ಬೆಂಗಳೂರು ವಿಧಾನಪರಿಷತ್ ಚುನಾವಣೆಗೆ (Vidhanaparishat Election) ಅಂತಿಮವಾಗಿ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಯಾಗಿ ಟಿ.ಎ ಶರವಣ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇಂದು ಜೆಡಿಎಸ್ (JDS) ಅಭ್ಯರ್ಥಿ ಟಿ.ಎ ಶರವಣ (T.A Sharavana), ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ (H. D Kumaraswamy), ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಜೊತೆಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ 2ನೇ ಬಾರಿಗೆ ಟಿ.ಎ ಶರವಣ ಅವರು ವಿಧಾನಪರಿಷತ್ ಗೆ ಆಯ್ಕೆ ಆಗಿದ್ದಾರೆ. ಇನ್ನು, ಶರವಣ ಅವರು ಇಂದು ಚುನಾವಣಾಧಿಕಾರಿ ವಿಧಾನಸಭೆ ಕಾರ್ಯದರ್ಶಿ ಎಂ ಕೆ ವಿಶಾಲಕ್ಷ್ಮಿ ಅವರ ಕಚೇರಿಯಲ್ಲಿ ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾನು ಸಣ್ಣ ಸಮಾಜದಿಂದ ಬಂದಿದ್ದೇನೆ:
ಇನ್ನು, ವಿಧಾನ ಪರಿಷತ್ ನಿಂದ ಜೆಡಿಎಸ್ ನಿಂದ ಅಭ್ಯರ್ತೀಯಾಗಿ ಸ್ಪರ್ಧಿಸುತ್ತಿರುವ ಟಿ ಎ ಶರವಣ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಂತರ ಮಾಧ್ಯುಮಗಳೊಂದಿಗೆ ಮಾತನಾಡಿದ ಅವರು, ‘ನನ್ನ ಪಕ್ಷ ನಿಷ್ಠೆಯನ್ನು ನೋಡಿಕೊಂಡು ನನಗೆ ಎರಡನೇ ಬಾರಿ ವಿಧಾನಪರಿಷತ್ ನಲ್ಲಿ ಸೇವೆ ಸಲ್ಲಿಸಲು ಅವಕಾಶ ಕೊಟ್ಟಿದ್ದಾರೆ. ಹೀಗಾಗಿ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿಗಳಾದ ಎಚ್ ಡಿ ದೇವೇಗೌಡ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಸಣ್ಣ ಸಮಾಜದಿಂದ ಬಂದಿದ್ದೇನೆ, ಹಾಗಿದ್ದರೂ ಕುಮಾರಸ್ವಾಮಿ ಹಾಗೂ ಜೆಡಿಎಸ್ ಅವರು ನನಗೆ ಬೆಳೆಯಲು ಅವಕಾಶ ಕೊಟ್ಟಿದ್ದಾರೆ.
ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸದಿಕೊಳ್ಳುತ್ತೇನೆ. ಅಲ್ಲದೇ ಇದೀಗ ನನ್ನ ಜವಾಬ್ದಾರಿ ಇನ್ನಷ್ಟು ಜಾಸ್ತಿಯಾಗಿದ್ದು, ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪಟ್ಟಾಭಿಷೇಕ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ.
ಇದನ್ನೂ ಓದಿ: Congress ಇಟಾಲಿಯನ್ ಶಿಕ್ಷಣ ನೀತಿ ತಂದ್ರೆ ಅದನ್ನ ನಾಗ್ಪುರ ನೀತಿಯಾಗಿ ಬದಲಿಸುತ್ತೇವೆ: BC Nagesh
ಈಗಾಗಲೇ ರಾಜ್ಯದ ಜನತೆ ಬಿಜೆಪಿ ಹಾಗೂ ಕಾಂಗ್ರೆಸ್ ನ್ನು ತಿರಸ್ಕಾರ ಮಾಡುತ್ತಿದ್ದಾರೆ. ಹೀಗಾಗಿ ಮುಂದಿನ ಬಾರಿ ರಾಜ್ಯದ ಜನತೆ ಖಂಡಿತಾವಗಿಯೂ ಜೆಡಿಎಸ್ ಅನ್ನು ಕೈ ಹಿಡಿಯುತ್ತದೆ. ಅಲ್ಲದೇ ಬೆಂಗಳೂರಿನಲ್ಲಿ ಮಳೆಯಿಂದ ಜನರು ತೊಂದರೆ ಒಳಗಾಗುತ್ತಿದ್ದಾರೆ. ಆದರೆ ಸರ್ಕಾರ ಬಿಬಿಎಂಪಿ ಚುನಾವಣೆ ನಡೆಸದೆ ಅಧಿಕಾರಿಗಳ ಮೂಲಕ ಆಡಳಿತ ನಡೆಸಿ ದುರುಪಯೋಗ ಮಾಡುತ್ತಿದ್ದಾರೆ. ಜೊತೆಗೆ ಅಭಿವೃದ್ಧಿ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ, ಜನರು ಇದನ್ನು ಪ್ರಶ್ನೆ ಮಾಡುತ್ತಿದ್ದಾರೆ. ಇದರಿಂದಾಗಿ ಬಿಬಿಎಂಪಿ ಚುಕ್ಕಾಣಿ ಹಿಡಿಯಲು ಜೆಡಿಎಸ್ ಸಜ್ಜಾಗಿದೆ ಎಂದು ಹೇಳಿದ್ದಾರೆ.
ಸಿದ್ದು ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ:
ಇನ್ನು, ಶರವಣ ಅವರು ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು, ‘ಶರವಣ ಅವರು ಪಕ್ಷ ಸಂಘಟನೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಪಕ್ಷದಲ್ಲಿ ಜೊತೆಯಾಗಿಯೇ ಕೆಲಸ ಮಾಡುತ್ತಿದ್ದರು. ಅಲ್ಲದೇ ಪಕ್ಷವನ್ನ ಪರಿಣಾಮಕಾರಿಯಾಗಿ ಸಮರ್ಥಿಸಿಕೊಳ್ಳುತ್ತಿದ್ದರು. ಹೀಗಾಗಿ ಬಸವನಗುಡಿ, ಚಿಕ್ಕಪೇಟೆ ಎರಡೂ ಕ್ಷೇತ್ರಗಳನ್ನ ಗೆಲ್ಲಿಸಿಕೊಂಡು ಬರಬೇಕು. ಈ ನಿಟ್ಟಿನಲ್ಲಿ ಅವರಿಗೆ ಟಾಸ್ಕ್ ನೀಡಲಾಗಿದೆ‘ ಎಂದು ಹೇಳಿದ್ದಾರೆ.
ಇದೇ ವೇಖೆ ಕಾಂಗ್ರೆಸ್ ಪಕ್ಷದ ಕುರಿತು ಮಾತನಾಡಿದ ಕುಮಾರಸ್ವಾಮಿ ಅವರು, ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೇ ಲಘುವಾಗಿ ಮಾತನಾಡುತ್ತಿದ್ದಾರೆ. ಬಿಜೆಪಿ ಜೊತೆ ಕೈಜೋಡಿಸಿರುವ ಇವರು ಯಾವ ಜಾತ್ಯತೀತತೆ ಉಳಿಸಿಕೊಂಡಿದ್ದಾರೆ ಎಂದು ಅಣಕಿಸುತ್ತಾರೆ. ಕೇವಲ ಪಕ್ಷವನ್ನ ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಿಂದ ಬಿಜೆಪಿ ಜೊತೆ ಹೋಗಬೇಕಾಯಿತು. ಇವರು ಮಡಿವಾಳರು, ಅಲ್ಪಸಂಖ್ಯಾತರ ಸಮಾವೇಶ ಮಾಡುತ್ತಾರೆ. ಹಾಗಿದ್ದರೆ ಇವರೇನು ಜಾತ್ಯಾತೀತರಾ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: MLC Election; ಲಕ್ಷ್ಮಣ ಸವದಿಗೆ ಜಾಕ್ ಪಾಟ್: ಬಿಜೆಪಿ ಪಟ್ಟಿ ರಿಲೀಸ್
ನಾಮಪತ್ರ ಸಲ್ಲಿಸಲು ಹೆಲಿಕಾಪ್ಟರ್ನಲ್ಲಿ ಬಂದ ಬಿಜೆಪಿ ಅಭ್ಯರ್ಥಿ:
ಇನ್ನು, ಈ ಬಾರಿ ವಿಧಾನ ಪರಿಷತ್ ಚುನಾವಣೆ ಕಾವು ಈಗಿನಿಂದಲೇ ಹೆಚ್ಚಾಗಿದೆ. ಇದರ ನಡುವೆ ಬಿಜೆಪಿ ತನ್ನ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ವಿಶೇಷವಾಗಿ ಬಿಜೆಪಿ ಅಭ್ಯರ್ಥಿಯಾದ ಹೇಮಲತಾ ನಾಯ್ಕ್ ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಆಗಮಿಸಿದರು. ಹೌದು, ಅಂತಿಮ ಪಟ್ಟಿ ಬಿಡುಗಡೆ ಆಗುವ ವೇಳೆ ಹೇಮಲತಾ ಅವರು ಕೊಪ್ಪಳದಲ್ಲಿದ್ದರು. ಹೀಗಾಗಿ ನಾಮಪತ್ರ ಸಲ್ಲಿಸಲು ಇಂದೇ ಕೊನೆಯ ದಿನವಾಗಿದ್ದರಿಂದ ಹೇಮಲತಾ ಅವರು ಹೆಲಿಕಾಪ್ಟರ್ ನಲ್ಲಿ ಆಗಮಿಸಿ ಮಧ್ಯಾಹ್ನ 2:15ಕ್ಕೆ ಚುನಾವಣಾಧಿಕಾರಿ ವಿಧಾನಸಭೆ ಕಾರ್ಯದರ್ಶಿ ಎಂ ಕೆ ವಿಶಾಲಕ್ಷ್ಮಿ ಅವರ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ