ಬೆಂಗಳೂರು (ಜು. 8): ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ ರೈತರ ಒಂದು ಲಕ್ಷ ರೂ ವರೆಗಿನ ಸಾಲ ಮನ್ನಾ ಮಾಡಲಾಗುವುದು. ಈ ಕುರಿತು ಇನ್ನೆರಡು ದಿನಗಳಲ್ಲಿ ತೀರ್ಮಾನ ನಡೆಸಿ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೊರೋನಾದಿಂದ ಸಾವನ್ನಪ್ಪಿರುವ ರೈತರಿಗೆ ಸಹಾಯ ಮಾಡಬೇಕಾದ ಹೊಣೆಗಾರಿಗೆ ಸರ್ಕಾರದ ಮೇಲೆ ಇದೆ. ಅದಕ್ಕಾಗಿ ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಮೂಲಕ ಸಾಲಮನ್ನಾ ಯೋಜನೆ ಜಾರಿ ಮಾಡಲಾಗುವುದುದು ಎಂದು ಸ್ಪಷ್ಟಪಡಿಸಿದರು.
ಈಗಾಗಲೇ ಎಲ್ಲಾ ಸಹಕಾರ ಸಂಸ್ಥೆಗಳಿಗೆ ಸಾವನ್ನಪ್ಪಿರುವ ರೈತರ ಮಾಹಿತಿ ಕೊಡಲು ಸೂಚನೆ ನೀಡಲಾಗಿದ್ದು, ಇನ್ನೆರಡು ದಿನಗಳಲ್ಲಿ ಅಂತಿಮ ತಿರ್ಮಾನ ಪ್ರಕಟಿಸಲಾಗುವುದು. ಆರ್ಥಿಕವಾಗಿ ಸಬಲವಾಗಿರುವ ಡಿಸಿಸಿ ಬ್ಯಾಂಕ್ ಗಳ ಮೂಲಕ ಸಾಲ ಮನ್ನಾ ಪ್ರಕ್ರಿಯೆ ನಡೆಸಲಾಗುವುದು. ಇದರಿಂದ ಡಿಸಿಸಿ ಬ್ಯಾಂಕ್ ಹಾಗೂ ಅಪೆಕ್ಸ್ ಬ್ಯಾಂಕ್ಗಳಿಂದ ಆರ್ಥಿಕ ನೆರವು ಸಿಗಲಿದೆ ಎಂದು ತಿಳಿಸಿದರು.
ಮೃತ ರೈತರ ಗರಿಷ್ಠ 1 ಲಕ್ಷ ರೂ ಸಾಲ ಮನ್ನಾಕ್ಕೆ ನಿರ್ಧರಿಸಲಾಗಿದೆ. ಈ ಕುರಿತು ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ನಡೆಸಲಾಗುವುದು. ಬಳಿಕ ಈ ಬಗ್ಗೆ ಸಿಎಂ ಘೋಷಿಸಲಿದ್ದಾರೆ. ಕೋವಿಡ್ ನಿಂದ ಸಾವನ್ನಪ್ಪಿದ ರೈತರ ಕುಟುಂಬದ ಸದಸ್ಯರು ಹತ್ತಿರದ ಡಿಸಿಸಿ ಬ್ಯಾಂಕ್ಗಳಲ್ಲಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ ಎಂದರು
ಇದನ್ನು ಓದಿ: ಸಾರಿಗೆ ಅನ್ ಲಾಕ್ : ಜುಲೈ 12ರಿಂದ ಕೇರಳ ಕರ್ನಾಟಕ ಷರತ್ತು ಬದ್ಧ ಸೇವೆ ಆರಂಭಿಸಲಿರುವ KSRTC
ಕೋವಿಡ್ ನಿಂದ ಮೃತಪಟ್ಟ ರೈತರ ಸಾಲ ಮನ್ನಾ ಮಾಡುವ ಕುರಿತು ಮುಖ್ಯಮಂತ್ರಿಗಳೇ ಇನ್ನೆರಡು ದಿನಗಳಲ್ಲಿ ತಿಳಿಸಲಿದ್ದಾರೆ. ಎಷ್ಟು ಜನ ರೈತರು ಕೋವಿಡ್ ನಿಂದ ಮೃತರಾಗಿದ್ದಾರೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕಿ, ಸಾಲ ಮನ್ನಾ ಮಾಡಲಾಗುವುದು.
ಕೇಂದ್ರ ಸರ್ಕಾರದಲ್ಲಿ ಸಹಕಾರ ಇಲಾಖೆಗೆ ಸಚಿವರನ್ನು ನೇಮಕ ಮಾಡಿರುವು ಕುರಿತು ಪ್ರತಿಕ್ರಿಯಿಸಿದ ಅವರು, ಕೃಷಿಗೆ ಹೆಚ್ಚಿನ ಸಹಕಾರ ನೀಡಲಾಗಿತ್ತು. ಆದರೆ, ಸಹಕಾರ ಇಲಾಖೆ ಗೆ ನೀಡಲಾಗುತ್ತಿರಲಿಲ್ಲ. ಈಗ ಸಹಕಾರ ಇಲಾಖೆಯ ಸಚಿವಾಲಯ ತೆರೆಯಲಾಗಿದೆ. ಇದಕ್ಕಾಗಿ ಪ್ರಧಾನಿ ಹಾಗೂ ಅಮಿತ್ ಶಾ ರನ್ನ ಅಭಿನಂದಿಸುತ್ತೇನೆ. ಕೇಂದ್ರದಿಂದ ಸದ್ಯದಲ್ಲೆ 720 ಕೋಟಿ ಬೆಂಬಲ ಬೆಲೆ ಬಿಡುಗಡೆಯಾಗುತ್ತದೆ. ಕೇಂದ್ರದ ಸಹಕಾರ ಇಲಾಖೆ ಇಂದ ರಾಜ್ಯದ ಸಹಕಾರ ಇಲಾಖೆಗೆ ಯಾವುದೇ ತೊಂದರೆ ಆಗಲ್ಲ ಎಂದರು.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು
ನಿಮ್ಮ ಜಿಲ್ಲೆಯಿಂದ (ಬೆಂಗಳೂರು ನಗರ)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ