ನವದೆಹಲಿ (ಮೇ 5): ಇಡೀ ದೇಶಾದ್ಯಂತ ಕಾರ್ಪೊರೇಷನ್ ಎಲೆಕ್ಷನ್ ನಡೆಸುವಂತೆ ಸುಪ್ರೀಂ ಕೋರ್ಟ್ (Supreme Court) ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ. ಮಧ್ಯಪ್ರದೇಶದಲ್ಲಿ ಒಬಿಸಿ ಮೀಸಲಾತಿ (OBC Reservation) ವಿಚಾರಕ್ಕೆ ಸಂಬಂಧಿಸಿದಂತೆ ಗೊಂದಲಗಳು ಏರ್ಪಟ್ಟ ಹಿನ್ನೆಲೆ ಚುನಾವಣೆಗೆ (Election) ತಡೆ ನೀಡಲಾಗಿತ್ತು. ಈಗಾಗಲೇ ಸಮಿತಿ ರಚಿಸಿರೋದನ್ನು ಮುಂದಿನ ಅವಧಿಗೆ ಬಳಸಿಕೊಳ್ಳಿ. ಎಸ್ ಸಿ / ಎಸ್ ಟಿ , ಜನರಲ್ ಕೆಟಗರಿಯಲ್ಲೇ ಚುನಾವಣೆ ನಡೆಸಿ ಹಾಗೂ 2 ವಾರದಲ್ಲಿ ನೋಟಿಫಿಕೇಷನ್ (Notification) ಹೊರಡಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಬಿಬಿಎಂಪಿ 198 ವಾರ್ಡ್ಗೆ ಮಾತ್ರ ಚುನಾವಣೆ ನಡೆಯಲಿದೆ.
ಬಿಬಿಎಂಪಿ 198 ವಾರ್ಡ್ಗೆ ಮಾತ್ರ ಚುನಾವಣೆ
ಡಿ ಲಿಮಿಟೇಷನ್ ಮಾಡಿ ಸರ್ಕಾರ ಆದೇಶ ಹೊರಡಿಸಿಲ್ಲ, ಈ ಹಿನ್ನೆಲೆಯಲ್ಲಿ 198 ವಾರ್ಡ್ಗಳಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆ ನಡೆಸುವಂತೆ ಕೋರಿ ಇಬ್ಬರು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ರು. ಕೋರ್ಟ್ ತೀರ್ಪಿನ ವಿಚಾರಕ್ಕೆ ಸಂಬಂಧಿಸಿದಂತೆ ಮಾತಾಡಿದ ಸಚಿವ ಆರ್ ಅಶೋಕ್, ಬಿಬಿಎಂಪಿ ಚುನಾವಣೆ ಮಾಡಲು ನಾವು ರೆಡಿ ಎಂದಿದ್ದಾರೆ.
ಕರ್ನಾಟಕ ಸರಕಾರದಿಂದಲೂ ಮೇಲ್ಮನವಿ ಸಲ್ಲಿಕೆ
ಈ ಹಿಂದೆ ಬಿಬಿಎಂಪಿಯ 198 ವಾರ್ಡ್ಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಕರ್ನಾಟಕ ಸರಕಾರ ಸಹ ಮೇಲ್ಮನವಿ ಸಲ್ಲಿಸಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿತ್ತು. ಕರ್ನಾಟಕ ನಗರ ಪಾಲಿಕೆಯ ಮೂರನೇ ತಿದ್ದುಪಡಿ ಕಾಯಿದೆ (2020) ಅನುಸಾರ 243 ವಾರ್ಡ್ಗಳಿಗೆ ಬದಲಾಗಿ 2020ರ ಸೆ.23ರಂದು ಹೊರಡಿಸಿರುವ ಅಧಿಸೂಚನೆಯಂತೆ 198 ವಾರ್ಡ್ಗಳಿಗೆ ಆರು ವಾರಗಳ ಒಳಗಾಗಿ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ 2020ರ ಡಿಸೆಂಬರ್ 4ರಂದು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.
ಇದನ್ನೂ ಓದಿ: H.D Kumaraswamy: ಬಾದಾಮಿ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಣೆ; ಸಿದ್ದು ಕಾಲೆಳೆದ ಕುಮಾರಸ್ವಾಮಿ
ಚುನಾವಣೆಗೆ ತಡೆ ನೀಡಿದ್ದ ಕೋರ್ಟ್
ನಂತರ ರಾಜ್ಯ ವಿಧಾನಸಭೆಯು ಹೈಕೋರ್ಟ್ ಆದೇಶವನ್ನು ರದ್ದುಪಡಿಸಿ 243 ವಾರ್ಡ್ಗಳಿಗೆ ಚುನಾವಣೆ ನಡೆಸಬೇಕು ಎಂಬ ನಿರ್ಣಯ ಅಂಗೀಕರಿಸಿತ್ತು. ಅಲ್ಲದೇ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಮೇಲ್ಮನವಿ ಹಿನ್ನೆಲೆಯಲ್ಲಿ ಅಂದಿನ ಸಿಜೆಐ ಎಸ್.ಎ. ಬೊಬ್ಡೆ ನೇತೃತ್ವದ ಪೀಠವು ಚುನಾವಣೆಗೆ ತಡೆ ನೀಡಿತ್ತು.
ರಾಜ್ಯ ಸರ್ಕಾರದ ಮೇಲೆ ಎಲೆಕ್ಷನ್ ಒತ್ತಡ
ಡಿ ಲಿಮಿಟೇಷನ್ ಮಾಡಿ ಸರ್ಕಾರ ಆದೇಶ ಹೊರಡಿಸಿಲ್ಲ ಹೀಗಾಗಿ ಸುಪ್ರೀಂಕೋರ್ಟ್ ನೀಡಿರೋ ತೀರ್ಪಿನಿಂದು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಲಿದೆ. ಶೀಘ್ರವೇ ರಾಜ್ಯ ಸರ್ಕಾರ ಡಿ ಲಿಮಿಟೇಷನ್ ಮಾಡಿ ಸರ್ಕಾರ ಆದೇಶ ಹೊರಡಿಸಲಿದೆ. ಚುನಾವಣೆಗೂ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಿದೆ.
ಸಂಪುಟ ಪುನಾರಚನೆ ಡೌಟ್
ಶೀಘ್ರವೇ ಸುಪ್ರೀಂ ಕೋರ್ಟ್ ನೋಟಿಫಿಕೇಷನ್ ಹೊರಡಿಸುವಂತೆ ಆದೇಶ ನೀಡಿರೋ ಹಿನ್ನೆಲೆ, ಸಚಿವ ಸಂಪುಟ ಪುನಾರಚನೆಗೆ ಬ್ರೇಕ್ ಬೀಳಲಿದೆ. ಸಚಿವಕಾಂಕ್ಷಿಗಳಿಗೆ ಮತ್ತೆ ನಿರಾಶೆಯಾಗಲಿದೆ. ಈ ಬಾರಿಯಾದ್ರೂ ನಮಗೆ ಮಂತ್ರಿ ಸ್ಥಾನ ಸಿಗುತ್ತೆ ಅನ್ನೋ ಕನಸು ಕಾಣ್ತಿದ್ದ ಸಚಿವಾಕಾಂಕ್ಷಿಗಳ ಆಸೆಗೆ ತಣ್ಣೀರು ಎರೆಚಿದಂತೆ ಆಗಿದೆ. ಇದೇ ವಿಚಾರವಾಗಿ ದೆಹಲಿಗೆ ಹೋಗಿರೋ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹೈಕಮಾಂಡ್ ಜೊತೆ ಚರ್ಚಿಸಲು ಇನ್ನು ಸಮಯ ಕೂಡ ಸಿಕ್ಕಿಲ್ಲ. ಸುಪ್ರೀಂ ಆದೇಶದ ಬಳಿಕ ಚುನಾವಣೆ ಹಿನ್ನೆಲೆ ಸಿಎಂ ಸಚಿವ ಸಂಪುಟ ಪುನಾರಚನೆಗೆ ಕೈ ಹಾಕೋದು ಡೌಟ್ ಎಂದು ಹೇಳಲಾಗ್ತಿದೆ.
ಇದನ್ನೂ ಓದಿ: Karnataka Politics: ಸೋಲಿನಿಂದ ಕಾಂಗ್ರೆಸ್ ನಾಯಕರು ಮಾನಸಿಕ ಸ್ಥಿತಿ ಕಳ್ಕೊಂಡಿದ್ದಾರೆ- ಸಿ.ಟಿ ರವಿ
ಈ ಹಿಂದೆ ಬಿಬಿಎಂಪಿಯ 198 ವಾರ್ಡ್ಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಕರ್ನಾಟಕ ಸರಕಾರ ಸಹ ಮೇಲ್ಮನವಿ ಸಲ್ಲಿಸಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿತ್ತು.
ನಿಮ್ಮ ಜಿಲ್ಲೆಯಿಂದ (ಬೆಂಗಳೂರು ನಗರ)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ