ಕಾಮಿಡಿಯನ್ ಕಟೀಲ್ ಈಗ ವಿಲನ್.. ಡಿಕೆಶಿನೇ ಮೀರ್ ಸಾದಿಕ್.. ಕಾಂಗ್ರೆಸ್-ಬಿಜೆಪಿ ಮಧ್ಯೆ ಟ್ವೀಟ್ ವಾರ್!

ಮಹಾನಾಯಕನ ಪ್ರಭಾವ ಕಡಿಮೆ ಮಾಡಲು ಮತ್ತು ದೆಹಲಿಯ ಮಹಾನಾಯಕಿಯನ್ನು ಮೆಚ್ಚಿಸಲು ಮೀರ್‌ ಸಾದಿಕ್‌ನಿಂದ ಈ ಆಡಿಯೋ ತಂತ್ರವೇ ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ವಿರುದ್ಧ ಪರೋಕ್ಷವಾಗಿ ಬಿಜೆಪಿ ಟ್ವೀಟಾಸ್ತ್ರ ಬಿಟ್ಟಿದೆ.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

  • Share this:
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಬಿರುಗಾಳಿಯನ್ನೇ ಎಬ್ಬಿಸಿದೆ. ಆಡಿಯೋದಲ್ಲಿರುವುದು ನನ್ನ ಧ್ವನಿಯಲ್ಲ ಎಂದು ಕಟೀಲ್​ ಅವರು ಸ್ಪಷ್ಟನೆ ನೀಡಿದ್ದಾರೆ. ಆದರೆ ಪ್ರತಿಪಕ್ಷ ಕಾಂಗ್ರೆಸ್​ ಟ್ವೀಟ್​ ಮೂಲಕ ಆಡಿಯೋ ಬಗ್ಗೆ ಬಿಜೆಪಿಯನ್ನು ಲೇವಡಿ ಮಾಡಿದೆ. ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಬಿಎಸ್ ಯಡಿಯೂರಪ್ಪ ಅವರಿಗೆ ಈ ಹಿಂದೆಯೇ ಮನವರಿಕೆಯಾಗಿತ್ತು. ಆದರೆ ಜಗದೀಶ್ ಶೆಟ್ಟರ್ ಮತ್ತು ಕೆಎಸ್ ಈಶ್ವರಪ್ಪ ಅವರು ತಮ್ಮ ಬಗಲಿನಲ್ಲಿಯೇ ಬೆಂಕಿ ಇದ್ದಿದ್ದನ್ನು ಅರಿತಿರಲಿಲ್ಲ. ಕಾಮಿಡಿ ಪಾತ್ರ ಮಾಡುತ್ತಿದ್ದ ಕಟೀಲ್, ಈಗ ಬಿಜೆಪಿಯ ಹಲವರಿಗೆ ವಿಲನ್​​​ ಪಾತ್ರಧಾರಿಯಾಗಿದ್ದಾರೆ ಎಂದು ಟೀಕಿಸಿದೆ.

ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಕತ್ತಿಮಸಿಯುತ್ತಿದ್ದ ಮೀರ್ ಸಾದಿಕ್ ಯಾರೆನ್ನುವುದು ಈಗ ತಿಳಿದಿದೆ.  ಪಕ್ಷದ ರಾಜ್ಯಾಧ್ಯಕ್ಷರಾಗಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಸಚಿವ ಯೋಗೇಶ್ವರ್ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ. ಏಕೆಂದರೆ ಸಂಚಿನ ಸೂತ್ರದಾರನೇ ನಳಿನ್ ಕುಮಾರ್ ಕಟೀಲ್ ಆಗಿದ್ದರೂ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದಕ್ಕೆ ರಾಜ್ಯ ಬಿಜೆಪಿ ಕೂಡ ಟ್ವೀಟ್​ ಮೂಲಕ ತಿರುಗೇಟು ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಹೆಸರಿನಲ್ಲಿ ಸೃಷ್ಟಿಯಾದ ನಕಲಿ ಆಡಿಯೋ ಹಿಂದಿರುವ ಹಸ್ತ, ಕಾಂಗ್ರೆಸ್ ಪಕ್ಷದ ಮಹಾನಾಯಕನದ್ದೋ ಅಥವಾ ಮೀರ್ ಸಾದಿಕ್‌ನದ್ದೋ ಎಂದು ಪ್ರಶ್ನಿಸಿದೆ. ಮಹಾನಾಯಕನ ಪ್ರಭಾವ ಕಡಿಮೆ ಮಾಡಲು ಮತ್ತು ದೆಹಲಿಯ ಮಹಾನಾಯಕಿಯನ್ನು ಮೆಚ್ಚಿಸಲು ಮೀರ್‌ ಸಾದಿಕ್‌ನಿಂದ ಈ ಆಡಿಯೋ ತಂತ್ರವೇ ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ವಿರುದ್ಧ ಪರೋಕ್ಷವಾಗಿ ಬಿಜೆಪಿ ಟ್ವೀಟಾಸ್ತ್ರ ಬಿಟ್ಟಿದೆ.

ಮಹಾನಾಯಕನ ವಿರುದ್ಧ ತೊಡೆ ತಟ್ಟುತ್ತಿರುವ ಮೀರ್ ಸಾದಿಕ್‌ ಈಗ ಕಾಂಗ್ರೆಸ್ ಮಹಾನಾಯಕಿಯ ಮೆಚ್ಚುಗೆ ಪಡೆಯಲು ಕುತಂತ್ರದ ಮೊರೆ ಹೋಗಿದ್ದಾರೆ. ಮಹಾನಾಯಕನ ಮಟ್ಟ ಹಾಕುವುದಕ್ಕೆ ಸೆಟೆದು ನಿಂತಿರುವ ಮೀರ್‌ ಸಾದಿಕ್‌ ದೆಹಲಿ ಪ್ರವಾಸದ ಮುನ್ನಾ ದಿನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರಿನಲ್ಲಿ ನಕಲಿ ಆಡಿಯೋ ಹರಿಬಿಟ್ಟಿದ್ದಾರೆ ಎಂದು ಡಿಕೆಶಿ ಮೇಲೆ ಆರೋಪ ಮಾಡಿದ ಬಿಜೆಪಿ.

ಮಹಾನಾಯಕನ ವಿರುದ್ಧ ತೊಡೆ ತಟ್ಟುತ್ತಿರುವ ಮೀರ್ ಸಾದಿಕ್‌ ಈಗ ಕಾಂಗ್ರೆಸ್ ಮಹಾನಾಯಕಿಯ ಮೆಚ್ಚುಗೆ ಪಡೆಯಲು ಕುತಂತ್ರದ ಮೊರೆ ಹೋಗಿದ್ದಾರೆ ಎನ್ನುವ ಮೂಲಕ ಕಟೀಲ್ ಆಡಿಯೋ ಪ್ರಕರಣ ಹಿಂದೆ ಕಾಂಗ್ರೆಸ್ ನಾಯಕರ ಪಿತೂರಿ ಎಂದು ಬಿಜೆಪಿ ಆರೋಪಿಸಿದೆ.

ಆಡಿಯೋ ಪ್ರಹಸನದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಯಾರೋ ಸಾಮನ್ಯರ ಆಡಿಯೋ ಅಲ್ಲ. ನಾನು ಯಾವ ಧ್ವನಿಯಲ್ಲಿ ಮಾತನಾಡ್ತಿನಿ. ಸಿದ್ದರಾಮಯ್ಯ, ಕುಮಾರಸ್ವಾಮಿ, ದೇವೇಗೌಡರು ಯಾವ ರೀತಿ ಮಾತಾಡ್ತಾರೆ ಅಂತಾ ಎಲ್ಲರಿಗೂ ಗೊತ್ತು. ಈ ಆಡಿಯೋ ನಳಿನ್ ಕುಮಾರ್ ಕಟೀಲ್ ಅವರದ್ದೇ, ಅವರ ಪಕ್ಷದ ಬೆಳವಣಿಗೆ ಬಗ್ಗೆ ಮಾತನಾಡಿದ್ದಾರೆ. ಇದು ತನಿಖೆಗೆ ಕೊಡಬೇಕು ಅಂತಾರೆ, ತನಿಖೆಗೆ ಆಫೀಸರ ನೇಮಕ ಮಾಡ್ತಾರೆ. ಅವರು ಇದನ್ನ ಫೇಕ್ ಅಂತ ಹೇಳ್ತಾರೆ. ಈ ಹಿಂದೆ ಯಡಿಯೂರಪ್ಪಂದು ಏನಾಯ್ತು ಎಂದು ಪ್ರಶ್ನಿಸಿದರು

ಇದನ್ನೂ ಓದಿ: Kateel Audio – ಯಡಿಯೂರಪ್ಪಗೆ ಬೀಸೋ ದೊಣ್ಣೆಯಿಂದ ತಪ್ಪಿಸುತ್ತಾ ‘ಕಟೀಲ್ ಆಡಿಯೋ’?

ಮಿಮಿಕ್ರಿ ಮಾಡಿದ್ದಾರೆ ಎಂದು ಸುಧಾಕರ್ ಹೇಳಿಕೆ ವಿಚಾರವಾಗಿ ವ್ಯಂಗ್ಯವಾಡಿದ ಡಿಕೆಶಿ ಅವರದ್ದು ಮಾಡಿಸೋಣ ಮಿಮಿಕ್ರಿ. ನಾವೇನು ಮಿಮಿಕ್ರಿ ಅವರನ್ನ ಇಟ್ಟುಕೊಂಡಿದ್ದೀವಾ ಎಂದರು. ಇನ್ನು ಸಿಎಂ ಯಡಿಯೂರಪ್ಪ ಬದಲಾವಣೆ ವಿಚಾರ ಬಿಜೆಪಿಗೆ ಸೇರಿದ್ದು. ಜನರು ಮಾತ್ರ ಬಿಜೆಪಿ ಕಿತ್ತೊಗೆಯ ಬೇಕು ಅಂತಾ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೆಹಲಿ ಪ್ರವಾಸ ವಿಚಾರವಾಗಿ ಮಾತನಾಡಿದ ಅವರು, ಎಲ್ಲಾ ಎಪಿಸಿಸಿ ಅಧ್ಯಕ್ಷ ರ ಜೊತೆ ರಾಹುಲ್ ಚರ್ಚೆ ಮಾಡ್ತಾ ಇದಾರೆ. ನಮ್ಮನ್ನ ಕೂಡ ಕರೆದಿದ್ದಾರೆ, ಮಾರ್ಗದರ್ಶನ ಪಡೆಯಲು ಹೋಗುತ್ತಿದ್ದೇನೆ. ಪದಾಧಿಕಾರಿಗಳ ನೇಮಕ ಚರ್ಚೆ ಆಗುತ್ತೆ. ಮುಂದಿನ ವಾರ ಉಸ್ತುವಾರಿ ಐದು ದಿನಗಳ ರಾಜ್ಯ ಪ್ರವಾಸ ಮಾಡ್ತಾರೆ. ಅವರು ಬಂದು ಹೋದ ಬಳಿಕ ಪಟ್ಟಿ ಅಂತಿಮವಾಗುತ್ತೆ. ನಾನು ಈಗಾಗಲೇ ಪಟ್ಟಿ ನೀಡಿರುವೆ ಎಂದು ತಿಳಿಸಿದರು.
Published by:Kavya V
First published: