ಬೆಂಗಳೂರು (ಆ. 19): ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ನನಗೆ, ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಖಾತೆ ಬದಲಾಗಿದ್ದಕ್ಕೆ ಯಾವುದೇ ಬೇಸರವಿಲ್ಲ. ಧಾರ್ಮಿಕ ಹಿನ್ನಲೆಯಿಂದ ಬಂದ ನನಗೆ ಈ ಖಾತೆ ಸೂಕ್ತವಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ತಮ್ಮ ಖಾತೆಯನ್ನು ಸರ್ಮರ್ಥಿಸಿಕೊಂಡರು. ಈ ಮೂಲಕ ಖಾತೆ ಬದಲಾವಣೆ ವಿಚಾರದಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದರು. ತಮ್ಮ ಇಲಾಖೆ ಕುರಿತು ವಿಕಾಸ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಶೈಲ ಮಲ್ಲಿಕಾರ್ಜುನ ಸೇರಿದಂತೆ ಸುಪ್ರಸಿದ್ಧ, ಐತಿಹಾಸಿ ದೇವಸ್ತಾನಗಳಲ್ಲಿ ಯಾತ್ರಿ ನಿವಾಸ ನಿರ್ಮಿಸಲು ಇಲಾಖೆ ನಿರ್ಧರಿಸುವುದಾಗಿ ತಿಳಿಸಿದರು.
ಅನೇಕ ದೇವಾಲಯಗಳಲ್ಲಿ ಭಕ್ತರಿಗೆ ಮೂಲ ಸೌಕರ್ಯ ಕೊರತೆ ಕಂಡು ಬಂದಿದ್ದು, ದೇಗುಲ ಸ್ವಚ್ಛತೆ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಲಾಗುವುದು. ಪಂಡರಾಪುರ, ಗುಡ್ಡಾಪುರ, ತುಳಜಾಭವಾನಿ ದೇವಾಲಯ ಸೇರಿದಂತೆ ಅನೇಕ ದೇವಾಲಯಗಳಿಗೆ ಭಕ್ತರು ನಡೆದು ಹೋಗುತ್ತಾರೆ. ಇಂತಹ ದೇವಾಲಗಳ ಬಳಿ ಯಾತ್ರಿ ನಿವಾಸ ನಿರ್ಮಿಸಿ, ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದರು.
ರಾಜ್ಯದಲ್ಲಿ 25 ಲಕ್ಷಕ್ಕಿಂತ ಹೆಚ್ಚಿನ ಆದಾಯವಿರುವ ದೇವಾಲಯಗಳನ್ನು ಎ ವರ್ಗಕ್ಕೂ, 25 ಲಕ್ಷಕ್ಕಿಂತ ಕಡಿಮೆ ಇರುವ ಹಾಗೂ 5 ಲಕ್ಷ ರೂ.ಗಿಂತ ಹೆಚ್ಚು ಆದಾಯವಿರುವ ದೇವಾಲಯಗಳನ್ನು ಬಿ ವರ್ಗ, 5ಲಕ್ಷ ರೂ.ಗಿಂತ ಕಡಿಮೆ ಆದಾಯವಿರುವ ದೇವಾಲಯಗಳನ್ನು ಸಿ ವರ್ಗದ ದೇವಾಲಯಗಳೆಂದು ವರ್ಗೀಕರಿಸಲಾಗಿದೆ. ಮುಜರಾಯಿ ದೇವಾಲಯಗಳ ಜಾಗ ಅತಿಕ್ರಮಣವಾಗಿರುವ ಬಗ್ಗೆ ಸಮೀಕ್ಷೆ ನಡೆಸಿ ರಕ್ಷಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಹಜ್ ಯಾತ್ರಿಗಳಿಗೆ ಸೌಲಭ್ಯ
ವಕ್ಫ್ ಆಸ್ತಿಗಳ ಅತಿಕ್ರಮಣದ ಬಗ್ಗೆ ಸರ್ವೆ ಮಾಡಲಾಗುತ್ತಿದೆ. ಈಗಾಗಲೇ 1,05,885 ಎಕರೆ ಸರ್ವೆ ಆಗಿದೆ. ಹಜ್ ವಕ್ಫ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ್ದೇನೆ. ವಕ್ಫ್ ಮಂಡಳಿಯಲ್ಲಿ ಖಾಲಿಯಾಗಿರುವ 284 ಹುದ್ದೆ ಹಾಗೂ ಮುಜರಾಯಿ ಇಲಾಖೆಯಲ್ಲಿ 48 ಹುದ್ದೆಗಳು ಖಾಲಿ ಇದ್ದು, ಇವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು.
ಇದನ್ನು ಓದಿ: ಲೇಡಿ ಪೊಲೀಸ್ನಿಂದ ರೇಪ್ ಬೆದರಿಕೆ; ಜನತಾ ದರ್ಶನ ವೇಳೆ ಸಿಎಂ ಮುಂದೆ ಮಹಿಳೆ ಅಳಲು
ಹಜ್ ಯಾತ್ರೆಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ಸೌದಿ ಅರೆಬಿಯಾಕ್ಕೆ ಹಜ್ ಯಾತ್ರಿಗಳು ಹೋಗುತ್ತಾರೆ. 45 ದಿನಗಳ ಕಾಲ ಅವರು ಅಲ್ಲಿ ಇರಬೇಕಾಗುತ್ತದೆ. ಅಲ್ಲಿ ಹಜ್ ಯಾತ್ರಿಗಳಿಗೆ ಸೌಲಭ್ಯ ಕಲ್ಪಿಸುತ್ತಿದ್ದೇವೆ. ಸದ್ಯ ಕೋವಿಡ್ ಹಿನ್ನಲೆ ಹಜ್ ಯಾತ್ರಿಗಳು ಹೋಗಿಲ್ಲ ಎಂದರು.
ನನಗೆ ಗೊತ್ತಿಲ್ಲ
ಇದೇ ವೇಳೆ ಪ್ರಮಾಣ ವಚನ ಸಂದರ್ಭದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಕುರಿತು ಮಾತನಾಡಿದ ಅವರು, ನಾನು ಝೀರೋ ಟ್ರಾಫಿಕ್ ಕೇಳಿರಲಿಲ್ಲ. ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ. ನಾನು ಕಾರಿನಲ್ಲಿ ಕೂತ ಮೇಲೆ ನನಗೆ ಝೀರೋ ಟ್ರಾಫಿಕ್ ಸಂಚಾರದ ಬಗ್ಗೆ ಗೊತ್ತಾಗಿದ್ದು ಎಂದು ಉತ್ತರಿಸಿದರು.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
ನಿಮ್ಮ ಜಿಲ್ಲೆಯಿಂದ (ಬೆಂಗಳೂರು ನಗರ)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ