಾಗಲೇ ವಾಹನ ಸವಾರರು ಕಂಗೆಟ್ಟಿದ್ದಾರೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಕರ್ನಾಟಕ ಮಾತ್ರವಲ್ಲದೆ ರಾಜಸ್ಥಾನ, ಮಹಾರಾಷ್ಟ್ರ, ಹೈದರಾಬಾದ್​ನಲ್ಲಿ ಪೆಟ್ರೋಲ್ ಬೆಲೆ 1 ಲೀಟರ್ಗೆ 101 ರೂ. ದಾಟಿದೆ. ಈ ಮೂಲಕ ಭಾರತದ ಇತಿಹಾಸದಲ್ಲೇ ಪೆಟ್ರೋಲ್ ಬೆಲೆ ದಾಖಲೆ ಬರೆದಿದೆ. ಬೆಂಗಳೂರಿನಲ್ಲೂ 1 ಲೀಟರ್ ಪೆಟ್ರೋಲ್​ಗೆ 101 ರೂ. ಆಗಿದೆ. ನಿನ್ನೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೇರಿಕೆಗೆ ಬ್ರೇಕ್ ಬಿದ್ದಿತ್ತು. ಆದರೆ, ಇಂದು ಮತ್ತೆ ಇಂಧನದ ಬೆಲೆ ಹೆಚ್ಚಳವಾಗಿದೆ. ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯೆಷ್ಟು? ಇಲ್ಲಿದೆ ಮಾಹಿತಿ...

    ನಿನ್ನೆ ಯಥಾಸ್ಥಿತಿ ಕಾಯ್ದುಕೊಂಡಿದ್ದ ಪೆಟ್ರೋಲ್ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಇಂದು ಒಂದು ಲೀಟರ್ ಪೆಟ್ರೋಲ್​ಗೆ 23ರಿಂದ 26 ಪೈಸೆ ಹೆಚ್ಚಳವಾಗಿದೆ. ಡೀಸೆಲ್ ಬೆಲೆ 6ರಿಂದ 7 ಪೈಸೆ ಏರಿಕೆಯಾಗಿದೆ. ಈ ಮೂಲಕ ಪೆಟ್ರೋಲ್- ಡೀಸೆಲ್ ಬೆಲೆಯೇರಿಕೆ ಮತ್ತೆ ಮುಂದುವರೆದಿದೆ.

    ಕರ್ನಾಟಕದ ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಬೀದರ್, ಚಾಮರಾಜನಗರ, ಹಾವೇರಿ, ಬೆಂಗಳೂರು ಗ್ರಾಮಾಂತರ, ಧಾರವಾಡ, ಗುಲ್ಬರ್ಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ, ಹಾಸನ, ಹಾವೇರಿ, ಕೊಡಗು, ರಾಯಚೂರು, ರಾಮನಗರ, ದಾವಣಗೆರೆ, ತುಮಕೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರಿನಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ.

    ಇದನ್ನೂ ಓದಿ: Gold Price Today: ಬೆಂಗಳೂರು ಸೇರಿ ಹಲವೆಡೆ ಬೆಳ್ಳಿ ಬೆಲೆ ಏರಿಕೆ; ಚಿನ್ನ ಖರೀದಿಗೆ ಇದೇ ಸರಿಯಾದ ಟೈಂ!

    ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಪೆಟ್ರೋಲ್ ಬೆಲೆ 1 ಲೀಟರ್ ಗೆ 108.46 ರೂ. ಆಗುವ ಮೂಲಕ ಇಡೀ ದೇಶದಲ್ಲೇ ದುಬಾರಿ ನಗರ ಎನಿಸಿಕೊಂಡಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.76 ರೂ. ಇದೆ. ಕೊಲ್ಕತ್ತಾದಲ್ಲಿ 97.63 ರೂ., ಮುಂಬೈನಲ್ಲಿ 103.89 ರೂ., ಚೆನ್ನೈನಲ್ಲಿ 98.88 ರೂ., ನೋಯ್ಡಾದಲ್ಲಿ 94.92 ರೂ., ಬೆಂಗಳೂರಿನಲ್ಲಿ 101.03 ರೂ., ಭುವನೇಶ್ವರದಲ್ಲಿ 98.85 ರೂ., ಹೈದರಾಬಾದ್ನಲ್ಲಿ 101.60 ರೂ., ಜೈಪುರದಲ್ಲಿ 104.20 ರೂ., ಲಕ್ನೋದಲ್ಲಿ 94.70 ರೂ., ಪಾಟ್ನಾದಲ್ಲಿ 99.86 ರೂ., ತಿರುವನಂತಪುರದಲ್ಲಿ 99.62 ರೂ. ಇದೆ.

    ಭಾರತದ ಕೆಲವು ನಗರಗಳಲ್ಲಿ ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಈಗಾಗಲೇ ಡೀಸೆಲ್ ಬೆಲೆ ಶತಕ ಬಾರಿಸಿದೆ. ಬೆಂಗಳೂರು, ಮುಂಬೈ, ಹೈದರಾಬಾದ್, ಜೈಪುರ, ಭುವನೇಶ್ವರ, ಚೆನ್ನೈ ಸೇರಿ ವಿವಿಧ ನಗರಗಳಲ್ಲಿ ಇಂದಿನ ಡೀಸೆಲ್ ಬೆಲೆ ಹೀಗಿದೆ. ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಇಂದು ಡೀಸೆಲ್ ಬೆಲೆ 101.40 ರೂ. ಆಗಿದೆ. ನವದೆಹಲಿಯಲ್ಲಿ ಇಂದು 1 ಲೀಟರ್ ಡೀಸೆಲ್ ಬೆಲೆ 88.30 ರೂ. ಇದೆ. ಚೆನ್ನೈನಲ್ಲಿ 92.89 ರೂ, ಮುಂಬೈನಲ್ಲಿ 95.79 ರೂ, ಬೆಂಗಳೂರಿನಲ್ಲಿ 93.61 ರೂ, ಹೈದರಾಬಾದ್ನಲ್ಲಿ 96.25 ರೂ. ಇದೆ.

    ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 1 ವರ್ಷದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರದ ಮುಂಬೈ, ರಾಜಸ್ಥಾನದ ಜೈಪುರ, ಮಧ್ಯಪ್ರದೇಶ, ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ. ಈ ಸಂಖ್ಯೆ ಹೆಚ್ಚುತ್ತಲೇ ಇದೆ.

    ಇದನ್ನೂ ಓದಿ: Karnataka Congress: ನಾನಾ? ನೀನಾ? ಎನ್ನುತ್ತಿದೆ ಸಿದ್ದರಾಮಯ್ಯ- ಡಿಕೆ ಶಿವಕುಮಾರ್ ಬಣ; ಕಾಂಗ್ರೆಸ್ ಹೈಕಮಾಂಡ್ ಹೈರಾಣ!

    ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.

    ಕೊರೋನಾ ಮಹಾಮಾರಿಯಿಂದ ಜನ ಸಾಯುತ್ತಿದ್ದಾರೆ. ಲಾಕ್​ಡೌನ್​ನಿಂದ ಕೋಟ್ಯಾಂತರ ಜನಕ್ಕೆ ನಿತ್ಯದ ಜೀವನ ನಿರ್ವಹಣೆಯೇ ದುಸ್ತರವಾಗಿದೆ. ದೇಶದ ಆರ್ಥಿಕ ಚಟುವಟಿಕೆಗೆ ಪಾರ್ಶ್ವವಾಯು ಬಡಿದಿದೆ. ಆದರೂ ಪೆಟ್ರೋಲ್ ಬೆಲೆ ಮಾತ್ರ ಕಡಿಮೆಯಾಗಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾದರೆ ಸಹಜವಾಗಿ ನಿತ್ಯ ಬಳಕೆಯ ಬೇರೆಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗುತ್ತದೆ. ಇದರಿಂದ ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾದಂತಾಗಿದೆ.

    ಭಾರತದಲ್ಲಿ ಕೊರೋನಾ ವೈರಸ್ ಅಬ್ಬರದಿಂದ ಕಳೆದೊಂದು ವರ್ಷದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದ ಭಾರತದ ಆರ್ಥಿಕತೆಯ ಮೇಲೂ ಪರಿಣಾಮ ಬೀರಿದೆ. ಆದಾಯವನ್ನು ಸರಿದೂಗಿಸಲು ಪೆಟ್ರೋಲ್- ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗುತ್ತಿದೆ. ಹಾಗೇ, ಇಂಧನದ ಆಮದಿನ ಪ್ರಮಾಣವೂ ಇಳಿಕೆಯಾಗಿದೆ. ಪೆಟ್ರೋಲ್- ಡೀಸೆಲ್ ಬೆಲೆಯ ಹೆಚ್ಚಳ ಎಲ್ಲದರ ಮೇಲೂ ಪರಿಣಾಮ ಬೀರಿದೆ. ಈಗಾಗಲೇ ಕಾರು, ಬೈಕ್ ಸೇರಿದಂತೆ ಬಹುತೇಕ ಎಲ್ಲ ವಾಹನಗಳ ಬೆಲೆಯೂ ಹೆಚ್ಚಳವಾಗಿದೆ.
    Published by:Sushma Chakre
    First published: