ಬೆಂಗಳೂರು (ಜೂ. 12): ಕೊರೋನಾದಿಂದಾಗಿ ಜನರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಸಂದರ್ಭದಲ್ಲಿ ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸುವಂತೆ, ಅವರಿಗೆ ಸಹಾಯ ಮಾಡುವಂತೆ ಕಾಂಗ್ರೆಸ್ನ ಎಲ್ಲಾ ಶಾಸಕರಿಗೆ ನಾವು ಹೇಳಿದ್ದೇವು. ಅದರಂತೆ ನಮ್ಮ ಎಲ್ಲಾ ಶಾಸಕರು ಜನರಿಗೆ ಸಹಾಯ ಮಾಡುತ್ತಿದ್ದಾರೆ. ಇನ್ನು ಜಮೀರ್ ಅಹಮದ್ ಆಡಳಿತ ಪಕ್ಷಕ್ಕಿಂದಲೂ ಹೆಚ್ಚಾಗಿ ಜನಸೇವೆ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಚಾಮರಾಜಪೇಟೆ ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಚಾಮರಾಜಪೇಟೆಯಲ್ಲಿ ಶಾಸಕ ಜಮೀರ್ ಅಹಮದ್ ಅವರೊಂದಿಗೆ ಸೇರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಪೌರ ಕಾರ್ಮಿಕರಿಗೆ ಹಾಗೂ ಬಕ್ಷಿ ಗಾರ್ಡನ್ ಸ್ಲಂ ನಿವಾಸಿಗಳಿಗೆ ರೇಷನ್ ಕಿಟ್ ವಿತರಿಸಿದರು. ಈ ಕಾರ್ಯಕ್ರಮದ ಬಳಿಕ ಮಾತಾಡಿದ ಅವರು ಶಾಸಕ ಜಮೀರ್ ಕಾರ್ಯಕ್ಕೆ ಶ್ಲಾಘನೆ ವ್ಯಕ್ತ ಪಡಿಸಿದರು.
ಪದೇ ಪದೇ ಕರೆಯುತ್ತಾರೆ ಜಮೀರ್
ವಿಪಕ್ಷ ಸಿದ್ಧರಾಮಯ್ಯ ಅವರು ಇತ್ತೀಚಿನ ದಿನಗಳಲ್ಲಿ ಚಾಮರಾಜಪೇಟೆ ವಿಧಾಸನಸಭಾ ಕ್ಷೇತ್ರದಲ್ಲಿ ಹೆಚ್ಚು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಚಾಮರಾಜಪೇಟೆಯ ಎಲ್ಲಾ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಹಾಜರಿರುತ್ತಾರೆ. ಇದೇ ಹಿನ್ನಲೆ ಅವರು ಬಾದಾಮಿ ಬಿಟ್ಟು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯುವ ಸಾಧ್ಯತೆ ಇದೆ ಎಂಬ ಊಹಾಪೋಹಾಗಳು ಹರಿದಾಡುತ್ತಲೇ ಇರುತ್ತವೆ. ಅಷ್ಟೇ ಅಲ್ಲದೇ ಶಾಸಕ ಜಮೀರ್ ಅಹಮದ್ ಕೂಡ ಸಿದ್ದರಾಮಯ್ಯ ಅವರಿಗೆ ತಮ್ಮ ಕ್ಷೇತ್ರದಿಂದಲೇ ಕಣಕ್ಕೆ ಇಳಿಯುವಂತೆಯೂ ಕೇಳಿದ್ದರು. ಈ ಎಲ್ಲಾ ಪ್ರಶ್ನೆಗ ಉತ್ತರಿಸಿದ ಸಿದ್ದರಾಮಯ್ಯ, ಜಮೀರ್ ಪದೇ ಪದೇ ತಮ್ಮನ್ನು ಕರೆಯುತ್ತಾರೆ ಈ ಹಿನ್ನಲೆಯಲ್ಲಿ ಬರುತ್ತೇನೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.
ಇದನ್ನು ಓದಿ: ನಮ್ಮಪ್ಪ ಇದ್ದಿದ್ರೆ ಎಲ್ಲವನ್ನೂ ಕೊಡಿಸ್ತಾ ಇದ್ರು, ಅಮ್ಮ ಒಬ್ಬಳೆ ಹೇಗೆ ಸಾಕ್ತಾಳೆ? ಮುಗ್ಧ ಮಗುವಿನ ಮನಕಲಕುವ ಪ್ರಶ್ನೆ
ಸಿದ್ದರಾಮಯ್ಯ ಮತ್ತು ಜಮೀರ್ ನಡುವೆ ಹೆಚ್ಚು ಆಪ್ತತೆ ಇರುವ ಹಿನ್ನಲೆ ಸಿದ್ದರಾಮಯ್ಯ ಬಾದಾಮಿಗಿಂತ ಹೆಚ್ಚಾಗಿ ಚಾಮರಾಜಪೇಟೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೇ ಕಾರಣದಿಂದಲೇ ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆ ಕುರಿತು ಪದೇ ಪದೇ ಸುದ್ದಿ ಆಗುತ್ತಿದೆ.
ಬಾದಾಮಿಯಿಂದಲೇ ಸ್ಪರ್ಧೆ
ಜಮೀರು ಅಹಮದ್ ಅವರು ತಮ್ಮ ಕ್ಷೇತ್ರದಿಂದಲೇ ಕಣಕ್ಕೆ ಇಳಿಯುವಂತೆ ಸ್ಪರ್ಧಿಸುವಂತೆ ಹೇಳುತ್ತಾರೆ. ಅದು ಜಮೀರ್ ಅಹಮದ್ ಖಾನ್ ಅವರ ಔದರ್ಯ. ಆದರೆ, ನಾನು ಬಾದಾಮಿಯಲ್ಲಿಯೇ ನಿಲ್ಲುತ್ತೇನೆ ಎಂದು ತಿಳಿಸಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಚಾಮರಾಜಪೇಟೆಯಿಂದ ಸ್ಪರ್ಧಿಸುವಂತೆ ಒತ್ತಾಯಿಸಿದಾಗ ಅದರ ಬಗ್ಗೆ ಆಮೇಲೆ ಯೋಚನೆ ಮಾಡೋಣ. ಸದ್ಯ ನಾನು ಈಗ ಬಾದಾಮಿ ಕ್ಷೇತ್ರದ ಶಾಸಕ ಎಂದು ತಿಳಿಸಿದರು.
ಇನ್ನು ದೇಶದಲ್ಲಿ ಕೊರೋನಾ 2ನೇ ಅಲೆ ತಗ್ಗುತ್ತಿದ್ದು, ಲಸಿಕೆ ಅಭಿಯಾನ ಸಮರೋಪಾದಿಯಲ್ಲಿ ನಡೆಯುತ್ತಿದೆ. ಈವರೆಗೂ ಕೇಂದ್ರದಿಂದ ರಾಜ್ಯಗಳಿಗೆ 25.60 ಕೋಟಿ ಡೋಸ್ ಹಂಚಿಕೆಯಾಗಿದೆ. ಈವರೆಗೂ 24.44 ಕೋಟಿ ಡೋಸ್ ಬಳಕೆಯಾಗಿದೆ. ರಾಜ್ಯಗಳಲ್ಲಿ ಸದ್ಯ 1.17 ಕೋಟಿ ಡೋಸ್ ಬಳಕೆಗೆ ಲಭ್ಯವಿದೆ. ಇನ್ನು ಮೂರು ದಿನಗಳಲ್ಲಿ 38 ಲಕ್ಷ ಡೋಸ್ ಹಂಚಿಕೆಯಾಗಕಲಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಿದೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ