CFI Protest- ಶಿಕ್ಷಣ ನೀತಿ ವಿರೋಧಿಸಿ ಬೆಂಗಳೂರಲ್ಲಿ ಸಿಎಫ್ಐ ಪ್ರತಿಭಟನೆ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್

Opposition to NEP- ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಖಾಸಗೀಕರಣ ಮತ್ತು ಕೇಸರೀಕರಣ ಮಾಡುವ ಹುನ್ನಾರ ಇದೆ ಎಂದು ಆಕ್ಷೇಪಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆ ಬೆಂಗಳೂರಲ್ಲಿ ಪ್ರತಿಭಟನೆ ನಡೆಸಿತು.

ಸಿಎಫ್​ಐ ವಿದ್ಯಾರ್ಥಿ ಸಂಘಟನೆ

ಸಿಎಫ್​ಐ ವಿದ್ಯಾರ್ಥಿ ಸಂಘಟನೆ

  • Share this:
ಬೆಂಗಳೂರು, ಸೆ. 14: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (NEP- National Education Policy) ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI – Campus Front of India) ವಿದ್ಯಾರ್ಥಿ ಸಂಘಟನೆಯ ವಿಧಾನಸೌಧ ಚಲೋ (Vidhanasoudha chalo) ಹಿಂಸಾತ್ಮಕ ರೂಪಕ್ಕೆ ತಿರುಗಿ ಲಾಠಿ ಚಾರ್ಜ್ ನಡೆಯಿತು. ಸರ್ಕಾರದ ವಿರುದ್ದ ಸಿಡಿದೆದ್ದ ವಿದ್ಯಾರ್ಥಿಗಳು ಎಲ್ಲಾ ಕಾಲೇಜುಗಳನ್ನು ಅಟೊನಮಸ್ ಮಾಡಿ ಖಾಸಗಿಕರಣ ಮಾಡುವುದು ಸರಿಯಲ್ಲ. ಹೊಸ ಶಿಕ್ಷಣ ನೀತಿಯಲ್ಲಿ ಆನ್ ಲೈನ್ ತರಗತಿಗೆ ಹೆಚ್ಚಿನ ಆದ್ಯತೆ ಇದೆ. ಅಂಗನವಾಡಿ ಶಿಕ್ಷಣಕ್ಕೆ ಪೂರ್ತಿ ಕಡಿವಾಣ ಹಾಕಲು ನಿರ್ಧರಿಸಿದ್ದಾರೆ. ಹೀಗಾಗಿ  ಶಿಕ್ಷಣ ನೀತಿಯನ್ನು ಬುಡಮೇಲು ಮಾಡುವ ನಿರ್ಧಾರವನ್ನು ಕೈ ಬಿಡಬೇಕೆಂದು ಆಗ್ರಹಿಸಿ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

200 ಅಧಿಕ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರು: ಮೈಸೂರು, ಮಂಗಳೂರು, ಗುಲ್ಬರ್ಗಾ, ಚಿತ್ರದುರ್ಗ ಸೇರಿದಂತೆ ರಾಜ್ಯಾದ್ಯಂತ ವಿವಿಧ ಕಾಲೇಜುಗಳಿಂದ ವಿದ್ಯಾರ್ಥಿಗಳು ಆಗಮಿಸಿದ್ದರು. ಮೈಸೂರು ಬ್ಯಾಂಕ್ ಸರ್ಕಲ್ ಬಳಿಯ ಸೇಂಟ್ ಮಾರ್ಥಾಸ್ ಆಸ್ಪತ್ರೆ ಬಳಿಯಿಂದ ವಿದ್ಯಾರ್ಥಿಗಳ ಜಾಥಾ ಆರಂಭವಾಗಿ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಇದರಿಂದ ಮೈಸೂರು ಬ್ಯಾಂಕ್ ಸುತ್ತಲಿನ ಪ್ರಮುಖ ರಸ್ತೆಗಳು ಟ್ರಾಫಿಕ್ ಜಾಂಗೆ ಸಿಲುಕಿದ್ದವು. ವಿಧಾನಸೌಧ ಚಲೋಗೆ ಮುಂದಾದ ವಿದ್ಯಾರ್ಥಿಗಳನ್ನು ಪೊಲೀಸರು ತಡೆದಾಗ, ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಪೊಲೀಸ್ ಹಿರಿಯ ಅಧಿಕಾರಿಗಳು ಲಾಠಿ ಚಾರ್ಚ್ ಮಾಡಲು ಆದೇಶ ನೀಡಿದರು. ಈ ವೇಳೆ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಯಿತು. ಬಳಿಕ ಪೊಲೀಸರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದರು.

ಇದನ್ನೂ  ಓದಿ: RCB vs KKR- ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ಆಟಗಾರರಿಗೆ ನೀಲಿ ಬಟ್ಟೆ; ಇದರ ಹಿಂದಿದೆ ಮಾನವೀಯತೆ

ಸಿಎಫ್​ಐ ವಿದ್ಯಾರ್ಥಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಸ್ ಕುಂಬ್ರ ಮಾತನಾಡಿ, ವಿದ್ಯಾರ್ಥಿಗಳು ಶಾಂತಿಯುವಾಗಿಯೇ ಪ್ರತಿಭಟನೆ ನಡೆಸಿದರೂ ನಮ್ಮ ಮೇಲೆ ಲಾಠಿ ಚಾರ್ಜ್ ಆಗಿದೆ. ಸಾಕಷ್ಟು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಯಲ್ಲಿದ್ದಾರೆ. ಸರ್ಕಾರ ನಮ್ಮ ಮನವಿಯನ್ನೂ ಸ್ವೀಕರಿಸಿಲ್ಲ. ಈ ಹಿಂದೆ ಸಚಿವ ಅಶ್ವಥ್ ನಾರಾಯಣ್ ನೀತಿ ಬಗ್ಗೆ ಮುಕ್ತ ಚರ್ಚೆಗೆ ಸಿದ್ಧ ಎಂದು ಹೇಳಿದರೂ ಚರ್ಚೆಗೆ ಕರೆಯಲು ಸಿದ್ಧರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: New ITI courses- ಈ ವರ್ಷದಿಂದಲೇ ಆರು ಹೊಸ ಕೋರ್ಸ್​ಗಳ ಪ್ರವೇಶಾತಿಗೆ ಅವಕಾಶ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಶಿಕ್ಷಣ ವ್ಯವಸ್ಥೆ ಕೇಸರೀಕರಣ: ಕ್ಯಾಂಪಸ್ ಫ್ರಂಟ್ ಆರೋಪ 

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣವನ್ನು ಕೇಂದ್ರೀಕರಿಸುವುದರೊಂದಿಗೆ ಖಾಸಗೀಕರಣಕ್ಕೆ ಒತ್ತು ನೀಡುವ ಹಾಗೂ ಶಿಕ್ಷಣವನ್ನು ಕೇಸರೀಕರಣಗೊಳಿಸುವ ಹುನ್ನಾರ ಹೊಂದಿದೆ. 2016 ರಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸುಗೊಳಿಸಿದ ಸುಬ್ರಮಣ್ಯಂ ನೇತೃತ್ವದ ಸಮಿತಿಯ ವರದಿಯನ್ನು ಯಾಕಾಗಿ ಸಾರ್ವಜನಿಕಗೊಳಿಸಲಿಲ್ಲ ಹಾಗೂ ಅವರ ವರದಿಯ ಅಭಿಪ್ರಾಯಗಳನ್ನು ಯಾಕಾಗಿ ಪರಿಗಣಿಸಲಿಲ್ಲ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆಯಿಲ್ಲ. ತದನಂತರ ಕಸ್ತೂರಿ ರಂಗನ್ ರವರ ನೇತೃತ್ವದಲ್ಲಿ ರೂಪಿಸಲಾದ ನೀತಿಯಲ್ಲಿರುವ ಸಮಸ್ಯೆಗಳ ಕುರಿತು 2019 ರಲ್ಲಿಯೇ ಕ್ಯಾಂಪಸ್ ಫ್ರಂಟ್ ವಿರೋಧ ವ್ಯಕ್ತಪಡಿಸಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ಶಿಫಾರಸ್ಸು ವರದಿ ನೀಡಿತ್ತು. ಆದರೆ ನಮ್ಮ ಹಾಗೂ ಹಲವಾರು ಶಿಕ್ಷಣ ತಜ್ಞರು ನೀಡಿದ ಯಾವ ಅಭಿಪ್ರಾಯಗಳನ್ನು ಸಹ ಪರಿಗಣಿಸದೆ ಈಗ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದೆ. ಇದನ್ನು ಒಪ್ಪಲು ಖಂಡಿತ ಸಾಧ್ಯವಿಲ್ಲ ಎಂದು ಅನೀಸ್ ಕುಂಬ್ರ ಸ್ಪಷ್ಪಪಡಿಸಿದರು.

ವರದಿ: ಆಶಿಕ್ ಮುಲ್ಕಿ
Published by:Vijayasarthy SN
First published: