Siddaramaiah V/s CM Bommai: ಪೊಲೀಸರ ಕೈಗೆ ತ್ರಿಶೂಲ ನೀಡಿ ಹಿಂಸೆಯ ದೀಕ್ಷೆ ಕೊಟ್ಟು ಬಿಡಿ: ಸಿಎಂ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಮುಖ್ಯಮಂತ್ರಿಗಳೇ ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ ಕನಸು ನನಸಾಗಬಹುದು ಎಂದು ಆಕ್ರೋಶ ಹೊರ ಹಾಕಿದರು.

ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ

 • Share this:
  ಹಾವೇರಿ: ಉಪ ಚುನಾವಣೆಯ (Karnataka By Election) ಕದನ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ನಾಯಕರು ಏಟು-ತಿರುಗೇಟು ನೀಡುತ್ತಾ ಪ್ರಚಾರ ನಡೆಸುತ್ತಿದ್ದಾರೆ. ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಬಿಜೆಪಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ವಿರುದ್ಧ ಇವತ್ತು ಸಹ ವಾಗ್ದಾಳಿ ನಡೆಸಿದರು. ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಮುಖ್ಯಮಂತ್ರಿಗಳೇ ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ ಕನಸು ನನಸಾಗಬಹುದು ಎಂದು ಆಕ್ರೋಶ ಹೊರ ಹಾಕಿದರು. ಟ್ವಿಟರ್ ನಲ್ಲಿ ವಿಜಯಪುರ ಗ್ರಾಮೀಣ ಮತ್ತು ಕಾಪು ಪೊಲೀಸ್ ಠಾಣೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ಎಲ್ಲ ಪೊಲೀಸರು ಕೇಸರಿ ಬಟ್ಟೆ ಧರಿಸಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಇತ್ತ ಬಿಜೆಪಿ ನಾಯಕರು ಸಹ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರ ಹೇಳಿಕೆಗಳಿಗೆ ತಿರುಗೇಟು ನೀಡುತ್ತಿದ್ದಾರೆ. ಒಟ್ಟಿನಲ್ಲಿ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ (Assembly Election) ಚುನಾವಣೆ ಯುದ್ಧವೇ ಆರಂಭಗೊಂಡಿದೆ.

  ನಮ್ಮದು ನಿಜವಾದ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ 

  ಸಂಗೂರು ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಗೆ ಸಿ.ಎಂ.ಉದಾಸಿ ಅವರು ಅಧ್ಯಕ್ಷರಾಗಿದ್ದರು ಮತ್ತು ಸಜ್ಜನರ್ ಉಪಾಧ್ಯಕ್ಷರು. ಖಾಲಿ ಚೀಲವನ್ನು ಬಿಡದೆ ಮಾರ್ಕೊಂಡು ಕಾರ್ಖಾನೆಯನ್ನು ಸಂಪೂರ್ಣ ಲೂಟಿ ಮಾಡಿದರು.  ಈ ಸಕ್ಕರೆ ಕಾರ್ಖಾನೆ ಖಾಸಗಿ ಪಾಲಾಗಲು ಇವರೇ ಕಾರಣ. ಇಂತಹ ಭ್ರಷ್ಟರಿಗೆ ಮತ ನೀಡಬೇಕೇ? ನಾನು ಮುಖ್ಯಮಂತ್ರಿ ಆಗುವ ಮೊದಲು ಅಲ್ಪಸಂಖ್ಯಾತರ ಅಭಿವೃದ್ಧಿಗೆ ನೀಡುತ್ತಿದ್ದ ಅನುದಾನ ರೂ.400 ಕೋಟಿ ಇತ್ತು, ನಾನು ಪ್ರತಿ ವರ್ಷ ಅನುದಾನ ಹೆಚ್ಚಿಸಿದ್ದೆ. ಕೊನೆ ಬಜೆಟ್ ನಲ್ಲಿ ಅದು ರೂ. 3,100 ಕೋಟಿ ಆಗಿತ್ತು. ಇದು ನಿಜವಾದ "ಸಬ್ ಕಾ ಸಾಥ್, ಸಬ್ ಕಾ ವಿಕಾಸ್".

  ಅವರು ದೇಶದ ನಾಗರಿಕರಲ್ಲವೇ? 

  ದೇಶದಲ್ಲಿ 14% ಜನಸಂಖ್ಯೆ ಇರುವ ಮುಸ್ಲಿಂ ಸಮುದಾಯದ ಒಬ್ಬನೇ ಒಬ್ಬ ಶಾಸಕ/ಮಂತ್ರಿ ಬಿಜೆಪಿಯಲ್ಲಿ ಇಲ್ಲ. ಅವರು ದೇಶದ ನಾಗರಿಕರಲ್ಲವೇ? ಕಾಂಗ್ರೆಸ್ ಬಗ್ಗೆಯಾಗಲಿ, ಮುಸ್ಲಿಮರ ಬಗ್ಗೆಯಾಗಲಿ ಮಾತನಾಡುವ ನೈತಿಕತೆ ಬಿಜೆಪಿಗೆ ಎಲ್ಲಿದೆ? ಎಂದು ಪ್ರಶ್ನಿಸಿದರು. ಹಾನಗಲ್ ವಿಧಾನಸಭೆ ಕ್ಷೇತ್ರದ ಮಾಸನಕಟ್ಟೆ ಗ್ರಾಮದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರಿಗೆ ಮತ ನೀಡುವಂತೆ ಸಿದ್ದರಾಮಯ್ಯನವರು ಮತಯಾಚನೆ ಮಾಡಿದರು ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಸೇರಿದಂತೆ ಹಲವು ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು

  ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ 

  ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ. ಗೂಂಡಾಗಿರಿಯನ್ನು 'ಕ್ರಿಯೆಗೆ ಪ್ರತಿಕ್ರಿಯೆ' ಎಂದು ಸಮರ್ಥಿಸಿದ ಮುಖ್ಯಮಂತ್ರಿಗಳು ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ.

  ಇದನ್ನೂ ಓದಿ: ಬಾರಪ್ಪ ಬಾ.. ಸಿದ್ದರಾಮಣ್ಣ ಬಾ.. ಬಂದು ನೋಡಪ್ಪ.. ಚುನಾವಣಾ ಪ್ರಚಾರದ ವೇಳೆ CM Bommai ಲೇವಡಿ

  ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ. ಒಂದೆಡೆ ಅಮಾಯಕ ಯುವಕ-ಯುವತಿಯರ ಮೇಲೆ ಅನೈತಿಕ ಪೊಲೀಸ್‍ಗಿರಿಯ ದೌರ್ಜನ್ಯ. ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ. ಮತ್ತೊಂದೆಡೆ ಬಹಿರಂಗವಾಗಿತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ. ಇದಕ್ಕೆಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಹಿರಂಗ ಬೆಂಬಲ. ರಾಜ್ಯದಲ್ಲಿ ಸರ್ಕಾರ ಇದೆಯೇ ಎಂದು ಪ್ರಶ್ನೆ ಮಾಡಿದರು.

  ವರದಿ: ಮೊಹ್ಮದ್​ ರಫೀಕ್​ ಕೆ 
  Published by:Kavya V
  First published: