Bengaluru Power Cut: ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಪವರ್ ಕಟ್ - ಎಲ್ಲೆಲ್ಲಿ ಕರೆಂಟ್ ಇರಲ್ಲ- ಇಲ್ಲಿದೆ ಲಿಸ್ಟ್​

Bengaluru Power Cut: ಎಲ್ಲರ ಮನೆಯಲ್ಲಿ ಯುಪಿಎಸ್​ ಸೌಲಭ್ಯ ಕೂಡ ಇರುವುದಿಲ್ಲ. ಹಾಗಾಗಿ ಬೆಸ್ಕಾಂ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬೆಸ್ಕಾಂ ಯಾವ ಕಾರಣ ವಿದ್ಯುತ್ ಸಮಸ್ಯೆ ತಲೆದೋರಿದೆ ಎಂಬುದನ್ನ ಸಹ ತಿಳಿಸದಿರುವುದು ಜನರ ಕೋಪಕ್ಕೆ ಮುಖ್ಯ ಕಾರಣವಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು(Bengaluru) ನಗರದಲ್ಲಿ ಕಳೆದ ಕೆಲವು ದಿನಗಳಿಂದ ಪವರ್ ಕಟ್(Power Cut) ಸಮಸ್ಯೆ ಆಗದೆ ಇರುವುದಿಲ್ಲ ಎಂಬತಾಗಿದೆ. ಒಂದೆಲ್ಲ ಒಂದು ಪ್ರದೇಶದಲ್ಲಿ ಜನರು ವಿದ್ಯುತ್ ಸಮಸ್ಯೆ ಎದುರಿಸುತ್ತಿದ್ದಾರೆ. ಇಂದು ಸಹ ನಗರದ ಹಲವು  ಏರಿಯಗಳಲ್ಲಿ ಪವರ್ ಕಟ್ ಆಗಲಿದೆ ಎಂದು ಬೆಸ್ಕಾಂ(BESCOM) ಮಾಹಿತಿ ನೀಡಿದೆ.  ಸಣ್ಣಕ್ಕಿ ಬಯಲು , ದಕ್ಷಿಣ ವೃತ್ತದ ಜಯನಗರ, ಕೋರಮಂಗಲ ಹಾಗೂ ಹೆಚ್.ಎಸ್.ಆರ್ ಲೇಔಟ್ ವಿಭಾಗಗಳಲ್ಲಿ ಅಡಚಣೆ ಉಂಟಾಗಲಿದೆ ಎಂದು ತಿಳಿಸಿದೆ.

ಗೋವಿಂದಪುರ, ದೊಮ್ಮಸಂದ್ರ, ಕೆಂಗೇರಿ ಸ್ಯಾಟಲೈಟ್ ಟೌನ್, ಆಜಾದ್ ನಗರ, ಅಹಮದ್ ನಗರ, ಚೌಕಿಪೇಟೆ, ಟಿ ದಾಸರಹಳ್ಳಿಆನೆಪಾಳ್ಯ, ಎಚ್- ಗೊಲ್ಲಹಳ್ಳಿ, ಕೆಂಗೇರಿ, ಮಲ್ಲೇಶಪಾಳ್ಯ, ಬಸವನಗರ, ಎಚ್ಎಎಲ್, ಕೊಡಿಗೇಹಳ್ಳಿ ಸೇರಿದಂತೆ ರಾಜೀವ್ ಗಾಂಧಿ ಬಡಾವಣೆ, ಒಎಂಬಿಆರ್ ಲೇಔಟ್, ಬಾಣಸವಾಡಿ, ರಾಮಗೊಂಡನಹಳ್ಳಿ, ವೈಟ್ ಫೀಲ್ಡ್ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಸೂಚನೆ ನೀಡಿದೆ.

ವಿದ್ಯಾನಗರ ಕ್ರಾಸ್, ದೊಡ್ಡಜಾಲ, ಚಿಕ್ಕಜಾಲ, ಸೋನಪ್ಪನಹಳ್ಳಿ, ಮೇಸಗಾನಹಳ್ಳಿ, ಹುಟ್ಟನಹಳ್ಳಿ, ಕೋಳಿಪುರ, ಕಾದಿಗಾನಹಳ್ಳಿ, ನವರತ್ನ ಅಗ್ರಹಾರ, ಸಾದಹಳ್ಳಿ ಗೇಟ್, ಚನ್ನಹಳ್ಳಿ, ಬೈನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಹ ವಿದ್ಯುತ್ ವ್ಯತ್ಯವಾಗಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರೆಯಲಿದೆ ವರುಣನ ಆರ್ಭಟ- ಮೂರು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರಿನ ಜನರಿಗೆ ಪವರ್ ಕಟ್ ಸಮಸ್ಯೆ ಹೊಸದಲ್ಲ. ಕಳೆದ ಒಂದು ವಾರದಿಂದ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ತಲೆದೋರುತ್ತಿದ್ದು, ಜನರಿಗೆ ಕಷ್ಟವಾಗುತ್ತಿದೆ.  ಅದರಲ್ಲೂ ಕೊರೊನಾ ಕಾರಣದಿಂದ ಹೆಚ್ಚಿನ ಜನರು ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದಾರೆ ಈ ವಿದ್ಯುತ್ ಸಮಸ್ಯೆ ಅವರಿಗೆ ಹೆಚ್ಚಿನ ತೊಂದರೆ ಮಾಡುತ್ತದೆ. ಮನೆಯಲ್ಲಿ ವಿದ್ಯುತ್ ಇಲ್ಲದಿದ್ದಲ್ಲಿ ವೈಫೈ ಸಿಗುವುದಿಲ್ಲ. ಅಲ್ಲದೇ ಲ್ಯಾಪ್​ಟಾಪ್ ಸೇರಿದಂತೆ ಇತರ ವಸ್ತುಗಳನ್ನು ಹೆಚ್ಚಿನ ಸಮಯ ಬಳಸುವುದು ಕಷ್ಟಕರವಾಗುತ್ತದೆ.

ಹಾಗೆಯೇ ಎಲ್ಲರ ಮನೆಯಲ್ಲಿ ಯುಪಿಎಸ್​ ಸೌಲಭ್ಯ ಕೂಡ ಇರುವುದಿಲ್ಲ. ಹಾಗಾಗಿ ಬೆಸ್ಕಾಂ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬೆಸ್ಕಾಂ ಯಾವ ಕಾರಣ ವಿದ್ಯುತ್ ಸಮಸ್ಯೆ ತಲೆದೋರಿದೆ ಎಂಬುದನ್ನ ಸಹ ತಿಳಿಸದಿರುವುದು ಜನರ ಕೋಪಕ್ಕೆ ಮುಖ್ಯ ಕಾರಣವಾಗಿದೆ.

ದಿನಲ್ಲಿ ಒಂದೆರೆಡು ಗಂಟೆಗಳಾದರೇ ಹೇಗೆ ಸಂಭಾಳಿಸಬಹುದು ಆದರೆ 5 ಗಂಟೆಗಳಿಗಿಂತ ಹೆಚ್ಚು ವಿದ್ಯುತ್ ಇಲ್ಲದೆ ಜನರು ಪರದಾಡುವಂತಾಗುತ್ತದೆ. ಅಲ್ಲದೇ ಕೇವಲ ಒಂದು ದಿನ ಮಾತ್ರ ವಾಗಿದ್ದರೂ ಹೇಗೆ ಸಾಧ್ಯವಿತ್ತು ಆದರೆ ಕಳೆದ ಒಂದು ವಾರಗಳಿಂದ ವಿದ್ಯುತ್ ಸಮಸ್ಯೆಯಾಗಿದ್ದು, ಸಂಭಾಳಿಸುವುದು  ಅಸಾಧ್ಯ ಎಂಬುದು ಜನರ ವಾದ. ಬೆಸ್ಕಾಂನ ಈ ನಡೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ- 800 ರೂ ಏರಿಕೆ ಕಂಡ ಬೆಳ್ಳಿ-ಇಂದಿನ ಬೆಲೆ ಹೀಗಿದೆ

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.
Published by:Sandhya M
First published: